ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಕೇಸ್: ಮೊದಲ ಹಂತದ ತನಿಖೆ ಅಂತ್ಯ, ಆ ಒಂದು ವರದಿಗೆ ಕಾಯುತ್ತಿರುವ ಸಿಐಡಿ

ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿರುವ ಸಿಐಡಿ ತಂಡ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದೆ. ಕಾಲೇಜಿನ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿರುವ ಸಿಐಡಿ ತಂಡ ಸಂತ್ರಸ್ತೆ ಮತ್ತು ಮೂವರು ಅರೋಪಿಯನ್ನು ಭೇಟಿಯಾಗಿ ವಿಚಾರಣೆ ನಡೆಸಿದೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಕೇಸ್: ಮೊದಲ ಹಂತದ ತನಿಖೆ ಅಂತ್ಯ, ಆ ಒಂದು ವರದಿಗೆ ಕಾಯುತ್ತಿರುವ ಸಿಐಡಿ
ಉಡುಪಿಯಲ್ಲಿ ಸಿಐಡಿ ಅಧಿಕಾರಿಗಳು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಆಯೇಷಾ ಬಾನು

Updated on:Aug 16, 2023 | 11:42 AM

ಉಡುಪಿ, ಆ.16: ಉಡುಪಿ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು(Udupi Washroom Video Case) ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ(CID) ತಂಡದ ಮೊದಲನೇ ಹಂತದ ತನಿಖೆ ಮುಗಿದಿದೆ. ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬಂಧಪಟ್ಟ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿ ಬೆಂಗಳೂರಿಗೆ ತೆರಳಿದೆ.

ಉಡುಪಿಯ ಕಾಲೇಜಿನಲ್ಲಿ ಜುಲೈ 18ರಂದು ನಡೆದ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟ ಹಾಗೆ ಸಿಐಡಿ ತನಿಖೆ ಪ್ರಗತಿಯಲ್ಲಿದೆ. ಈ ಮೊದಲು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಪೊಲೀಸ್ ತನಿಖೆ ವಿಚಾರವಾಗಿ ಒಂದಿಷ್ಟು ಅಪಸ್ವರಗಳು ಬಂದ ಹಿನ್ನೆಲೆಯಲ್ಲಿ ತನಿಕಾ ಅಧಿಕಾರಿಗಳನ್ನು ಬದಲಾಯಿಸಲಾಗಿತ್ತು. ಆದರೂ ಪೊಲೀಸ್ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಹಿಂದೂ ಸಂಘಟನೆ ಮತ್ತು ಬಿಜೆಪಿ ಮುಖಂಡರುಗಳು ವಿಶೇಷ ಎಸ್ಐಟಿ ತಂಡ ರಚಿಸಿ ತನಿಖೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿತ್ತು. ಆದರೆ ರಾಜ್ಯ ಸರ್ಕಾರ ಸಿಐಡಿ ಗೆ ಪ್ರಕರಣವನ್ನ ಹಸ್ತಾಂತರಿಸಿದ್ದು ಸದ್ಯ ತನಿಖೆ ಪ್ರಗತಿಯಲ್ಲಿದೆ.

ಕಳೆದ ಒಂದು ವಾರದಿಂದ ಉಡುಪಿಯಲ್ಲಿ ಬೀಡು ಬಿಟ್ಟಿರುವ ಸಿಐಡಿ ತಂಡ ಪ್ಯಾರಾ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿ ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದೆ. ಕಾಲೇಜಿನ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿರುವ ಸಿಐಡಿ ತಂಡ ಸಂತ್ರಸ್ತೆ ಮತ್ತು ಮೂವರು ಅರೋಪಿಯನ್ನು ಭೇಟಿಯಾಗಿ ವಿಚಾರಣೆ ನಡೆಸಿದೆ. ಘಟನೆಯ ಬಗ್ಗೆ ಕೂಲಂಕುಶ ತನಿಕೆ ನಡೆಸುವ ಹಿನ್ನಲೆಯಲ್ಲಿ ಘಟನೆಯ ಮರು ಸೃಷ್ಟಿಯನ್ನು ಮಾಡಿದ್ದ ಸಿಐಡಿ ತಂಡ ಪ್ಲಾಸ್ಟಿಕ್ ಬೊಂಬೆಗಳನ್ನ ಬಳಸಿ ಕಾಲೇಜಿನ ಶೌಚಾಲಯದಲ್ಲಿ ಮತ್ತೆ ಘಟನೆಯನ್ನು ಮರು ಸೃಷ್ಟಿ ಮಾಡಿತ್ತು.

ಇದನ್ನೂ ಓದಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಅಲ್ಲದೆ ಸರ್ಚ್ ವಾರೆಂಟ್ ಪಡೆದು ಆಪಾದಿತರ ಮನೆಯನ್ನು ಸರ್ಚ್ ಮಾಡಿದ್ದ ಸಿಐಡಿ ತಂಡ ಪ್ರಕರಣಕ್ಕೆ ಸಂಬಂಧಪಟ್ಟ ಪ್ರತಿಯೊಂದು ಅಂಕಿ ಅಂಶಗಳನ್ನ ಮತ್ತು ಘಟನಾವಳಿಗಳನ್ನ ಕೂಲಂಕುಶವಾಗಿ ಪರಿಶೀಲನೆ ನಡೆಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬಿಕರ್ ಮತ್ತು ಎಸ್ ಪಿ ರಾಘವೇಂದ್ರ ಹೆಗಡೆ ಅವರ ನೇತೃತ್ವದಲ್ಲಿ ತನಿಖಾದಿಕಾರಿ ಡಿವೈಎಸ್ಪಿ ಅಂಜುಮಾಲ ಅವರು ಒಂದು ವಾರದಿಂದ ಉಡುಪಿಯಲ್ಲಿ ಇದ್ದು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಸದ್ಯ ಬೆಂಗಳೂರಿಗೆ ತೆರಳಿದ್ದಾರೆ.

ಒಟ್ಟಾರೆಯಾಗಿ ಸಿಐಡಿ ಒಂದು ಹಂತದ ತನಿಖೆ ಮುಕ್ತಾಯಗೊಳಿಸಿದ್ದು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದ್ದ ಮೊಬೈಲ್ ನ ಎಫ್​ಎಸ್​ಎಲ್ ವರದಿಗಾಗಿ ಸಿಐಡಿ ತನಿಖಾ ತಂಡ ಕಾಯುತ್ತಿದೆ. ವಿದ್ಯಾರ್ಥಿನಿಯರಿಂದ ಪಡೆಯಲಾಗಿದ್ದ ಮೂರು ಮೊಬೈಲ್​ಗಳ ಎಫ್​ಎಸ್​ಎಲ್ ವರದಿ ಬಂದ ತಕ್ಷಣ ಪ್ರಕರಣದ ಸತ್ಯತೆ ಹೊರಗೆ ಬೀಳುವ ಸಾಧ್ಯತೆ ದಟ್ಟವಾಗಿದೆ.

ಉಡುಪಿಗೆ ಸಂಬಂಧಪಟ್ಟ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:35 am, Wed, 16 August 23

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್