Udupi News: ನೇತ್ರ ಜ್ಯೋತಿ ಕಾಲೇಜು ಆಡಳಿತ ಮಂಡಳಿಯವರಿಗೆ ನಿರೀಕ್ಷಣಾ ಜಾಮೀನು

ಉಡುಪಿಯಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ್ದ ಆರೋಪ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿರುವ ನೇತ್ರಜ್ಯೋತಿ ಕಾಲೇಜು ಆಡಳಿತ ಮಂಡಳಿ ಸದಸ್ಯರಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Udupi News: ನೇತ್ರ ಜ್ಯೋತಿ ಕಾಲೇಜು ಆಡಳಿತ ಮಂಡಳಿಯವರಿಗೆ ನಿರೀಕ್ಷಣಾ ಜಾಮೀನು
ಶೌಚಾಲಯದಲ್ಲಿ ವಿದ್ಯಾರ್ಥಿಯರ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ನಾಲ್ಕನೇ ಆರೋಪಿಯಾಗಿರುವ ನೇತ್ರಜ್ಯೋತಿ ಕಾಲೇಜು ಆಡಳಿತ ಮಂಡಳಿಯವರಿಗೆ ಜಾಮೀನು ಮಂಜೂರು ಮಾಡಿದ ಜೆಎಂಎಫ್​ಸಿ ಕೋರ್ಟ್
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on:Jul 28, 2023 | 9:56 PM

ಉಡುಪಿ, ಜುಲೈ 28: ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣ ಸಂಬಂಧ ನಾಲ್ಕನೇ ಆರೋಪಿಯಾಗಿರುವ ಉಡುಪಿಯ (Udupi) ನೇತ್ರಜ್ಯೋತಿ ಕಾಲೇಜು ಆಡಳಿತ ಮಂಡಳಿಯವರಿಗೆ ಜೆಎಂಎಫ್​ಸಿ ನ್ಯಾಯಾಲಯವು (JMFC Court) ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ. ಪ್ರಕರಣ ಸಂಬಂಧ ಆಡಳಿತ ಮಂಡಳಿಯ ಪರವಾಗಿ ಕಾಲೇಜಿನ ನಿರ್ದೇಶಕಿ ರಶ್ಮಿ ಕೃಷ್ಣಪ್ರಸಾದ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಇದಕ್ಕೂ ಮುನ್ನ, ಪ್ರಕರಣ ಪ್ರಮುಖ ಮೂವರು ಆರೋಪಿಗಳಾಗಿರುವ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ಜಿಲ್ಲಾ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಸುಮೋಟೋ ಕೇಸ್ ದಾಖಲಿಸಲಾಗಿದೆ.

ಪೊಲೀಸ್ ತನಿಖೆ ವಿರುದ್ಧ ಅಪಸ್ವರ ವ್ಯಕ್ತವಾದ ಹಿನ್ನೆಲೆ ಮಂಗಳೂರು ಪಶ್ಚಿಮ ವಲಯ ಐಜಿಪಿ ಡಾ.ಚಂದ್ರಗುಪ್ತಾ ಅವರು ಇಂದು ಉಡುಪಿಗೆ ಭೇಟಿ ನೀಡಿ ತನಿಖಾಧಿಕಾರಿ ಮಂಜುನಾಥ ಗೌಡ ಅವರಿಂದ ಪ್ರಕರಣದ ವರದಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್, ಮೂವರು ವಿದ್ಯಾರ್ಥಿನಿಯರಿಗೆ ಜಾಮೀನು

ವಿಡಿಯೋ ಚಿತ್ರೀಕರಣ ಸಂಬಂಧ ವಿದ್ಯಾರ್ಥಿಗಳಿಂದ ಭಾರೀ ಆಕ್ರೋಶ ವ್ಯಕ್ತಗೊಂಡ ಬೆನ್ನಲ್ಲೇ ಎಚ್ಚೆತ್ತ ಕಾಲೇಜು ಆಡಳಿಯತ ಮಂಡಳಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ಮೊಬೈಲ್ ಜಪ್ತಿ ಮಾಡಿ ಪೊಲೀಸರ ವಶಕ್ಕೆ ನೀಡಿತ್ತು. ಮೊಬೈಲ್ ಜಾಲಡಿದರೂ ಏನು ಪತ್ತೆಯಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಇದನ್ನು ನಿರಾಕರಿಸಿದ ವಿದ್ಯಾರ್ಥಿಗಳು, ಮೊಬೈಲ್ ಜಪ್ತಿ ಮಾಡಿ ಎರಡು ದಿನ ಇಟ್ಟುಕೊಂಡಿದ್ದೇಕೆ ಎಂದು ಪ್ರಶ್ನಿಸಿ, ಅದರಲ್ಲಿನ ವಿಡಿಯೋ ಡಿಲಿಟ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಆರೋಪ ಬೆನ್ನಲ್ಲೇ, ಮೊಬೈಲ್​ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್​ಎಸ್​ಎಲ್) ರವಾನಿಸಲು ಸಿದ್ಧತೆ ನಡೆಸಲಾಗಿದೆ. ಪ್ರಕರಣ ಸಂಬಂಧ ಭಾರೀ ಪ್ರತಿಭಟನೆ ನಡುವೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿಯಿಂದ ಮಾಹಿತಿ ಕಲೆಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Fri, 28 July 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ