ಶೌಚಾಲಯದಲ್ಲಿ ವಿಡಿಯೋ ಮಾಡಿದ ವಿದ್ಯಾರ್ಥಿನಿಯೊಬ್ಬಳ ತಂದೆ ಪಿಎಫ್​ಐ ಕಾರ್ಯಕರ್ತ: ಸುನಿಲ್ ಕೆಆರ್

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣದ ಮೂವರು ಆರೋಪಿಗಳ ಪೈಕಿ ಒಬ್ಬಳ ತಂದೆ ನಿಷೇಧಿತ ಪಿಎಫ್​ಐ ಕಾರ್ಯಕರ್ತ ಎಂಬ ಆರೋಪ ಕೇಳಿಬಂದಿದೆ.

ಶೌಚಾಲಯದಲ್ಲಿ ವಿಡಿಯೋ ಮಾಡಿದ ವಿದ್ಯಾರ್ಥಿನಿಯೊಬ್ಬಳ ತಂದೆ ಪಿಎಫ್​ಐ ಕಾರ್ಯಕರ್ತ: ಸುನಿಲ್ ಕೆಆರ್
ಬಜರಂಗದಳ ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್.
Edited By: Rakesh Nayak Manchi

Updated on: Aug 04, 2023 | 4:58 PM

ಉಡುಪಿ, ಆಗಸ್ಟ್ 4: ನೇತ್ರಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣದ ಮೂವರು ಆರೋಪಿಗಳಲ್ಲಿ ಶಫಾಳ ತಂದೆ ನಿಷೇಧಿತ ಪಿಎಫ್​ಐ (PFI) ಕಾರ್ಯಕರ್ತರ ಎಂದು ಬಜರಂಗದಳ(Bajrang Dal) ದಕ್ಷಿಣ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್. ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ವ್ಯವಸ್ಥಿತ ಷಡ್ಯಂತ್ರ ಕಾಣಿಸುತ್ತಿದೆ ಎಂದರು.

ವೀಡಿಯೋ ಮಾಡಿ ಮುಸಲ್ಮಾನರಿಗೆ ಕಳುಹಿಸಿ ಹೆದರಿಸಲಾಗುತ್ತಿದೆ. ಬ್ಲ್ಯಾಕ್ ಮೇಲ್ ಜಿಹಾದ್ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು. ಪಿಎಫ್​ಐ ಪ್ರಾಯೋಜಿತ ಷಡ್ಯಂತ್ರ ಇದರ ಹಿಂದೆ ಇದೆ ಎಂದು ಆರೋಪಿಸಿದ ಸುನಿಲ್ ಅವರು, ಪ್ರಕರಣದ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿದರು.

ಇದನ್ನೂ ಓದಿ: ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

“ಪ್ರಕರಣದಲ್ಲಿ ದೊಡ್ಡ ಪಿತೂರಿ ಇದೆ. ಭಾಗಿಯಾಗಿರುವ ಮೂವರು ಬಾಲಕಿಯರಲ್ಲಿ ಒಬ್ಬಳ ತಂದೆ ನಿಷೇಧಿತ ಸಂಘಟನೆಯಾದ ಪಿಎಫ್‌ಐನ ಕಾರ್ಯಕರ್ತ. ಮತ್ತೊಬ್ಬ ವಿದ್ಯಾರ್ಥಿನಿ ಹಸುವಿನ ಮಾಂಸ ಮಾರಾಟ ಮಾಡುತ್ತಿದ್ದ ಹೋಟೆಲ್ ಮಾಲೀಕನ ಮಗಳು. ಈ ಮೂವರು ವಿದ್ಯಾರ್ಥಿಗಳು ಜಿಹಾದ್ ಮಾಡುತ್ತಿದ್ದ ಕುಟುಂಬದಿಂದ ಬಂದವರು. ಆರು ತಿಂಗಳಿಂದ ಇಂತಹ ವಿಡಿಯೋ ರೆಕಾರ್ಡಿಂಗ್ ನಡೆಯುತ್ತಿತ್ತು ಎಂದು ಕಾಲೇಜಿನ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ” ಎಂದು ಸುನಿಲ್ ಹೇಳಿದರು.

ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್‌ವೆಲ್ ಮತ್ತು ದಿನೇಶ್ ಮೆಂಡನ್ ಅವರ ದ್ವೇಷದ ಭಾಷಣದ ಆರೋಪದ ಮೇಲೆ ಉಡುಪಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಅನ್ನು ಭಜರಂಗದಳದ ಮುಖಂಡರು ಖಂಡಿಸಿದ್ದಾರೆ.

ಜುಲೈ 28 ರಂದು ನಡೆದ ರ್ಯಾಲಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ವೀಣಾ ಶೆಟ್ಟಿ ವಿರುದ್ಧ ಉಡುಪಿ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ. ಉಡುಪಿ ಕಾಲೇಜು ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಮೂವರು ವಿದ್ಯಾರ್ಥಿಗಳು ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us