Agumbe Ghat: ಆಗುಂಬೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಬದಲಿಗೆ ಮಾರ್ಗಕ್ಕಾಗಿ ಈ 2 ರಸ್ತೆ ಬಳಸಿ

| Updated By: ರಮೇಶ್ ಬಿ. ಜವಳಗೇರಾ

Updated on: Jul 27, 2023 | 11:43 AM

ಕರಾವಳಿ ಭಾಗದಲ್ಲಿ ನಿಂತರಂತರವಾಗಿ ಮಳೆ ಸುರಿಯುತ್ತಿದ್ದರಿಂದ ಆಗುಂಬೆ ಘಾಟ್​ನಲ್ಲಿ ರಸ್ತೆ ಬಿರುಕು ಬಿಟ್ಟಿದೆ. ಈ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

Agumbe Ghat: ಆಗುಂಬೆ ಘಾಟ್​ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಬದಲಿಗೆ ಮಾರ್ಗಕ್ಕಾಗಿ ಈ 2 ರಸ್ತೆ ಬಳಸಿ
ಆಗುಂಬೆ ಘಾಟ್
Follow us on

ಉಡುಪಿ, (ಜುಲೈ 27): ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ವಾರದಿಂದ ನಿರಂತರವಾಗಿ ಭಾರಿ ಮಳೆಯಾಗುತ್ತಿರುವ (Rain) ಹಿನ್ನೆಲೆಯಲ್ಲಿ ಆಗುಂಬೆ ಘಾಟ್​ನಲ್ಲಿ (Agumbe Ghat) ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಇಂದಿನಿಂದ ಅದರೆ ಜುಲೈ 27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದು ಉಡುಪಿ ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದೆ. ಆಗುಂಬೆ ಘಾಟ್​​ನ 6ನೇ ತಿರುವಿನ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ 6ನೇ ತಿರುವಿನಲ್ಲಿ ರಸ್ತೆಯ ಪಕ್ಕದಲ್ಲಿಯೇ ಮಣ್ಣು ಕುಸಿದಿದ್ದು, ಭಾರಿ ವಾಹನ ಸಂಚಾರದಿಂದ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಗಳಿವೆ. ಹೀಗಾಗಿ ಈ ಮಾರ್ಗದಲ್ಲಿ ಬಸ್​, ಲಾರಿ ಸೇರಿದಂತೆ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಬದಲಿ ಮಾರ್ಗ ಬಳಸುವಂತೆ ಜಿಲ್ಲಾಡಳಿತ ಸುತ್ತೋಲೆ ಹೊರಡಿಸಿದೆ.

ಇದನ್ನೂ ಓದಿ: Karnataka Rains: ಜುಲೈ 31ರಿಂದ ಮಳೆಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಬಸ್​, ಲಾರಿ ಸೇರಿದಂತೆ ಭಾರಿ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸಿದೆ. ತೀರ್ಥಹಳ್ಳಿ-ಆಗುಂಬೆ-ಮಾಳಾಘಾಟ್-ಕಾರ್ಕಳ-ಉಡುಪಿ ಅಥವಾ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಕುಂದಾಪುರ-ಉಡುಪಿ ಮಾರ್ಗ ಬಳಸಬಹುದು ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗದ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಅವರ ಮಾಹಿತಿ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸ್ಪಷ್ಟಪಡಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 11:32 am, Thu, 27 July 23