ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಭಾಗದ ಬಿಜೆಪಿ ಶಾಸಕರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ನೀಡಿದೆ.

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ
ಖಾಸಗಿ ಕಾಲೇಜು (ಎಡಚಿತ್ರ) ರಾಜ್ಯಪಾಲರಿಗೆ ದೂರು (ಬಲಚಿತ್ರ)
Follow us
Sunil MH
| Updated By: ವಿವೇಕ ಬಿರಾದಾರ

Updated on: Aug 04, 2023 | 2:02 PM

ಬೆಂಗಳೂರು: ಉಡುಪಿಯ (Udupi) ಖಾಸಗಿ ಕಾಲೇಜಿನ (Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಭಾಗದ ಬಿಜೆಪಿ (BJP) ಶಾಸಕರ ನಿಯೋಗ ಇಂದು (ಆ.04) ರಾಜ್ಯಪಾಲರಿಗೆ ದೂರು ನೀಡಿದೆ. ಪ್ರಕರಣದ ತನಿಖೆಯನ್ನು ಎಸ್​​ಐಟಿಗೆ ನೀಡುವಂತೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗ ರಾಜಭವನದಲ್ಲಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಎಸ್​ಐಟಿ ತನಿಖೆಗೆ ನೀಡುವಂತೆ ಹಿಂದೂ ಸಂಘಟನೆಗಳ ಒತ್ತಾಯ

ಇನ್ನು ಪ್ರಕರಣವನ್ನು ಎಸ್​ಐಟಿ ತನಿಖೆಗೆ ವಹಿಸುವಂತೆ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿದ್ದವು. ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಸಂಬಂಧ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಲು ಸಿದ್ಧರಾಗಿ; ಉಡುಪಿಯಲ್ಲಿ ಮಹಿಳೆಯರಿಗೆ ಶರಣ್ ಪಂಪ್​​​ವೆಲ್ ಕರೆ

ತನಿಖಾಧಿಕಾರಿ ಬದಲಾವಣೆ

ಪ್ರಕರಣವನ್ನು ಮುಂದಿಟ್ಟುಗೊಂಡು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ಸಂಬಂಧ ಉಡುಪಿಯಲ್ಲಿ ಬೃಹತ್​ ಪ್ರತಿಭಟನೆ ಮಾಡಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಒತ್ತಾಯಿಸಿತ್ತು. ಅಲ್ಲದೇ ಆರಂಭದಿಂದ ಪ್ರಕರಣದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್​ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಹೀಗಾಗಿ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್​​​​​​ಪಿ ಅಕ್ಷಯ್​ ನೇಮಕ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು