AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಗ್ಯಾಂಗ್​ ವಾರ್​: 3 ಪೊಲೀಸರಿಗೆ ಶರಣು, ಬೆಂಗಳೂರಿಗೂ ಹಬ್ಬಿದೆ ಆರೋಪಿಗಳ ಲಿಂಕ್​

ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಒಂದೆ ಗುಂಪಿನ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಈ ವಾರ್​ನಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸರಿಗೆ ಶರಣಾಗಿದ್ದಾರೆ.

ಉಡುಪಿ ಗ್ಯಾಂಗ್​ ವಾರ್​: 3 ಪೊಲೀಸರಿಗೆ ಶರಣು, ಬೆಂಗಳೂರಿಗೂ ಹಬ್ಬಿದೆ ಆರೋಪಿಗಳ ಲಿಂಕ್​
ಉಡುಪಿ ಗ್ಯಾಂಗ್​ ವಾರ್​ ಆರೋಪಿಗಳು
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:May 26, 2024 | 1:42 PM

Share

ಉಡುಪಿ, ಮೇ 26: ಗ್ಯಾಂಗ್​ವಾರ್ (Udupi Gang War) ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳು ಇಂದು (ಮೇ 26) ಕಾಪು ಪೊಲೀಸರಿಗೆ (Police) ಶರಣಾಗಿದ್ದಾರೆ. ಮೂವರು ಅರೋಪಿಗಳನ್ನು ಕಾಪು ಪೋಲೀಸರು ಉಡುಪಿ (Udupi) ನಗರ ಪೋಲಿಸರಿಗೆ ಒಪ್ಪಿಸಿದ್ದಾರೆ. ಗರುಡ ಗ್ಯಾಂಗ್​ನ ಮಜೀದ್, ಅಲ್ಫಾಜ್, ಶರೀಫ್ ಶರಣಾದವರು.

ಗ್ಯಾಂಗ್ ವಾರ್​ ಯಾಕೆ?

ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಒಂದೆ ಗುಂಪಿನ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಅಲ್ಲದೆ ತಲವಾರು ಹಿಡಿದು, ಬಡಿದಾಡಿಕೊಂಡಿದ್ದವು. ನಗರವೆಲ್ಲ ಸೈಲೆಂಟ್‌ ಆಗಿರುವ ಹೊತ್ತಿಗೆ ಕಾರುಗಳ ಗುದ್ದಾಟ, ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಸುತ್ತಲಿನ ಫ್ಲ್ಯಾಟ್‌ ನಿವಾಸಿಗಳು ಕಂಡು ಬೆಚ್ಚಿ ಬಿದ್ದಿದ್ದಾರೆ.

ಉಡುಪಿಯ ಕಾಪುವಿನಲ್ಲಿ ಟೀಂ ಗರುಡ ಹೆಸರಿನಲ್ಲಿ ತಂಡ ಕಟ್ಟಿಕೊಂಡಿದ್ದ ಪುಂಡರು ಗಾಂಜಾ, ದನ ಕಳ್ಳತನ, ದರೋಡೆಯಲ್ಲಿ ಸಕ್ರಿಯವಾಗಿತ್ತು. ಸದಾ ತಲವಾರು, ಕತ್ತಿ, ಡ್ರ್ಯಾಗನ್‌ ಹಿಡಿದು ತಿರುಗಾಡುತ್ತಿದ್ದ ಈ ಗುಂಪಿಗೆ ರೌಡಿಶೀಟರ್‌ ಆಶಿಕ್‌ ಎಂಬಾತನೇ ಕ್ಯಾಪ್ಟನ್‌. ನಾಲ್ಕು ವರ್ಷದ ಹಿಂದೆ ಅಂದಿನ ಎಸ್ಪಿ ಡಾ. ವಿಷ್ಣುವರ್ಧನ್‌ ಈ ತಂಡದ ಹೆಡೆಮುರಿ ಕಟ್ಟಿದ್ದರು.

ಇದನ್ನೂ ನೋಡಿ: ಉಡುಪಿಯಲ್ಲಿ ಮೇ 18ರಂದು ನಡೆದ ಭಯಾನಕ ಗ್ಯಾಂಗ್​ವಾರ್ ದೃಶ್ಯಗಳು ಲಭ್ಯ, ಸೆರೆ ಸಿಕ್ಕಿರುವ ಇಬ್ಬರು

ಎರಡು ವಾರದ ಹಿಂದೆ ಆಶಿಕ್‌ ಮತ್ತು ಅಲ್ಫಾಝ್‌ ನಡುವೆ ಜಗಳ ನಡೆದಿತ್ತು. ಒಂದೇ ತಂಡ ಆಗಿದ್ದರಿಂದ “ರಾಜಿ ಆಗುವ ಬಾ, ಗಲಾಟೆ ಬೇಡ” ಅಂತ ಆಶಿಕ್‌ನನ್ನು ಅಲ್ಫಾಝ್‌ ಟೀಂ ಕರೆಸಿಕೊಂಡಿತ್ತು. ಆದರೆ ಅಲ್ಫಾಝ್‌ ವಿಷಯ ಗೊತ್ತಿದ್ದ ಆಶಿಕ್‌ ಕುಂಜಿಬೆಟ್ಟಿಗೆ ಬಂದವನು ಕಾರಿನಿಂದ ಇಳಿದಿರಲಿಲ್ಲ. ಹೀಗಾಗಿ ಕಾರು ಗುದ್ದಾಟದ ಮೂಲಕ ಆಶಿಕ್‌ನನ್ನ ಮಟ್ಟ ಹಾಕಲು ಅಲ್ಫಾಝ್‌ ಪ್ರಯತ್ನಿಸಿದನು. ಅಷ್ಟೇ ಅಲ್ಲ, ತಲವಾರು ದಾಳಿ ನಡೆಸಲು ಮುಂದಾಗಿದ್ದಾಬೆ. ಇಷ್ಟಾಗುತ್ತಲೇ ಆಶಿಕ್‌ ಕಡೆಯವರು ತಮ್ಮ ಸ್ವಿಫ್ಟ್‌ ಕಾರನ್ನ ಶರೀಫ್‌ ಎಂಬಾತನ ಮೇಲೆ ಹರಿಸಿದ್ದರು.

ಬೆಂಗಳೂರಿಗೂ ಹಬ್ಬಿದ ಗ್ಯಾಂಗ್​

ಕರಾವಳಿಯಲ್ಲಿ ಹುಟ್ಟಿಕೊಂಡ ಈ ಗ್ಯಾಂಗ್ ರಾಜಧಾನಿವರೆಗೂ ಕೂಡ ತಮ್ಮ ಕಾರ್ಯಾಚರಣೆಯನ್ನು ವಿಸ್ತರಿಸಿದೆ. ಸುಲಭದಲ್ಲಿ ಅಡ್ಡ ದಾರಿಯ ಮೂಲಕ ದುಡ್ಡು ಮಾಡುವ ಹುಚ್ಚಿಗೆ ಬಿದ್ದ ಈ ಗ್ಯಾಂಗ್ ಮಾಡಿದ್ದು ಒಂದಲ್ಲ ಎರಡಲ್ಲ.

ಗರುಡನ ಹೆಸರು ಇಟ್ಟುಕೊಂಡು ದನ ಕಳ್ಳತನ ಮಾಡಲು ಪ್ರಾರಂಭವಾದ ಈ ಗರುಡ ಗ್ಯಾಂಗ್, 10 ವರ್ಷಗಳಲ್ಲಿ ನಟೋರಿಯಸ್ಸಾಗಿ ಬೆಳೆದಿದೆ. 2022ರ ಏಪ್ರಿಲ್​ನಲ್ಲಿ ಗರುಡ ಗ್ಯಾಂಗ್​ನ ಆರೋಪಿ ನಂದು ಸದ್ಯ ಬಂಧನದಲ್ಲಿರುವ ಆರೋಪಿ ಆಶಿಕ್​ನ ಶೂಟ್ ಔಟ್ ಮೂಲಕ ಸುದ್ದಿಯಾಗಿದ್ದನು.

ಇನ್ನು 2020ರಲ್ಲಿ ಕೊತ್ತನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಬೆಂಗಳೂರು ಮೂಲದ ವ್ಯಕ್ತಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ ಆಶಿಕ್ ಮತ್ತು ಇಸಾಕ್ ಮೇಲೆ ದಾಖಲಾಗಿತ್ತು.‌ ಪ್ರಕರಣ ಕೈಗೆತ್ತಿಕೊಂಡು ತನಿಖೆ ಆರಂಭಿಸಿದ ಪೊಲೀಸರಿಗೆ ಆಶಿಕ್ ಮತ್ತು ಇಸಾಕ್ ತಾವು ಎಷ್ಟು ನಟೋರಿಯಸ್ ಎನ್ನುವುದನ್ನು ಅವತ್ತೇ ತೋರಿಸಿದ್ದರು. ತಮ್ಮನ್ನು ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿದ ಇವರಿಗೆ ಗುಂಡೇಟು ನೀಡಿ ಬಂಧಿಸಿದ್ದರು. ಸದ್ಯ ಹೊಸ ಪ್ರಕರಣದ ಮೂಲಕ ಮತ್ತೆ ಪೊಲೀಸ್ ಅತಿಥಿಯಾಗಿರುವ ಆಶಿಕ್ ಹಳೇ ಕೃತ್ಯವನ್ನ ಮತ್ತೆ ನೆನಪಿಸಿದ್ದಾನೆ.

ಗ್ಯಾಂಗ್ ವಾರ್​ಗೂ ಮೊದಲು ಕಾಪುವಿನಲ್ಲಿ ಟಾಕ್ ವಾರ್ ಒಂದು ನಡೆದಿತ್ತು. ಇದಾದ ಬಳಿಕ ಮಜೀದ್, ಆಶಿಕ್ ತಂಡಕ್ಕೆ ಉಡುಪಿಗೆ ಬರುವಂತೆ ಆಹ್ವಾನ ನೀಡಿದ್ದ. ಉಡುಪಿಗೆ ತನ್ನ ಸಂಗಡಿಗರೊಂದಿಗೆ ಬಂದಿದ್ದ ಆಶಿಕ್ ಕಾರಿನಿಂದ ಕೆಳಗೆ ಇಳಿದೇ ಇರಲಿಲ್ಲ. ಇದರಿಂದ ಕೋಪಗೊಂಡ ಮಜೀದ್ ತನ್ನ ಕಾರಿನಿಂದ ಆಶಿಕ್ ಕಾರಿಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಕಾರಿನಲ್ಲಿ ತಂದಿದ್ದ ತಲ್ವಾರ್ ಡ್ಯಾಗರ್ ದೊಣ್ಣೆಗಳನ್ನ ಬಳಸಿ ಹಲ್ಲೆ ಮಾಡಲು ಯತ್ನಿಸಿದ್ದನು.

ಈ ಘಟನೆ ಸಂಬಂಧ ಈಗಾಗಲೇ ಉಡುಪಿ ನಗರ ಪೊಲೀಸರು ಗ್ಯಾಂಗ್​ ವಾರ್​ನಲ್ಲಿ ಭಾಗಿಯಾಗಿದ್ದ ಆಶಿಕ್, ರಾಕೀಬ್, ಸಕ್ಲೈನ್, ಮಜೀದ್, ಅಲ್ಫಾಜ್, ಶರೀಫ್ ಎಂಬುವರನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:41 pm, Sun, 26 May 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್