AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ನಕ್ಸಲ್ ನಿಗ್ರಹ ಪಡೆ ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ

ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ಎನ್​ಕೌಂಟರ್ ನಡೆದಿದೆ. ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ.

ಉಡುಪಿ: ನಕ್ಸಲ್ ನಿಗ್ರಹ ಪಡೆ ಎನ್​ಕೌಂಟರ್​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ ಬಲಿ
ನಕ್ಸಲ್ ನಾಯಕ‌ ವಿಕ್ರಂ ಗೌಡ
ಪ್ರಜ್ವಲ್ ಅಮೀನ್​, ಉಡುಪಿ
| Updated By: Ganapathi Sharma|

Updated on:Nov 19, 2024 | 7:35 AM

Share

ಉಡುಪಿ, ನವೆಂಬರ್ 19: ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ.

ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.

13 ವರ್ಷಗಳ ಬಳಿಕ ಎನ್​ಕೌಂಟರ್

ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್​ಕೌಂಟರ್​ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.

ಯಾರು ಈ ವಿಕ್ರಂ ಗೌಡ?

ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಹತನಾಗಿದ್ದಾನೆ.

ಇದನ್ನೂ ಓದಿ: ಯಾರು ಈ ವಿಕ್ರಂ ಗೌಡ? ಎನ್​ಕೌಂಟರ್​ಗೆ ಬಲಿಯಾದ ನಕ್ಸಲನ ಹಿನ್ನೆಲೆ ಇಲ್ಲಿದೆ

ಮತ್ತೆ ಬಿರುಸುಗೊಳ್ಳುತ್ತಿರುವ ನಕ್ಸಲ್ ಚಟುವಟಿಕೆ

ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಮಲೆನಾಡಿನಲ್ಲಿ ನಕ್ಸಲ್ ಚಟುವಟಿಕೆ ಮರುಜೀವಕ್ಕೆ ಈ ಅಂಶವೇ ಕಾರಣವಾಯ್ತಾ!

ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:45 am, Tue, 19 November 24

ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ
ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದೇಕೆ? ಡಿಕೆಶಿ ಅಚ್ಚರಿಯ ಹೇಳಿಕೆ