AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಎಸ್​ಐಆರ್ ಸರ್ವೇ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಸರ ದೋಚಿದ್ದ ಖದೀಮರು

ಉಡುಪಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ವೃದ್ಧೆಯನ್ನು ವಂಚಿಸಿ ಚಿನ್ನದ ಸರ ದೋಚಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 4 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಇತರೆ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಲ ತೀರಿಸಲು ಆರೋಪಿಗಳು ಈ ಕೃತ್ಯ ಎಸಗಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ಉಡುಪಿ ನಗರ ಠಾಣೆ ಪೊಲೀಸರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಉಡುಪಿ: ಎಸ್​ಐಆರ್ ಸರ್ವೇ ನೆಪದಲ್ಲಿ ಮನೆಗೆ ನುಗ್ಗಿ ವೃದ್ಧೆಯ ಸರ ದೋಚಿದ್ದ ಖದೀಮರು
ಉಡುಪಿ ಚಿನ್ನ ಕಳ್ಳತನImage Credit source: daijiworld
ಅಕ್ಷಯ್​ ಪಲ್ಲಮಜಲು​​
|

Updated on:Oct 10, 2026 | 10:15 PM

Share

ಉಡುಪಿ, ಅ.10: ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಹಿತಿ ಸಂಗ್ರಹಿಸುವ ನೆಪದಲ್ಲಿ ಮನೆಗೆ ನುಗ್ಗಿ 74 ವರ್ಷದ ವೃದ್ಧೆಯನ್ನು ತಳ್ಳಿ, ಕುತ್ತಿಗೆಯಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ದೋಚಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 5.53 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ದೈಜಿವರ್ಲ್ಡ್ ವರದಿ ಮಾಡಿದೆ.

ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ ಶ್ರೀನಿವಾಸ ಕಾರಂತ್ (49) ಎಂಬುವವರ ತಾಯಿ ಶಾಂತ ಕಾರಂತ್ (74) ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಈ ಧಾರ್ಷ್ಟ್ಯದ ಕೃತ್ಯ ನಡೆದಿತ್ತು. ಅಕ್ಟೋಬರ್ 7 ರಂದು ಮಧ್ಯಾಹ್ನ ಸುಮಾರು 3.47 ರ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಮನೆಗೆ ಆಗಮಿಸಿ, ತಾವು ಮತದಾರರ ಪಟ್ಟಿ ಪರಿಷ್ಕರಣೆ ಮಾಹಿತಿ ಸಂಗ್ರಹಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದರು. ಅವರು ನೀಡಿದ ದಾಖಲೆಗಳಿಗೆ ಸಹಿ ಮಾಡುವ ಮುನ್ನ ಮಗನನ್ನು ಕೇಳುವುದಾಗಿ ಹೇಳಿ ವೃದ್ಧೆ ಶಾಂತ ಕಾರಂತ್ ಅವರು ಮನೆ ಒಳಗೆ ಹೋದಾಗ, ಹಿಂದೆಯೇ ನುಗ್ಗಿದ ಕಿಡಿಗೇಡಿಗಳು ವೃದ್ಧೆಯನ್ನು ಕೆಳಗೆ ತಳ್ಳಿ, ಅವರ ಕುತ್ತಿಗೆಯಲ್ಲಿದ್ದ 30 ಗ್ರಾಂ ತೂಕದ ಕಾರ್ಟ್‌ನೆಟ್ ಮಾಲೆ ಹೊಂದಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದರು.

ಘಟನೆ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ವಿಶೇಷ ಪಡೆ ತನಿಖೆ ಆರಂಭಿಸಿತ್ತು. ಅಕ್ಟೋಬರ್ 10 ರಂದು ಸಿಕ್ಕ ಖಚಿತ ಮಾಹಿತಿ ಮೇರೆಗೆ ಮಣಿಪಾಲದ ಮಣ್ಣಪಳ್ಳ ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಾದಿರಾಜ್ ಗಾಣಿಗ (44) ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ನಿಟ್ಟೂರು ನಿವಾಸಿ (ಮೃತ ವೃದ್ಧೆಯ ನೆರೆಮನೆಯವನು). ಸಚಿನ್ (30) ಕಾಪು ತಾಲೂಕಿನ ಪಡುಬಿದ್ರಿ ಗ್ರಾಮದ ಬೀಡುಬದಿ ನಿವಾಸಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಚನ್ನಪಟ್ಟಣ ಎಕ್ಸ್‌ಪ್ರೆಸ್‌ವೇ ಯುವತಿ ಅಪಘಾತ ಸಾವಿಗೆ ಬಿಗ್ ಟ್ವಿಸ್ಟ್: ಇದು ಆಕ್ಸಿಡೆಂಟ್ ಅಲ್ಲ, ಭೀಕರ ಕೊಲೆ ಎಂದು ಪೋಷಕರ ಆರೋಪ

ಆರೋಪಿ ವಾದಿರಾಜ್ ಗಾಣಿಗ ದೂರುದಾರರ ನೆರೆಮನೆಯವನಾಗಿದ್ದು, ಮೃತ ವೃದ್ಧೆ ಹಾಗೂ ಹಲವರಿಂದ ಭಾರಿ ಪ್ರಮಾಣದ ಹಣ ಸಾಲ ಪಡೆದಿದ್ದ. ಮತ್ತೊಬ್ಬ ಆರೋಪಿ ಸಚಿನ್ ಕೂಡ ಸಾಲದ ಸುಳಿಯಲ್ಲಿದ್ದ. ಈ ಸಾಲ ತೀರಿಸಲು ಹಾಗೂ ಐಷಾರಾಮಿ ಜೀವನ ನಡೆಸಲು ಇಬ್ಬರೂ ಸೇರಿ ನೆರೆಮನೆಯ ವೃದ್ಧೆಯನ್ನೇ ಗುರಿಮಾಡಿ ಈ ಸಂಚು ರೂಪಿಸಿದ್ದರು. ವಿಚಾರಣೆ ವೇಳೆ ಕಳವು ಮಾಡಿದ ಚಿನ್ನದ ಸರವನ್ನು ಮಣಿಪಾಲದ ಇಂಡಸ್ಟ್ರಿಯಲ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಅಡಮಾನ ಇಟ್ಟಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. 4.5 ಲಕ್ಷ ರೂ ಮೌಲ್ಯದ 34 ಗ್ರಾಂ ತೂಕದ ಚಿನ್ನದ ಸರ, ಈ ಕೃತ್ಯಕ್ಕೆ ಬಳಸಿದ್ದ ವಾಹನ 90 ಸಾವಿರದ ಓಲಾ ಎಲೆಕ್ಟ್ರಿಕ್ ಸ್ಕೂಟರ್. 13 ಸಾವಿರ ಮೌಲ್ಯದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ , ಹೆಚ್ಚುವರಿ ಎಸ್‌ಪಿ ಸುಧಾಕರ್ ನಾಯಕ್ ಹಾಗೂ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 pm, Sat, 10 October 26

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ