AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಬಿಟ್​​ ಕಾರ್ಡ್​​ ವಂಚನೆ: ಉಡುಪಿಯ ವ್ಯಕ್ತಿಗೆ 2.12 ಲಕ್ಷ ರೂಪಾಯಿ ದೋಖಾ; ದೂರು ದಾಖಲು

ಉಡುಪಿಯ ಆಸ್ಪತ್ರೆಯೊಂದರಲ್ಲಿ ಡೆಬಿಟ್ ಕಾರ್ಡ್ ಬಳಸಿ ಬಿಲ್ ಪಾವತಿಸಿದ್ದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಅಪರಿಚಿತರು 2.12 ಲಕ್ಷ ರೂಪಾಯಿ ಹಣವನ್ನು ಸೈಬರ್ ವಂಚನೆ ಮೂಲಕ ದೋಚಿದ್ದಾರೆ. ಯಾವುದೇ ವ್ಯವಹಾರ ನಡೆಸದಿದ್ದರೂ ಖಾತೆಯಿಂದ ಹಣ ಕಡಿತವಾಗಿರುವ ಬಗ್ಗೆ ಮೊಬೈಲ್​​ಗೆ ಬಂದ ಸಂದೇಶ ಆಧರಿಸಿ ಪರಿಶೀಲಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಪೊಲೀಸ್​​ ದೂರು ದಾಖಲಾಗಿದೆ.

ಡೆಬಿಟ್​​ ಕಾರ್ಡ್​​ ವಂಚನೆ: ಉಡುಪಿಯ ವ್ಯಕ್ತಿಗೆ 2.12 ಲಕ್ಷ ರೂಪಾಯಿ ದೋಖಾ; ದೂರು ದಾಖಲು
ಸಾಂದರ್ಭಿಕ ಚಿತ್ರImage Credit source: Tv9 Kannada
ಪ್ರಸನ್ನ ಹೆಗಡೆ
|

Updated on: Jun 17, 2026 | 10:55 AM

Share

ಉಡುಪಿ, ಜೂನ್​​ 17: ರಾಜ್ಯದಲ್ಲಿ ಇತ್ತೀಚೆಗೆ ಸೈಬರ್​​ ವಂಚನೆ ಪ್ರಕರಗಳ ಮೇಲಿಂದ ಮೇಲೆ ವರದಿಯಾಗುತ್ತಿದ್ದು, ಪೊಲೀಸರು ಚಾಪೆ ಕೆಳಗೆ ತೂರಿದರೆ ವಂಚಕರು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ಸೈಬರ್​​ ಫ್ರಾಡ್​​ಗಳೀಗ ನಾನಾ ರೂಪಗಳನ್ನು ಪಡೆದುಕೊಂಡಿದ್ದು, ಜನಸಾಮಾನ್ಯರನ್ನು ಸುಲಭವಾಗಿ ಯಾಮಾರಿಸುವ ಕೆಲಸಗಳು ನಡೆಯುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಉಡುಪಿಯಲ್ಲೊಂದು ಪ್ರಕರಣ ನಡೆದಿದೆ. ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿದ್ದಾರೆ.

ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್‌ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್‌ಗೆ ತೆರಳಿ ವ್ಯವಹಾರಗಳ ವಿವರ ಪರಿಶೀಲಿಸಿದಾಗ ವಂಚನೆ ನಡೆದಿರೋದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಸಾವು ಹೀಗೂ ಬರಬಹುದು; ಉಡುಪಿಯಲ್ಲಿ ತೆಂಗಿನಕಾಯಿ ಬಿದ್ದು ಹಸುಗೂಸು ಸಾವು

ಪರಿಶೀಲನೆ ವೇಳೆ ಜೂನ್ 5ರಿಂದ 8ರ ನಡುವಿನ ಅವಧಿಯಲ್ಲಿ, ಅವರ ಅರಿವಿಲ್ಲದೆ 2.12 ಲಕ್ಷವನ್ನು ಅಪರಿಚಿತ ಖಾತೆಗೆ ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಹೀಗಾಗಿ ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(D) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಟೈಮ್ಸ್​​ ಆಫ್​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ