ಅನ್ನದಲ್ಲಿ ವಿಷ ಬೆರೆಸಿ ಗಂಡನಿಗೆ ಕೈ ತುತ್ತು ತಿನ್ನಿಸಿ ಕೊಂದ ಪತ್ನಿ, ಆ ವಿಷ ಯಾವುದು ಗೊತ್ತಾ?

ಕರಿಮಣಿ ಮಾಲೀಕನನ್ನು ಕೊಂದ ರಿಲ್ಸ್ ರಾಣಿ ಪ್ರತಿಮಾ ಇದೀಗ ಜೈಲು ಸೇರಿದ್ದಾಳೆ. ಕೊಲೆ ಕೃತ್ಯದಲ್ಲಿ ಪ್ರಮುಖ ಪಾತ್ರವಹಿಸಿದ ಆಕೆಯ ಪ್ರೇಮಿ ದಿಲೀಪ್ ಹೆಗ್ಡೆಯನ್ನು ಪೊಲೀಸ್ ಕಸ್ಟಡಿಯಲ್ಲಿದ್ದಾನೆ.ಹಾಲು ಜೇನಿನಂತಿದ್ದ ದಂಪತಿಗಳ ಬದುಕು, ಅಕ್ರಮ ಸಂಬಂಧದ ವಿಷಪ್ರಾಶನದಿಂದ ಮೂರಾ ಬಟ್ಟೆಯಾಗಿದೆ. ಪೊಲೀಸರ ವಶದಲ್ಲಿ ಪ್ರತಿಮಾ ತನ್ನ ಪತಿಯನ್ನು ಕೊಂದ ಬಗೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ.

ಅನ್ನದಲ್ಲಿ ವಿಷ ಬೆರೆಸಿ ಗಂಡನಿಗೆ ಕೈ ತುತ್ತು ತಿನ್ನಿಸಿ ಕೊಂದ ಪತ್ನಿ, ಆ ವಿಷ ಯಾವುದು ಗೊತ್ತಾ?
ಆರೋಪಿ ಪ್ರತಿಮಾ
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ

Updated on: Oct 27, 2024 | 10:41 AM

ಉಡುಪಿ, ಅಕ್ಟೋಬರ್​ 27: ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರತಿಮಾಳನ್ನು ಬಂಧಿಸಿ, ಪೊಲೀಸರು (Police) ವಿಚಾರಣೆ ನಡೆಸುತ್ತಿದ್ದಾರೆ. ಅಜೆಕಾರು ಠಾಣೆ ಪೊಲೀಸರ ವಿಚಾರಣೆ ವೇಳೆ ಆರೋಪಿ ಪ್ರತಿಮಾ ಪತಿ ಬಾಲಕೃಷ್ಣ (44) ಅವರನ್ನು ಹತ್ಯೆ ಮಾಡಿದ್ದು ಹೇಗೆ ಎಂಬುವುದನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾಳೆ.

ಅಕ್ಟೋಬರ್​ 20ರ ತಡರಾತ್ರಿ ಬಾಲಕೃಷ್ಣ ಮೃತಪಟ್ಟಿದ್ದಾರೆ. ಸಾವಿಗೂ ಮುನ್ನ ಕಳೆದ 25 ದಿನಗಳಿಂದ ಜ್ವರ, ವಾಂತಿಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ಅವರನ್ನು ಕೆಎಂಸಿ, ನಿಮಾನ್ಸ್​ ಮತ್ತು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಸಿದ್ದರೂ, ಪ್ರಯೋಜನವಾಗಲಿಲ್ಲ. ಬಾಲಕೃಷ್ಣ ಉಸಿರು ಚಲ್ಲಿದರು. ಆದರೆ, ಬಾಲಕೃಷ್ಣ ಮೃತಪಟ್ಟಿದ್ದು ಕಾಯಿಲೆಯಿಂದ ಅಲ್ಲ, ಕೊಲೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ.

ತಮ್ಮ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಬಾಲಕೃಷ್ಣ ಅವರನ್ನು ಮುಗಿಸಲು ಪ್ರತಿಮಾ ಮತ್ತು ಈಕೆಯ ಪ್ರಿಯಕರ ದಿಲೀಪ್​ ಹೆಗ್ಡೆ ಖತರ್ನಾಕ್​ ಪ್ಲಾನ್​​ ಮಾಡಿದ್ದರು. ಬಾಲಕೃಷ್ಣ ಅವರನ್ನು ಕೊಲೆ ಮಾಡಲು ಆರೋಪಿಗಳು ಒಂದು ತಿಂಗಳಿನಿಂದ ಹೊಂಚು ಹಾಕಿ ಸಂಚು ರೂಪಿಸಿದ್ದರು. ತನ್ನ ಪತಿ ಕಾಯಿಲೆಯಿಂದ ಮೃತಪಟ್ಟ ಅಂತ ನಂಬಿಸಲು ಪತ್ನಿ ಪ್ರತಿಮಾ, ಬಾಲಕೃಷ್ಣ ಅವರಿಗೆ ಸ್ಲೋ ಪಾಯ್ಸನ್​​ ನೀಡುತ್ತಿದ್ದಳಂತೆ. ಅಲ್ಲದೇ, ಈ ಸ್ಲೋ ಪಾಯ್ಸನ್​ ಅನ್ನು ಪ್ರಿಯಕರ ದಿಲೀಪ್​ ಹೆಗ್ಡೆ ತಂದುಕೊಟ್ಟಿದ್ದಾನೆ ಎಂದು ಪೊಲೀಸರ ವಿಚಾರಣೆಯಲ್ಲಿ ಬಾಯಿ ಬಿಟ್ಟಿದ್ದಾಳೆ.

ಇದನ್ನೂ ಓದಿ: ಕರಿಮಣಿ ಮಾಲೀಕ ನೀನಲ್ಲ ಎಂದ ರೀಲ್ಸ್ ರಾಣಿ…ಲವರ್ ಜತೆ ಸೇರಿ ತಾಳಿ ಕಟ್ಟಿದವನನ್ನೇ ಕೊಂದಳು!

ಅನ್ನದಲ್ಲಿ ಸ್ಲೋ ಪಾಯ್ಸನ್​​

ಪ್ರತಿಮಾ ಪತಿ ಬಾಲಕೃಷ್ಣ ಅವರಿಗೆ ಅನ್ನದಲ್ಲಿ ರಕ್ತದ ಕ್ಯಾನ್ಸರ್​ಗೆ ನೀಡುವ Arsenic Trioxide ಎಂಬ ಕಿಮೋಥೆರಪಿ ಮದ್ದು ಬೆರಸಿ ನೀಡುತ್ತಿದ್ದಳು. ಈ ಮದ್ದು ಯಾವುದೇ ಟೇಸ್ಟ್​ ಹೊಂದಿರುವುದಿಲ್ಲ. ಕಳೆದ ಒಂದೂವರೆ ತಿಂಗಳಿನಿಂದ ಅನ್ನದ ಜೊತೆ ಮದ್ದನ್ನು ಬೆರೆಸಿ ನೀಡುತ್ತಿದಳು. ವಿಷ ಇದೆ ಎಂದು ಅರಿಯದೆ ಬಾಲಕೃಷ್ಣ ಊಟ ಮಾಡುತ್ತಿದ್ದರು. ಹಲವು ಬಾರಿ ವಿಷದ ಅನ್ನವನ್ನೇ ಪ್ರತಿಮಾ ಕೈ ತುತ್ತು ಮಾಡಿ ಬಾಲಕೃಷ್ಣ ಅವರಿಗೆ ತಿನ್ನಿಸುತ್ತಿದ್ದಳು ಎಂಬುವುದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ವಿಷಪೂರಿತ ಅನ್ನ ತಿಂದು ಬಾಲಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಪತಿ ಬಾಲಕೃಷ್ಣ ಅವರನ್ನು ಉಸಿರುಗಟ್ಟಿಸಿ ಪ್ರತಿಮಾ ಕೊಲೆ ಮಾಡಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ