
ಉಡುಪಿ, ಮಾರ್ಚ್ 29: ನಿಂತಿದ್ದ ಕಂಟೈನರ್‌ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದd ಬಳಿ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಮಮತಾ(36) ಹಾಗೂ ಮಗಳು ಧೃತಿಕಾ(14) ಪ್ರಾಣ ಬಿಟ್ಟಿದ್ದು, ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ ನಿವಾಸಿಗಳು ಎಂಬುದು ತಿಳಿದುಬಂದಿದೆ.
ಬೆಂಗಳೂರನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಬಳಿಕ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಗಾಯಾಳು ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಕಾರು ಚಾಲಕ ಕಿರಣ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಹೊಸಕೋಟೆ-ಕೋಲಾರ ಹೆದ್ದಾರಿಯಲ್ಲಿ ಟ್ರಕ್ಗೆ ಗುದ್ದಿ ಹೊತ್ತಿ ಉರಿದ ಕಾರು; ಚಾಲಕ ಬದುಕಿದ್ದೇ ಪವಾಡ!
ರಸ್ತೆ ದಾಟುತ್ತಿದ್ದ ಪಾದಾಚಾರಿ ಮಹಿಳೆಗೆ ಬಸ್ ಡಿಕ್ಕಿಯಾದ ಪರಿಣಾಮ ಆಕೆ ದಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕುಂಚಿಗನಾಳ್ ಬಳಿ ನಡೆದಿದೆ. ಅಪಘಾತದ ತೀವ್ರತೆಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ. ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.