AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ

ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಪೊಲೀಸರು 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ರಾಮಣ್ಣ ಹಾಗೂ ಇತರರು ಹಸುವನ್ನು ಕೊಂದು ಮಾಂಸ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವ ಊಹಾಪೋಹಗಳನ್ನು ಪೋಸ್ಟ್​ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ
ಬಂಧಿತ ಆರೋಪಿಗಳು ಮತ್ತು ಎಸ್​ಪಿ ಹರಿರಾಮ್ ಶಂಕರ್‌
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jun 30, 2025 | 8:41 PM

Share

ಉಡುಪಿ, ಜೂನ್​ 30: ಬ್ರಹ್ಮಾವರ (Brahmavara) ತಾಲೂಕು ಕುಂಜಾಲುವಿನಲ್ಲಿ ಹಸುವಿನ (Cow) ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಉಡುಪಿ (Udupi) ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ರಾಮ ಮಂದಿರದ ಬಳಿ ಶನಿವಾರ (ಜೂ.29) ತಡರಾತ್ರಿ ಗೋವಿನ ರುಂಡ ಪತ್ತೆಯಾಗಿತ್ತು.

ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಅವರು ನಾಲ್ಕು ತಂಡಗಳನ್ನು ರಚಿಸಿದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಘಟನೆ ನಡೆದು 24 ಗಂಟೆಯೊಳಗಾಗಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ ಸಂಬಂಧ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್‌ ಮಾತನಾಡಿ, ಕುಂಜಾಲು ಜಂಕ್ಷನ್‌ನಲ್ಲಿ ಹಸುವಿನ ರುಂಡ, ದೇಹದ ಇತರೆ ಭಾಗ ಪತ್ತೆಯಾಗಿತ್ತು. ಕುಂಜಾಲು ಗ್ರಾಮದ ನಿವಾಸಿ ರಾಮಣ್ಣ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಕೇಶವ್ ಎಂಬುವವರು ಹಸು ನೋಡಿಕೊಳ್ಳಲು ಆಗುತ್ತಿಲ್ಲವೆಂದು ರಾಮಣ್ಣಗೆ ನೀಡಿದ್ದರು ಎಂದು ತಿಳಿಸಿದರು.

ಇದನ್ನೂ ಓದಿ
Image
ಹೆತ್ತಕರುಳಿಗೆ ಕೊಳ್ಳಿ ಇಟ್ಟು ಎಸ್ಕೇಪ್ ಆಗಿದ್ದ ಕಟುಕ ಮಗ ಉಡುಪಿಯಲ್ಲಿ ಸಿಕ್ಕ
Image
ಉಡುಪಿ: ಬಾಂಬ್ ಬೆದರಿಕೆ ಹಾಕುತ್ತಿದ್ದಾಕೆ ಕೊನೆಗೂ ಪೊಲೀಸ್ ಬಲೆಗೆ
Image
ಮಹಿಳೆಯ ಪ್ರಾಣ ತೆಗೆದ ಮೊಬೈಲ್: ಪತ್ನಿಯನ್ನೇ ಕೊಂದ ಪತಿ, ಮಕ್ಕಳು ಅನಾಥ
Image
ದ.ಕ ಎಸ್ಪಿಗೆ ಬಿಸಿ ತುಪ್ಪವಾದ ಹಿಂದೂಗಳ ಮನೆಗೆ ಮಧ್ಯರಾತ್ರಿ ರೇಡ್ ಪ್ರಕರಣ

ಸಂದೇಶ್ ಎಂಬವರ ಸ್ವಿಫ್ಟ್ ಕಾರಿನಲ್ಲಿ ಹಸುವನ್ನು ಸಾಗಾಟ ಮಾಡಲಾಗಿತ್ತು. ಕ್ವಾರಿ ಬಳಿ ಆರೋಪಿಗಳಾದ ಪ್ರಸಾದ್, ನವೀನ್ ಮತ್ತು ರಾಮಣ್ಣ ಮೂವರು ಸೇರಿಕೊಂಡು ಹಸು ಕಡಿದಿದ್ದರು. ಬಳಿಕ, ಹಸುವಿನ ದೇಹವನ್ನು ದ್ವಿಚಕ್ರ ವಾಹನದಲ್ಲಿ ತೆಗೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ತಲೆ ರಾಮ ಮಂದಿರದ ಬಳಿ ಬಿದ್ದಿದೆ. ಆರೋಪಿಗಳು ಉದ್ದೇಶ ಪೂರ್ವಕವಾಗಿ ಹಸುವಿನ ರುಂಡ ದೇವಸ್ಥಾನದ ಬಳಿ ಇಟ್ಟಿರಲಿಲ್ಲ. ಸಾಗಾಟದ ವೇಳೆ ಆಕಸ್ಮಿಕವಾಗಿ ಹಸುವಿನ ತಲೆ ಬಿದ್ದಿದೆ. ಆರೋಪಿಗಳು ಹಸು ದೇಹ ಸಾಗಿಸಲು ಬಳಸಿದ್ದ ಸ್ಕೂಟಿ, ಕಾರು ವಶಕ್ಕೆ ಪಡೆದಿದ್ದೇವೆ ಎಂದರು.

ಇದನ್ನೂ ಓದಿ: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿ ಕೆಲಸ ಕಳೆದುಕೊಂಡ ಪೊಲೀಸರು

ಕೇಸ್ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಊಹಾಪೋಹ ಹಬ್ಬಿಸಲಾಗಿತ್ತು. ಸೂಕ್ಷ್ಮ ವಿಚಾರಗಳ ಬಗ್ಗೆ ಕೋಮು ಸೂಕ್ಷ್ಮದ ಪೋಸ್ಟ್ ಹಾಕಬೇಡಿ. ಕರಾವಳಿ ಭಾಗದಲ್ಲಿ ಈ ರೀತಿಯ ಪ್ರಕರಣಗಳು ಕೊಲೆ ಪ್ರಕರಣದಷ್ಟೇ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಮುಸ್ಲಿಂ ಮುಖಂಡರಿಂದ ಎಸ್​ಪಿಗೆ ಮನವಿ

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದರು. “ಜಿಲ್ಲಾ ಮುಸ್ಲಿಂ ಒಕ್ಕೂಟದಿಂದ ಮನವಿ ನೀಡಿದ್ದೇವೆ. ಕುಂಜಾಲು ಜಮಾತಿನವರು ಕೂಡ ಇಲ್ಲಿ ಇದ್ದೇವೆ. ಹಸುವನ್ನು ಕೊಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಮನವಿ ಮಾಡಿದ್ದೇವೆ. ಮುಸ್ಲಿಂ ಸಮುದಾಯದ ಜಿಲ್ಲಾ ಮುಖಂಡರಿಂದ ಅಗ್ರಹಿಸಾಲಾಗಿದೆ. ಇಂತಹ ಘಟನೆಯಾದಾಗ ಮುಸ್ಲಿಮರ ಮೇಲೆ ಆರೋಪ ಬರುತ್ತೆ. ಹೀಗಾಗಿ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದೇವೆ” ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ತಾಜುದ್ದೀನ್ ಹೇಳಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ