AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kollur Mookambika Temple: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ 400 ವರ್ಷಗಳ ಬಳಿಕ ಹೊಸ ರಥ! ಸಂಪೂರ್ಣ ವಿವರ ಇಲ್ಲಿದೆ

Udupi News: ಶ್ರೀ ಮೂಕಾಂಬಿಕಾ ದೇವಳದ 400 ವರ್ಷ ಹಳೆಯ ರಥ ಹಾಳಾಗಿದೆ. ನೂತನ ರಥದ ಸಂಪೂರ್ಣವಾಗಿ ಸಿದ್ಧವಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿರುವ ರಥಶಿಲ್ಪಿಗಳು ತ್ರಿಡಿ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಸಿ, ಹಳೆ ರಥದ ಪಡಿಯಚ್ಚು ತೆಗೆದು ಹೊಸ ರಥ ನಿರ್ಮಿಸಿದ್ದಾರೆ.

Kollur Mookambika Temple: ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ 400 ವರ್ಷಗಳ ಬಳಿಕ ಹೊಸ ರಥ! ಸಂಪೂರ್ಣ ವಿವರ ಇಲ್ಲಿದೆ
ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ 400 ವರ್ಷಗಳ ಬಳಿಕ ಹೊಸ ರಥ
TV9 Web
| Updated By: Digi Tech Desk|

Updated on:Jan 27, 2023 | 12:00 PM

Share

ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿ (Kollur Mookambika Temple) ಯಾರಿಗೆ ಗೊತ್ತಿಲ್ಲಾ ಹೇಳಿ. ರಾಜ್ಯ, ಹೊರ ರಾಜ್ಯದ ಭಕ್ತರು ಇಲ್ಲಿ ಆಗಮಿಸಿ ಶ್ರೀ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸುವುದು ಇಲ್ಲಿನ ಶಕ್ತಿ ಪೀಠದ ಮಹಿಮೆ ಎನ್ನಬಹುದು. ಅದರಲ್ಲೂ ಸೆಲೆಬ್ರಿಟಿಗಳು, ರಾಜಕಾರಣಿಗಳು ಭೇಟಿ ನೀಡುವ ರಾಜ್ಯದ ದೇವಳದಗಳಲ್ಲಿ ಒಂದಾಗಿರುವ ಕೊಲ್ಲೂರಿಗೆ ಹೊಸ ಕೊಡುಗೆಯೊಂದು ಕೆಲವೇ ದಿನಗಳಲ್ಲಿ ಸಲ್ಲಲಿದೆ. ಸುಮಾರು 400 ವರ್ಷಗಳ ಬಳಿಕ ಆಗುತ್ತಿರುವ ಬದಲಾವಣೆಗೆ ಕ್ಷೇತ್ರದ ಭಕ್ತರು ಕಾಯುತ್ತಿದ್ದಾರೆ. ಹೌದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಳ ರಾಜ್ಯ, ಹೊರ ರಾಜ್ಯದಲ್ಲೂ ಪ್ರಖ್ಯಾತವಾಗಿರುವ ಕ್ಷೇತ್ರ. ಇಲ್ಲಿಗೆ ಪ್ರತಿ ವರ್ಷ ಲಕ್ಷಾಂತರ ಜನ ಭಕ್ತರು ಭೇಟಿ ಕೊಟ್ಟು ತಮ್ಮ ಇಷ್ಟಾರ್ಥಗಳು ನೆರವೇರುವಂತೆ ಕೋರಿ ಪ್ರಾರ್ಥನೆ ಸಲ್ಲಿಸುತ್ತಾರೆ. ಅದರಲ್ಲೂ ರಾಜ್ಯದ ಸಿನೆಮಾ ತಾರೆಯರು, ಸೆಲೆಬ್ರಿಟಿಗಳು, ರಾಜ್ಯದ ರಾಜಕಾರಣಿಗಳು ಇಲ್ಲಿಗೆ ಭೇಟಿ ನೀಡಿ ವಿಶೇಷ ಪೂಜೆ ಪುನಸ್ಕಾರದಲ್ಲಿ ಭಾಗಿಯಾಗುತ್ತಾ ಬಂದಿದ್ದಾರೆ. ಸದ್ಯ ಈ ದೇವಳ ವಾರ್ಷಿಕ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಜಾತ್ರಾ ಮಹೋತ್ಸವದ ಬಳಿಕ ದೇವಳದ ಬ್ರಹ್ಮಕಲಶೋತ್ಸವವು ಕೂಡ ನಡೆಯಲಿದೆ. ಈ ದೇವಳದ ಅತ್ಯಂತ ಪುರಾತನ ಅಂದರೆ 400 ವರ್ಷ ಹಳೆಯದಾದ ರಥ ಸಂಪೂರ್ಣ ಹಾಳಾಗಿರುವ ಹಿನ್ನೆಲೆಯಲ್ಲಿ ನೂತನ ರಥದ (Temple Ratha) ನಿರ್ಮಾಣ ಕಾರ್ಯ ಪ್ರಾರಂಭವಾಗಿ 9 ತಿಂಗಳು ಕಳೆದಿದ್ದು, ಸದ್ಯ ರಥ ಸಂಪೂರ್ಣವಾಗಿ ಸಿದ್ಧವಾಗಿದೆ. ಆಧುನಿಕ ತಂತ್ರಜ್ಞಾನ ಬಳಸಿರುವ ರಥಶಿಲ್ಪಿಗಳು ತ್ರಿಡಿ ಸ್ಕ್ಯಾನಿಂಗ್ ತಂತ್ರಜ್ಞಾನ ಬಳಸಿ, ಹಳೆ ರಥದ ಪಡಿಯಚ್ಚು ತೆಗೆದು ಹೊಸ ರಥ ನಿರ್ಮಿಸಿದ್ದಾರೆ (Udupi).

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ. ಮುರ್ಡೇಶ್ವರದ ಖ್ಯಾತ ಉದ್ಯಮಿ ದಿ. ಆರ್‌.ಎನ್‌. ಶೆಟ್ಟಿ ಅವರ ಪುತ್ರ ಉದ್ಯಮಿ ಸುನಿಲ್‌ ಶೆಟ್ಟಿ ಅವರು ನೂತನ ರಥ ನಿರ್ಮಾಣದ ವೆಚ್ಚ ಭರಿಸಿದ್ದಾರೆ. ಕೋಟೇಶ್ವರದ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಅವರ ಪುತ್ರ ಶಿಲ್ಪಿ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಇದೇ ಫೆಬ್ರವರಿಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುತ್ತಿದ್ದು, ಮಾರ್ಚ್‌ನಲ್ಲಿ ನಡೆಯಲಿರುವ ದೇಗುಲದ ರಥೋತ್ಸವದಲ್ಲಿ ನೂತನ ರಥ ಬಳಸುವ ಬಗ್ಗೆ ಯೋಜನೆ ರೂಪಿಸಲಾಗಿದೆ. ದೇಗುಲದಲ್ಲಿ ಈ ವರೆಗೆ ಬಳಸುತ್ತಿದ್ದ ರಥವು ಕೆಳದಿ ಅರಸರ ಕಾಲದ್ದಾಗಿದ್ದು, 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಆ ರಥದಲ್ಲಿದ್ದ ಶಿಲ್ಪಕಲೆಯಲ್ಲಿ ಯಾವುದೇ ಬದಲಾವಣೆಯಾಗದಂತೆ ನೂತನ ರಥದಲ್ಲಿ ಕೂಡ ರೂಪಿಸಿರುವುದು ರಥ ಶಿಲ್ಪಿಗಳ ಕೈಚಳಕವನ್ನು ಎತ್ತಿಹಿಡಿದಿದೆ. ಸುಮಾರು 42 ಜನ ಕುಶಲಕರ್ಮಿಗಳು 9 ತಿಂಗಳುಗಳ ಕಾಲ ಶ್ರಮವಹಿಸಿ ರಥವನ್ನು ಸಿದ್ಧಪಡಿಸಿದ್ದಾರೆ ಎನ್ನುತ್ತಾರೆ ರಥಶಿಲ್ಪಿ ರಾಜಗೋಪಾಲ ಆಚಾರ್ಯ.

ಒಟ್ಟಾರೆಯಾಗಿ ಹಳೆಯ ರಥದ ಜೆರಾಕ್ಸ್ ನಂತೆ ಹೊಸ ರಥ ನಿರ್ಮಾಣವಾಗಿದೆ. ಇನ್ನು, 400 ವರ್ಷಗಳ ಇತಿಹಾಸ ಹೊಂದಿರುವ ಹಳೆ ರಥವನ್ನು ದೇಗುಲದ ಆನೆಬಾಗಿಲಿನ ಬಳಿ ಸೂಕ್ತ ಸ್ಥಳದಲ್ಲಿ ಸಂರಕ್ಷಣೆ ಮಾಡಿ ಪಾರದರ್ಶಕ ಫ್ರೇಮ್‌ ಬಳಸಿ ಭಕ್ತರ ವೀಕ್ಷಣೆಗೆ ಇರಿಸುವ ಯೋಜನೆ ರೂಪಿಸಲಾಗಿದೆ. ಸದ್ಯ ನೂತನ ರಥವೇರಿ ಬರುವ ತಾಯಿ ಮೂಕಾಂಬಿಕೆಯ ದರ್ಶನ ಪಡೆಯಲು ಭಕ್ತರು ಕಾತುರದಿಂದ ಎದುರು ನೋಡುತ್ತಿದ್ದಾರೆ.

ವರದಿ: ದಿನೇಶ್ ಯಲ್ಲಾಪುರ್, ಟಿವಿ9, ಉಡುಪಿ

Published On - 11:35 am, Fri, 27 January 23

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್