AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷ್ಣ ಮಠ ಭೇಟಿಗೂ ಮುನ್ನ ಉಡುಪಿಯಲ್ಲಿ ಮೋದಿ ರೋಡ್ ಶೋ; ಸಿದ್ಧತೆ ಹೇಗಿದೆ ಗೊತ್ತಾ?

ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದು, ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಆದಿ ಉಡುಪಿಯಿಂದ ನಾರಾಯಣ ಗುರು ಸರ್ಕಲ್‌ವರೆಗೆ ಭವ್ಯ ರೋಡ್‌ಶೋ ನಡೆಸಲಿದ್ದು, ಅದಕ್ಕಾಗಿ ಪಟ್ಟಣದಲ್ಲಿ ವ್ಯಾಪಕ ಸಿದ್ಧತೆಗಳು ನಡೆದಿವೆ. ಕೃಷ್ಣಮಠ ಮತ್ತು ರೋಡ್‌ಶೋ ಮಾರ್ಗದಲ್ಲಿ ವಿಶೇಷ ಅಲಂಕಾರ, ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಮೋದಿ ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ.

ಕೃಷ್ಣ ಮಠ ಭೇಟಿಗೂ ಮುನ್ನ ಉಡುಪಿಯಲ್ಲಿ ಮೋದಿ ರೋಡ್ ಶೋ; ಸಿದ್ಧತೆ ಹೇಗಿದೆ ಗೊತ್ತಾ?
ನಾಳೆ ಕೃಷ್ಣ ಮಠ ಭೇಟಿಗೂ ಮುನ್ನ ಮೋದಿ ರೋಡ್ ಶೋ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Nov 27, 2025 | 10:17 AM

Share

ಉಡುಪಿ, ನವೆಂಬರ್ 27: ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾಗವಹಿಸಲಿದ್ದು, ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೃಷ್ಣಮಠ ಭೇಟಿ ಹಿನ್ನೆಲೆ ಭಾರೀ ಸಿದ್ಧತೆಗಳು ನಡೆಯುತ್ತಿದೆ. ಪ್ರಧಾನಿಯವರು ಆದಿ ಉಡುಪಿ ಹೆಲಿಪಾಡ್‌ನಿಂದ ನಾರಾಯಣ ಗುರು ಸರ್ಕಲ್‌ವರೆಗೆ ರೋಡ್‌ ಶೋ ನಡೆಸಲಿದ್ದಾರೆ ಎಂದು ದೃಢಪಟ್ಟಿದೆ.

ಕೇಸರಿ ಧ್ವಜದಿಂದ ಅಲಂಕೃತವಾದ ಪಟ್ಟಣ

ಮೋದಿ ಆಗಮನಕ್ಕಾಗಿ ಪಟ್ಟಣದ ನಾರಾಯಣ ಗುರು ಸರ್ಕಲ್ ಬಳಿ ಹಾಗೂ ಜಯಲಕ್ಷ್ಮಿ ಸಿಲ್ಕ್ಸ್ ಮುಂಭಾಗದಲ್ಲಿ ಸಾಂಸ್ಕೃತಿಕ ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಸಿಟಿ ಬಸ್ ನಿಲ್ದಾಣ ಪ್ರದೇಶದಲ್ಲೂ ವಿಶೇಷ ವ್ಯವಸ್ಥೆಗಳು ಮಾಡಲಾಗಿದೆ. ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಕಾರ್ಯಕರ್ತರು ರಸ್ತೆ ಬದಿಯಲ್ಲಿ ಜಮಾವಣೆ ಆಗುವ ನಿರೀಕ್ಷೆ ಇದೆ. ಮೂರು ಕಡೆಗಳಲ್ಲಿ ನಿಧಾನಗತಿಯಲ್ಲೇ ಸಾಗಲಿರುವ ಕಾರಿನಲ್ಲಿ ಪ್ರಧಾನಿಯವರು ಸಾರ್ವಜನಿಕರಿಗೆ ಕೈಬೀಸುತ್ತ ಸಾಗಲಿದ್ದಾರೆ. ಆದಿ ಉಡುಪಿ ಹೆಲಿಪಾಡ್‌ನಿಂದ ಕೃಷ್ಣಮಠದವರೆಗೆ ಎರಡು ಹಂತದ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಡಿವೈಡರ್‌ಗಳ ಮೇಲೆ ಕೇಸರಿ ಪತಾಕೆಗಳನ್ನು ಸಾಲು ಸಾಲಾಗಿ ಅಲಂಕರಿಸಲಾಗಿದೆ. ಕೃಷ್ಣಮಠ ಕೂಡ ಪ್ರಧಾನಿಯ ಸ್ವಾಗತದ ಸಿದ್ಧತೆಗಳಲ್ಲಿ ತೊಡಗಿದ್ದು, ಸಂಪೂರ್ಣ ರೋಡ್‌ಶೋ ಸುಮಾರು 15 ನಿಮಿಷಗಳವರೆಗೆ ಮುಂದುವರಿಯಲಿದೆ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಭೇಟಿ ಹಿನ್ನೆಲೆ ಪೊಲೀಸ್ ಬಿಗಿ ಭದ್ರತೆ

ಭದ್ರತಾ ವ್ಯವಸ್ಥೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಾವಣಗೆರೆ, ಮೈಸೂರು, ಬೆಂಗಳೂರು ಶಿವಮೊಗ್ಗ ಜಿಲ್ಲೆಗಳಿಂದ 3000ಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದ್ದು, 10 ಎಸ್ಪಿ, 27 ಡಿವೈಎಸ್ಪಿ, 49 ಇನ್ಸ್ಪೆಕ್ಟರ್, 127 ಎಸ್ ಐ, 232 ಎ ಎಸ್ ಐ, 1608 ಪಿಸಿ, 39 ಡಬ್ಲ್ಯೂ ಪಿ ಸಿ , 48 ಬಿಡಿಡಿಎಸ್ ಟೀಂ, ಆರು ksrp, ಆರು ಕ್ಯೂಆರ್‌ಟಿ ಟೀಮ್ ನಿಯೋಜನೆ ಮಾಡಲಾಗಿದೆ. ರೋಡ್ ಶೋ ಮಾರ್ಗದುದ್ದಕ್ಕೂ ಪೊಲೀಸರಿಂದ ನಿರಂತರ ತಪಾಸಣೆ ನಡೆಯಲಿದ್ದು, ನಗರದ ಎಲ್ಲಾ ಕಡೆ ಬಾಂಬ್ ಸ್ಕ್ವಾಡ್​ಗಳಿಂದ ಪರಿಶೀಲನೆ ನಡೆಯುತ್ತಿದೆ.

ಪೊಲೀಸ್ ಬಿಗಿ ಭದ್ರತೆಯ ದೃಶ್ಯ ಇಲ್ಲಿದೆ

ಇದನ್ನೂ ಓದಿ ಪ್ರಧಾನಿ ಮೋದಿ ಉಡುಪಿ ಭೇಟಿ: ಶ್ರೀ ಕೃಷ್ಣ ಮಠ ಸುತ್ತ ಬಿಗಿ ಬಂದೋಬಸ್ತ್, ದೇಗುಲಕ್ಕೆ ಬರುವವರು ಈ ಮಾರ್ಗಸೂಚಿ ಪಾಲಿಸಿ

ಮೋದಿ ಭೇಟಿಯ ವೇಳಾಪಟ್ಟಿ ಹೀಗಿದೆ

ಶುಕ್ರವಾರ ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡುವ ಬಗ್ಗೆ ಪ್ರಧಾನಿ ಕಚೇರಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಶುಕ್ರವಾರದ ಬೆಳಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣವೇ 11.10ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35ಕ್ಕೆ ಉಡುಪಿಯ ಹೆಲಿಪ್ಯಾಡ್ ತಲುಪಲಿದ್ದಾರೆ. ಶ್ರೀಕೃಷ್ಣನ ದರ್ಶನ ಪಡೆದು ಲಕ್ಷಕಂಠ ಗೀತ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮೋದಿ, ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:15 am, Thu, 27 November 25

Follow Us
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ