Video: ಉಡುಪಿ ನೇಮೋತ್ಸವದಲ್ಲಿ ವೃದ್ಧೆಯ ಚಿನ್ನದ ಸರ ಕಳ್ಳತನ, ಸಿಸಿಟಿವಿಯಲ್ಲಿ ಸೆರೆ
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಕಳ್ಳತನವಾಗಿದೆ. ಕಮಲ ಎಂಬುವವರ 2 ಲಕ್ಷ ಮೌಲ್ಯದ ಬಂಗಾರದ ಸರವನ್ನು ಮೂವರು ಮಹಿಳಾ ಕಳ್ಳಿಯರು ಗಂಟೆ ಬಾರಿಸುವ ನೆಪದಲ್ಲಿ ಚಾಣಾಕ್ಷವಾಗಿ ಕದ್ದಿದ್ದಾರೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದ್ದು, ಪಡುಬಿದ್ರಿ ಪೊಲೀಸರು ಸದ್ಯ ಕಳ್ಳಿಯರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಉಡುಪಿ, ಡಿ.26: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ವೃದ್ದೆಯ ಚಿನ್ನದ ಸರವನ್ನು ಕಳ್ಳಿಯರು ಎಗರಿಸಿದ್ದಾರೆ. ಮೂವರು ಕಳ್ಳಿಯರ ಕರಾಮತ್ತು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೃದ್ಧೆಯನ್ನು ಮೂರು ಕಡೆಯಿಂದ ಸುತ್ತುವರಿದು ಚಿನ್ನದ ಸರ ಕದ್ದಿದ್ದಾರೆ. ಹೆಜಮಾಡಿ ನಿವಾಸಿ ಕಮಲ ಎಂಬುವವರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಪೂಜೆಯ ವೇಳೆ ಮೂರು ಕಡೆಯಿಂದ ಸುತ್ತುವರಿದ ಕಳ್ಳಿಯರು ಗಂಟೆ ಹೊಡೆಯುವ ನೆಪದಲ್ಲಿ ಚಿನ್ನದ ಸರ ಎಗರಿಸಿದ್ದಾರೆ. 2 ಲಕ್ಷ ಮೌಲ್ಯದ ಚಿನ್ನದ ಸರ ಎಂದು ಹೇಳಲಾಗಿದೆ. ಇದೀಗ ಆ ಮೂರು ಕಳ್ಳಿಯರ ಪತ್ತೆಗಾಗಿ ಪಡುಬಿದ್ರಿ ಪೊಲೀಸರು ಬಲೆ ಬಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Dec 26, 2025 10:27 AM