ಉಡುಪಿ, ಜುಲೈ 31: ವಿದೇಶದಲ್ಲಿ ಕುಳಿತುಕೊಂಡು ಫೇಸ್ಬುಕ್, ವಾಟ್ಸ್ಆ್ಯಪ್ ಮೂಲಕ ಬೆದರಿಕೆ ಸಂದೇಶಗಳನ್ನು ಕಳುಹಿಸಿ ವಿದ್ಯಾರ್ಥಿನಿಯರ ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ (Yashpal Suvarna) ಆರೋಪಿಸಿದ್ದಾರೆ. ಅಲ್ಲದೆ, ಅಂತಹ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ಸಂಬಂಧ ಪ್ರತಿಭಟನಾ ನಿರತ ವಿದ್ಯಾರ್ಥಿನಿ ಶಾಲಾ ಆಡಳಿತ ಮಂಡಳಿ ವಿರುದ್ಧ ಆರೋಪಿಸಿದ್ದರು. ಈ ನಡುವೆ ಆಕೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಲಾಗಿದೆ. ಈ ಸಂಬಂಧ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ: ಉಡುಪಿ: ಕಾಲೇಜಿನ ಅವ್ಯವಸ್ಥೆಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ವಿದ್ಯಾರ್ಥಿನಿಗೆ ಬೆದರಿಕೆ ಸಂದೇಶ; ದೂರು ದಾಖಲು
ಈ ಬಗ್ಗೆ ಉಡುಪಿ ನಗರದಲ್ಲಿ ಮಾತನಾಡಿದ ಯಶ್ಪಾಲ್ ಸುವರ್ಣ, ವಿದೇಶದಲ್ಲಿ ಕುಳಿತು ಪ್ರತಿಭಟನೆ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಫೇಸ್ಬುಕ್, ವಾಟ್ಸಾಪ್ ಸಂದೇಶಗಳಿಗೆ ಕುಗ್ಗುವ ಪ್ರಶ್ನೆಯೇ ಇಲ್ಲ. ಫೇಸ್ಬುಕ್ ಸಂದೇಶಗಳಿಂದ ವಿದ್ಯಾರ್ಥಿನಿಯರ ಶಕ್ತಿ ಕುಗ್ಗಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಜೊತೆ ನಾವು ಇದ್ದೇವೆ ಎಂದರು.
ಅವಹೇಳನಕಾರಿ ಸಂದೇಶದ ಬಗ್ಗೆ ಸೆನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಶ್ಲೀಲ ಸಂದೇಶ ಹಾಕುವವರನ್ನು ಪತ್ತೆಹಚ್ಚುವಂತೆ ಆಗ್ರಹಿಸಿ ಎಸ್.ಪಿ. ಅವರಿಗೆ ದೂರು ನೀಡುತ್ತೇವೆ ಎಂದು ಯಶ್ಪಾಲ್ ಸುವರ್ಣ ಹೇಳಿದರು. ಅಲ್ಲದೆ, ಕಾಂಗ್ರೆಸ್ ಪಕ್ಷದಲ್ಲಿರುವ ಹಿಂದೂಗಳು ಜಿಹಾದಿಗಳ ಜೊತೆ ಕೈಜೋಡಿಸುತ್ತಿದ್ದಾರೆ. ಕಾಂಗ್ರೆಸ್ನಲ್ಲಿರುವ ಹಿಂದೂಗಳ ಮನೆಯವರಿಗೆ ಸಮಸ್ಯೆ ಆದರೆ ಹಿಂದೂ ಸಂಘಟನೆಯವರೇ ಬರಬೇಕು ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ