ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ಬನ್ನಿ; ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ: ಸಭೆಯಲ್ಲಿ ತೀರ್ಮಾನ

ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ಬನ್ನಿ; ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ: ಸಭೆಯಲ್ಲಿ ತೀರ್ಮಾನ
ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು

ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಹಿಜಾಬ್​ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ ಎಂದು ಉಡುಪಿಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದ್ದಾರೆ.

TV9kannada Web Team

| Edited By: ganapathi bhat

Jan 31, 2022 | 4:24 PM

ಉಡುಪಿ: ಇಲ್ಲಿನ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಸಲಾಗಿದೆ. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದಾರೆ. ಒಂದೂವರೆ ತಿಂಗಳುಗಳ ಕಾಲ ಈ ವಿವಾದ ನಡೆಯಿತು. ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ. ಹಿಜಾಬ್​ಗೆ ನಮ್ಮ ವಿರೋಧ ಇಲ್ಲ ಅದು ಇಸ್ಲಾಂನ ಪದ್ಧತಿ. ಶರಿಯತ್ ಆಧಾರಿತ ರಾಷ್ಟ್ರ ಬೇರೆ, ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿಕೆ ನೀಡಿದ್ದಾರೆ.

ನಾಳೆಯ ಒಳಗೆ ತೀರ್ಮಾನಕ್ಕೆ ಬರುವುದಾಗಿ ಮೂವರು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಹಿಜಾಬ್​ಗೆ ಪಟ್ಟು ಹಿಡಿದು ಅಭಿಪ್ರಾಯ ಹೇಳಿದ್ದಾಳೆ ಎಂದು ಉಡುಪಿಯಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ತಿಳಿಸಿದ್ದಾರೆ.

ಐವರು ಹಿಜಬ್ ಹೋರಾಟಗಾರ್ತಿಯರ ಪೈಕಿ ನಾಲ್ವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ಹಂತದಲ್ಲಿ ಹಿಜಾಬ್​ಗೆ ಅನುಮತಿ ಕೊಡಲು ಸಾಧ್ಯವಿಲ್ಲ. ಸರಕಾರ, ಸಮಿತಿ ತೀರ್ಮಾನ ಮಾಡಿದಂತೆ ಸಮವಸ್ತ್ರದಲ್ಲಿ ಕಾಲೇಜಿಗೆ ಬರಬೇಕು. ಎಲ್ಲಾ ವಿಚಾರಗಳನ್ನು ಪೋಷಕರಿಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದೆ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳುವ ಅವಕಾಶ ಇಲ್ಲ. ಮನೆಯ ಪುರುಷರ ಜೊತೆ ಮಾತನಾಡಿ ತೀರ್ಮಾನ ಎಂದು ಪೋಷಕರು ಹೇಳಿದ್ದಾರೆ. ಹಿಜಾಬ್ ತೆಗೆದು ಕ್ಲಾಸಿಗೆ ಬರುವುದಾದರೆ ನಾಳೆಯಿಂದ ಬನ್ನಿ. ನಾಳೆಯಿಂದ ಯಾವುದೇ ಕಾಲೇಜು ಆವರಣದಲ್ಲಿ ಗೊಂದಲ ನಿರ್ಮಾಣಕ್ಕೆ ಅವಕಾಶವಿಲ್ಲ. ಮಾಧ್ಯಮ, ಸಂಘಸಂಸ್ಥೆ, ಸಂಘಟನೆಗೆ ಪ್ರವೇಶ ಇಲ್ಲ ಎಂದು ತಿಳಿಸಲಾಗಿದೆ.

ಎರಡು ತಿಂಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದೆ. ಕಾಲೇಜಿನ ಬೇರೆ ಮಕ್ಕಳಿಂದ ಪೋಷಕರಿಂದ ದೂರುಗಳು ಬಂದಿವೆ. ಮನವಿ ಕೊಡುವುದಿದ್ದರೆ ಡಿಸಿಗೆ ಕೊಡಿ ಕಾಲೇಜಿಗೆ ಯಾರೂ ಬರುವಂತಿಲ್ಲ. ಶಿಸ್ತು ಪಾಲಿಸುವವರು ಕಾಲೇಜಿಗೆ ಬರಬಹುದು ಇನ್ನು. ಗೊಂದಲಕ್ಕೆ ಅವಕಾಶ ಇಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಭಟ್ ಹೇಳಿಕೆ ನೀಡಿದ್ದಾರೆ.

ಬೆಂಗಳೂರು: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಕೊಠಡಿಯೊಂದರಲ್ಲಿ ರೈಲ್ವೆ ಕೂಲಿಗಳು ನಮಾಜ್; ವಿಡಿಯೋ ವೈರಲ್

ಇತ್ತ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್​ಫಾರ್ಮ್ 5 ರಲ್ಲಿ ಇರುವ ಕೊಠಡಿಯೊಂದರಲ್ಲಿ ರೈಲ್ವೆ ಕೂಲಿಗಳು ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೇ ನಿಲ್ದಾಣದಲ್ಲಿರುವ ಕೂಲಿಗಳಿಗೆ ವಿಶ್ರಾಂತಿ ಪಡೆಯಲು ಮೀಸಲಿಡಲಾಗಿರುವ ಕೊಠಡಿಯಲ್ಲಿ ಸಿಬ್ಬಂದಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕೊಠಡಿಯೊಳಗೆ ಮುಸ್ಲಿಂ ಸಮುದಾಯದ ಕೂಲಿಗಳು ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ವಿಡಿಯೋ ವೈರಲ್ ಹಿನ್ನಲೆ ರೈಲ್ವೆ ನಿಲ್ದಾಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಉಡುಪಿ ಕಾಲೇಜಿನ ಹಿಜಾಬ್ ವಿಚಾರ: ಹಿಂದೆ ಯಾವತ್ತೂ ಇರದ ಸಮಸ್ಯೆ ಈ ವರ್ಷ ಆರಂಭವಾಗಿದೆ ಎಂದರು ಶಿಕ್ಷಣ ಸಚಿವ ಬಿಸಿ ನಾಗೇಶ

ಇದನ್ನೂ ಓದಿ: ಶಾಲೆಗಳಲ್ಲಿ ಹಿಜಾಬ್: ತ್ರಿವಳಿ ತಲಾಕ್ ನಿಷೇಧ ಮಾಡಿದಂತೆ ರಾಜ್ಯ ದೇಶದಲ್ಲಿ ಬುರ್ಖಾ ನಿಷೇಧಿಸಬೇಕು ಎಂದ ರಿಷಿ ಕುಮಾರ ಸ್ವಾಮೀಜಿ

Follow us on

Related Stories

Most Read Stories

Click on your DTH Provider to Add TV9 Kannada