ಉಡುಪಿ ಹಿಟ್ ಆ್ಯಂಡ್ ರನ್: ಕಾಂಗ್ರೆಸ್ ಮುಖಂಡನ ಪುತ್ರ ಬಂಧನ, ಠಾಣೆ ಬೇಲ್​ ಮೇಲೆ ರಿಲೀಸ್​​​

| Updated By: ವಿವೇಕ ಬಿರಾದಾರ

Updated on: Nov 17, 2024 | 12:50 PM

ಉಡುಪಿಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 11 ರಂದು ನಡೆದ ಅಪಘಾತದಲ್ಲಿ ಮೊಹಮ್ಮದ್ ಹುಸೈನ್ ಎಂಬುವರು ಮೃತಪಟ್ಟಿದ್ದಾರ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧನವಾಗಿದ್ದ ಪ್ರಜ್ವಲ್ ಶೆಟ್ಟಿಯನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಉಡುಪಿ ಹಿಟ್ ಆ್ಯಂಡ್ ರನ್: ಕಾಂಗ್ರೆಸ್ ಮುಖಂಡನ ಪುತ್ರ ಬಂಧನ, ಠಾಣೆ ಬೇಲ್​ ಮೇಲೆ ರಿಲೀಸ್​​​
ಆರೋಪಿ ಪ್ರಜ್ವಲ್​ ಶೆಟ್ಟಿ
Follow us on

ಉಡುಪಿ, ನವೆಂಬರ್​ 17: ಹಿಟ್ ಆ್ಯಂಡ್ ರನ್ (Hit and Run) ಆರೋಪದಲ್ಲಿ ಕಾಂಗ್ರೆಸ್ (Congress) ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಪ್ರಜ್ವಲ್ ಶೆಟ್ಟಿಯನ್ನು ಪೊಲೀಸರು ಬಂಧಿಸಿ, ಠಾಣೆ ಬೇಲ್​​ ಮೇಲೆ ಬಿಡುಗಡೆ ಮಾಡಿದ್ದಾರೆ.

ನವೆಂಬರ್ 11ರಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು ಬೆಳಪುವಿನ ಮಿಲಿಟರಿ ಕಾಲನಿಯಲ್ಲಿ ಪ್ರಜ್ವಲ್ ಶೆಟ್ಟಿ ಹಿಟ್​ ಆ್ಯಂಡ್​ ರನ್​ ನಡೆಸಿ ಪರಾರಿಯಾಗಿದ್ದನು. ಅಪಘಾತದಲ್ಲಿ ಮೊಹಮ್ಮದ್ ಹುಸೈನ್ (39) ಎಂಬುವರು ಮೃತಪಟ್ಟಿದ್ದಾರೆ. ಪ್ರಜ್ವಲ್ ಶೆಟ್ಟಿ ತನ್ನ ಥಾರ್ ಜೀಪಿನಿಂದ ಮೊಹಮ್ಮದ್ ಹುಸೈನ್​ ಅವರ ಬೈಕ್​ಗೆ ಗುದ್ದಿ ಪರಾರಿಯಾಗಿದ್ದರು.

ಅಪಘಾತದ ಭೀಕರತೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಶಿರ್ವ ಪೊಲೀಸರು ಆರೋಪಿ ಪ್ರಜ್ವಲ್​ ಶೆಟ್ಟಿಯನ್ನು ಬಂಧಿಸಿದ್ದರು.

ಇದನ್ನೂ ಓದಿ: ಲೈಂಗಿಕ‌ ಕಿರುಕುಳ ಆರೋಪದಡಿ ವಶಕ್ಕೆ ಪಡೆದಿದ್ದ ವ್ಯಕ್ತಿ ಪೊಲೀಸ್​ ಠಾಣೆಯಲ್ಲೇ ಸಾವು

ವಿಚಾರಣೆ ವೇಳೆ ಆರೋಪಿ ಪ್ರಜ್ವಲ್ ಶೆಟ್ಟಿ ನಿದ್ದೆ ಮಂಪರಿನಲ್ಲಿ ಅಪಘಾತ ನಡೆದಿದೆ ಎಂದು ಹೇಳಿದ್ದಾನೆ. ವಿಚಾರಣೆ ಬಳಿಕ, ಆರೋಪಿ ಪ್ರಜ್ವಲ್ ಶೆಟ್ಟಿಯನ್ನು ಠಾಣೆಯ ಬೇಲ್​​​ ಮೇಲೆ ಬಿಡುಗಡೆ ಮಾಡಿದ್ದಾರೆ. ಕರೆದಾಗ ವಿಚಾರಣೆಗೆ ಹಾಜರಾಗಲು ಶಿರ್ವ ಪೊಲೀಸರ ಸೂಚನೆ ನೀಡಿದ್ದಾರೆ.

ಆರೋಪ ಸಾಬೀತಾದರೆ ಪ್ರಜ್ವಲ್​​ಗೆ ಮೂರು ವರ್ಷ ‌ಶಿಕ್ಷೆಯಾಗುತ್ತದೆ. ಮೃತನ ಕುಟುಂಬಸ್ಥರು ಹಿಟ್ ಆಂಡ್ ರನ್ ಎಂದು ದೂರು ನೀಡಿದ್ದಾರೆ. ಆರೋಪಿಯ ಥಾರ್ ಜೀಪ್​ ಪೊಲೀಸರ ವಶದಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:48 pm, Sun, 17 November 24