ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಉದ್ಯೋಗಕ್ಕೆಂದು ಬಂದಿದ್ದ ಬಾಂಗ್ಲಾದ 9 ಪ್ರಜೆಗಳು ವಶ
ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಉಡುಪಿ ತಾಲೂಕಿನ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ತಿಳಿದುಬಂದಿದೆ. ಸದ್ಯ ಮಲ್ಪೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಉಡುಪಿ, ಅ.12: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು, ಉತ್ತರ ಪ್ರದೇಶದಲ್ಲಿ ಇಬ್ಬರು ಪಾಕ್ ಪ್ರಜೆಗಳನ್ನು ಬಂಧಿಸಲಾಗಿದೆ. ಇದರ ನಡುವೆ ಇದೀಗ ಉಡುಪಿಯ ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಭಾರತಕ್ಕೆ ನುಸುಳುಕೋರರ ಆತಂಕ ಎದುರಾಗಿದೆ.
ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಉಡುಪಿ ತಾಲೂಕಿನ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆಯಲಾಗಿದೆ. ಮೊದಲಿಗೆ ಮಹಮ್ಮದ್ ಮಾಣಿಕ್ ಎಂಬ ವ್ಯಕ್ತಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ. ಆಗ ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿತ್ತು. ಬಳಿಕ ಈತನ ವಿಚಾರಣೆ ವೇಳೆ ಇನ್ನೂ ಹಲವರು ಮಲ್ಪೆಯಲ್ಲಿರುವುದು ತಿಳಿದುಬಂದಿದೆ. ಸದ್ಯ ಈಗ ಮಲ್ಪೆಯಲ್ಲಿ ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಸೇರಿದಂತೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಈ ಆರೋಪಿಗಳು ನಕಲಿ ಭಾರತೀಯ ದಾಖಲಾತಿ ಸೃಷ್ಟಿಸಿ ಉಡುಪಿಗೆ ಪ್ರವೇಶಿಸಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ಎಂಬಾತ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದಾನೆಂದು ತಿಳಿದುಬಂದಿದೆ. ಹಾಗೂ ಆರೋಪಿಗಳ ಪೈಕಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ತಿಳಿದುಬಂದಿದೆ. ಸದ್ಯ ಮಲ್ಪೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಅರೆಸ್ಟ್ ಆದ ಬೆನ್ನಲ್ಲೇ ಹೆಚ್ಚಿನ ತನಿಖೆಗಾಗಿ ಪೊಲೀಸರ 4 ತಂಡಗಳ ರಚನೆ ಮಾಡಿ ವಿವಿಧ ರಾಜ್ಯಗಳಿಗೆ ಕಳುಹಿಸಿಕೊಡಲಾಗಿತ್ತು. ಚೆನ್ನೈ, ದೆಹಲಿ, ಹೈದರಾಬಾದ್ಗೆ ತೆರಳಿದ್ದ ಪೊಲೀಸರ ತಂಡ ಮೆಹದಿ ಫೌಂಡೇಷನ್ ಸಂಪರ್ಕದಲ್ಲಿದ್ದ ಒಟ್ಟು 22 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮೆಹದಿ ಫೌಂಡೇಶನ್‌ನ ಭಾರತದ ಉಸ್ತುವಾರಿ ಹೊಣೆ ಹೊತ್ತಿದ್ದ ಉತ್ತರಪ್ರದೇಶ ಮೂಲದ ಪರ್ವೇಜ್ ಅಹಮದ್ (55) ಪಾಕ್ ಪ್ರಜೆಗಳನ್ನು ಅಕ್ರಮವಾಗಿ ನೆಲೆಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ. ಈತ ಯಾರ ಬಳಿಯಿಂದ ಪಾಕ್ ಪ್ರಜೆಗಳಿಗೆ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಮಾಡಿಸಿಕೊಡುತ್ತಿದ್ದ ಎಂಬುದೂ ಸೇರಿದಂತೆ ಇನ್ನಿತರೆ ವಿಚಾರಗಳ ಕುರಿತು ವಿಸ್ತೃತ ತನಿಖೆ ನಡೆಯುತ್ತಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 11:56 am, Sat, 12 October 24