ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವಯೋವೃದ್ಧೆ
ವಿಶೇಷ ಚೇತನರು, ಹಿರಿಯ ನಾಗರಿಗೆ ಮನೆಯಿಂದಲೇ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ನೀಡಿದೆ. ಅದರಂತೆ ಏಪ್ರಿಲ್ 13 ರಿಂದ 15ರವರಗೆ ಮನೆಯಿಂದಲೇ ಮತದಾನ ಪ್ರಕ್ರಿಯೆ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದ 83 ವರ್ಷದ ಪಿ.ಯಶೋಧಾ ಅವರು ಮನೆಯಿಂದ ಮತದಾನ ಮಾಡಿ ಕೆಲವೇ ಕ್ಷಣದಲ್ಲಿ ನಿಧನರಾಗಿದ್ದಾರೆ.
ಉಡುಪಿ, ಏಪ್ರಿಲ್ 17: ಬ್ರಹ್ಮಾವರ (Bramhavar) ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಅವರು ಮನೆಯಲ್ಲಿ ಮತದಾನ (Voting) ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಚುನಾವಣಾ ಆಯೋಗ (Election Commission) ವಿಶೇಷ ಚೇತನರು, ಹಿರಿಯ ನಾಗರಿಕರಿಗೆ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಹೀಗಾಗಿ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ದಿ.ನಾರಾಯಣ ಉಪಾಧ್ಯ ಅವರ ಪತ್ನಿ ಪಿ.ಯಶೋಧಾ ಅವರು ಮನೆಯಲ್ಲೆ ಮತದಾನ ಮಾಡಿದರು.
ಮತದಾನದ ದಿನ ಪಿ.ಯಶೋಧಾ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆದರೆ ಮತದಾನ ಮಾಡಿ ಆಸ್ಪತ್ರೆ ತೆರಳಲು ಪಿ.ಯಶೋಧಾ ನಿಶ್ಚಯಿಸಿದ್ದರು. ಮತದಾನ ಮಾಡಿದ ಬಳಿಕ ಪಿ.ಯಶೋಧಾ ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕ್ಸತ್ಸೆ ಫಲಕಾರಿಯಾಗದೆ ಪಿ.ಯಶೋಧಾ ಅವರು ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ.
ಅಪ್ಡೇಟ್ ಮಾಡಲಾಗುತ್ತಿದೆ..
Published On - 10:46 am, Wed, 17 April 24