ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ – ಯಶ್‌ಪಾಲ್ ಸುವರ್ಣ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಉಡುಪಿ: ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ - ಯಶ್‌ಪಾಲ್ ಸುವರ್ಣ
ಶಾಸಕ ಯಶ್​ಪಾಲ್​ ಸುವರ್ಣ
Follow us
H P
| Updated By: ವಿವೇಕ ಬಿರಾದಾರ

Updated on:Jul 28, 2023 | 2:02 PM

ಉಡುಪಿ: ಉಡುಪಿಯ (Udupi) ಖಾಸಗಿ ಕಾಲೇಜಿನ (Private College) ಶೌಚಾಲಯದಲ್ಲಿ ವಿದ್ಯಾರ್ಥಿನಿಯ (Student) ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕ್ಯಾಮರಾ ಇಟ್ಟ ವಿದ್ಯಾರ್ಥಿಗಳು, ನಾಳೆ ಬಾಂಬ್ ಇಡುತ್ತಾರೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ (Yashpal Suvarna) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ರರಣ ಸಂಬಂಧ ರಾಜ್ಯ ಬಿಜೆಪಿ ನಾಯಕರು ಉಡುಪಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಕ್ಕಳಾಟ ಎಂದಿದ್ದಾರೆ. ಅವರ ಮಗ ಲಿಂಗ ಬದಲಾಯಿಸಿಕೊಂಡಿದ್ದು ಮಕ್ಕಳಾಟನಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ಘಟಕ ಇಂದು (ಜು.28) ಕಡಿಯಾಳಿ ಬಿಜೆಪಿ ಕಛೇರಿಯಿಂದ ಎಸ್ಪಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು. ಈ ವೇಳೆ ಮಾತನಾಡಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಮಿಸ್ಟೇಕ್ ಆಗಿ ಕ್ಯಾಮೆರಾ ಬಂತು ಅಂತಾ ಹೇಳಿದ್ದಾರೆ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ. ನಿನ್ನೆ ಖುಷ್ಬೂ ಅಕ್ಕನಿಗೆ ಸ್ವಲ್ಪ ಗಡಿಬಿಡಿಯಾಗಿದೆ. ಅವರು ಹಿಡನ್ ಕ್ಯಾಮೆರಾ ಇರಲಿಲ್ಲ ಅಂತ ಹೇಳಿದರು. ನಾವು ಹಿಡನ್ ಕ್ಯಾಮೆರಾ ಇತ್ತು ಅಂತಾ ಹೇಳಿಲ್ಲ. ಅವರಿಗೆ ಮಾಹಿತಿ ನೀಡಿದವರು ತಪ್ಪು ಮಾಹಿತಿ ನೀಡಿದ್ದಾರೆ. ಹಿಂದೂ ಸಂಘಟನೆಗಳು 25 ವರ್ಷಗಳಿಂದ ಜಿಹಾದಿ ನೆಟ್​ವರ್ಕ್ ಬಗ್ಗೆ ಹೇಳುತ್ತಿದೆ. ಈಗ ನಾವು ಹೇಳಿದ ಮಾತುಗಳೆಲ್ಲ ನಿಜವಾಗಿದೆ. ಉಡುಪಿ ಮೊಬೈಲ್ ಪ್ರಕರಣವನ್ನು ಎನ್​ಐಎಗೆ ವರ್ಗಾಯಿಸಬೇಕು. ಎನ್​ಐಎ ಈ ಪ್ರಕರಣವನ್ನು ಬಯಲಿಗೆಳೆಯಲಿದೆ ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕಾಲೇಜಿನ ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮರಾ ಇರಲಿಲ್ಲ; ಖುಷ್ಬೂ ಸುಂದರ್

ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ

ಸರ್ಕಾರ ಪೊಲೀಸರ ಕೈ ಕಟ್ಟಿ ಹಾಕಿದೆ.  ಪೊಲೀಸ್ ವರಿಷ್ಠರ ಕೈ ಕಟ್ಟಿ ಹಾಕಿರೋದು ದೃಢ ಆಗಿದೆ. ಹೆಣ್ಣುಮಕ್ಕಳು ತಲೆ ತಗ್ಗಿಸುವ ಪ್ರಕರಣ ನಡೆದಿದೆ ಅಂದರೇ ಪೊಲೀಸ್ ವರಿಷ್ಠರ ನೇತೃತ್ವದಲ್ಲಿ ತನಿಖೆ ನಡೆಸಬೇಕಿತ್ತು. ಮಹಿಳೆಯರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಬಹಳ ದಿನ ಈ ಘಟನೆ ಮುಚ್ಚಿಡಲು ಸಾಧ್ಯವಿಲ್ಲ. ಹೆಣ್ಣುಮಕ್ಕಳನ್ನು ಯಾರಾದರೂ ಬಳಸಿಕೊಂಡಿರಬಹುದು. ಲವ್ ಜಿಹಾದ್ ಅಥವಾ ಬೇರೆ ಜಿಹಾದ್‌ಗೆ ಬಳಕೆ ಮಾಡಿಕೊಂಡಿರಬಹುದು. ಇದರ ಕೂಲಂಕುಷ ತನಿಖೆ ಆಗಬೇಕು. ಎನ್​ಐಎ ತನಿಖೆ ಕೂಡ ನಡೆಯೋದು ಉತ್ತಮ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಇನ್ನು ಪ್ರತಿಭಟನಾ ಮೆರವಣಿಗೆಯಲ್ಲಿ ಶಾಸಕರಾದ ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ,ಕಿರಣ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಭಾಗಿಯಾಗಿದ್ದರು. ಹಾಗೇ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 1:31 pm, Fri, 28 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ