AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಕಾಲೇಜಿನ ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮರಾ ಇರಲಿಲ್ಲ; ಖುಷ್ಬೂ ಸುಂದರ್

ನಮ್ಮ ವಿಚಾರಣೆ ಇನ್ನೂ ಮುಗಿದಿಲ್ಲ, ಇದು ಆರಂಭ ಮಾತ್ರವಾಗಿದೆ. ಈ ಹಂತದಲ್ಲಿ ಹೆಚ್ಚಿನ ವಿವರ ಬಹಿರಂಗಪಡಿಸುವುದಿಲ್ಲ. ಈಗಲೇ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಖುಷ್ಬೂ ಸುಂದರ್ ತಿಳಿಸಿದ್ದಾರೆ.

Udupi News: ಕಾಲೇಜಿನ ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮರಾ ಇರಲಿಲ್ಲ; ಖುಷ್ಬೂ ಸುಂದರ್
ಖುಷ್ಬೂ ಸುಂದರ್Image Credit source: PTI
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma|

Updated on: Jul 27, 2023 | 4:25 PM

Share

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಪ್ರಕರಣದ ವಿಚಾರಣೆಗೆ ನಗರಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ ಖುಷ್ಬೂ ಸುಂದರ್ (Khushbu Sundar) ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ವದಂತಿಗಳನ್ನು ಹರಡಬಾರದು ಎಂದು ಮನವಿ ಮಾಡಿದರು. ಕಾಲೇಜಿನ ಶೌಚಾಲಯದಲ್ಲಿ ಯಾವ ಹಿಡನ್ ಕ್ಯಾಮರಾ ಇರಲಿಲ್ಲ ಎಂದು ಅವರು ಹೇಳಿದರು.

ನಮ್ಮ ವಿಚಾರಣೆ ಇನ್ನೂ ಮುಗಿದಿಲ್ಲ, ಇದು ಆರಂಭ ಮಾತ್ರವಾಗಿದೆ. ಈ ಹಂತದಲ್ಲಿ ಹೆಚ್ಚಿನ ವಿವರ ಬಹಿರಂಗಪಡಿಸುವುದಿಲ್ಲ. ಈಗಲೇ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಖುಷ್ಬೂ ತಿಳಿಸಿದ್ದಾರೆ.

ಎಷ್ಟು ದಿನ ಉಡುಪಿಯಲ್ಲೇ ಇರುತ್ತೇನೆ ಎಂದು ಈಗಲೇ ಹೇಳಲು ಆಗುವುದಿಲ್ಲ. ಕಾಲೇಜು ಆಡಳಿತ ಮಂಡಳಿಯಿಂದ‌ ಎಲ್ಲಾ ಮಾಹಿತಿ ಪಡೆದಿದ್ದೇನೆ ಎಂದು ಅವರು ಹೇಳಿದ್ದಾರೆ. ಇದಕ್ಕೂ ಮುನ್ನ ಅವರು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಮತ್ತು ಇತರ ಪೊಲೀಸರಿಂದ ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿದ್ದರು.

ಉಡುಪಿ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಘಟನೆ ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಯಗೊಳಿಸಬಾರದು. ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗುವುದಿಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Udupi News: ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ; ಉಡುಪಿ ಎಸ್​ಪಿಯಿಂದ ಮಾಹಿತಿ ಪಡೆದ ಖುಷ್ಬೂ ಸುಂದರ್

ಖುಷ್ಬೂ ಸುಂದರ್ ಅವರು ಉಡುಪಿಗೆ ಭೇಟಿ ನೀಡಿದ ವಿಚಾರ ಕೂಡ ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿತ್ತು. ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಉಡುಪಿಗೆ ಭೇಟಿ ನೀಡುವ ಬದಲು ಮಣಿಪುರಕ್ಕೆ ತೆರಳಬೇಕಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ಟೀಕಿಸಿದ್ದರು. ಇವುಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಖುಷ್ಬೂ, ನಮ್ಮದು ಸ್ವಾಯತ್ತ ಸಂಸ್ಥೆ. ಸ್ತ್ರೀಯರಿಗಾಗಿ ನಾವು ಕೇಂದ್ರ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?