AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಕುಳಿತು ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ: ಯಶ್​ಪಾಲ್ ಸುವರ್ಣ

Udupi News: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದಾಗ ಹೇಳಿಕೆ ನೀಡಿದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇದೀಗ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಸ್​ಪಿಗೆ ದೂರು ನೀಡಲು ಬಿಜೆಪಿ ಮುಂದಾಗಿದೆ.

ವಿದೇಶದಲ್ಲಿ ಕುಳಿತು ವಿದ್ಯಾರ್ಥಿನಿಯರ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ: ಯಶ್​ಪಾಲ್ ಸುವರ್ಣ
ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jul 31, 2023 | 5:58 PM

Share

ಉಡುಪಿ, ಜುಲೈ 31: ವಿದೇಶದಲ್ಲಿ ಕುಳಿತುಕೊಂಡು ಫೇಸ್​ಬುಕ್, ವಾಟ್ಸ್​​ಆ್ಯಪ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಿ ವಿದ್ಯಾರ್ಥಿನಿಯರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಯಶ್​ಪಾಲ್ ಸುವರ್ಣ (Yashpal Suvarna) ಆರೋಪಿಸಿದ್ದಾರೆ. ಅಲ್ಲದೆ, ಅಂತಹ​​ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ಸಂಬಂಧ ಪ್ರತಿಭಟನಾ ನಿರತ ವಿದ್ಯಾರ್ಥಿನಿ ಶಾಲಾ ಆಡಳಿತ ಮಂಡಳಿ ವಿರುದ್ಧ ಆರೋಪಿಸಿದ್ದರು. ಈ ನಡುವೆ ಆಕೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಲಾಗಿದೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಉಡುಪಿ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ; ದೂರು ದಾಖಲು

ಈ ಬಗ್ಗೆ ಉಡುಪಿ ನಗರದಲ್ಲಿ ಮಾತನಾಡಿದ ಯಶ್​ಪಾಲ್ ಸುವರ್ಣ, ವಿದೇಶದಲ್ಲಿ ಕುಳಿತು ಪ್ರತಿಭಟನೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಫೇಸ್​​ಬುಕ್​, ವಾಟ್ಸಾಪ್ ಸಂದೇಶಗಳಿಗೆ ಕುಗ್ಗುವ ಪ್ರಶ್ನೆಯೇ ಇಲ್ಲ. ಫೇಸ್​​ಬುಕ್​​ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಜೊತೆ ನಾವು ಇದ್ದೇವೆ ಎಂದರು.

ಅವಹೇಳನಕಾರಿ ಸಂದೇಶದ ಬಗ್ಗೆ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಶ್ಲೀಲ ಸಂದೇಶ ಹಾಕುವವರನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಎಸ್​.ಪಿ. ಅವರಿಗೆ ದೂರು ನೀಡುತ್ತೇವೆ ಎಂದು ಯಶ್​ಪಾಲ್ ಸುವರ್ಣ ಹೇಳಿದರು. ಅಲ್ಲದೆ, ಕಾಂಗ್ರೆಸ್​ ಪಕ್ಷದಲ್ಲಿರುವ ಹಿಂದೂಗಳು ಜಿಹಾದಿಗಳ ಜೊತೆ ಕೈಜೋಡಿಸುತ್ತಿದ್ದಾರೆ. ಕಾಂಗ್ರೆಸ್​ನಲ್ಲಿರುವ ಹಿಂದೂಗಳ ಮನೆಯವರಿಗೆ ಸಮಸ್ಯೆ ಆದರೆ ಹಿಂದೂ ಸಂಘಟನೆಯವರೇ ಬರಬೇಕು ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ