AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ಶಂಕೆ

ಸಾಲ ತೀರಿಸಿದರೂ ದಾಖಲೆ ಪತ್ರಗಳನ್ನು ವಾಪಸ್ ನೀಡದೆ ಉಪ್ಪುಂದದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಮ್ಯಾನೇಜರ್​​ ಗ್ರಾಹಕರ ಜತೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಾಖಲೆ ಪತ್ರ ಕೇಳಲು ಹೋದವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದೂ ಹೇಳಲಾಗಿದೆ. ಇದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಉಡುಪಿ: ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ಶಂಕೆ
ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ಶಂಕೆ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Feb 12, 2024 | 2:31 PM

Share

ಉಡುಪಿ, ಫೆಬ್ರವರಿ 12: ಉಡುಪಿ (Udupi) ಜಿಲ್ಲೆಯ ಬೈಂದೂರು (Byndoor) ತಾಲೂಕಿನ ಉಪ್ಪುಂದದ (Uppunda) ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದಲ್ಲಿ ಭಾರೀ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸಹಕಾರಿ ಸಂಘದಲ್ಲಿ ಅಡವಿಟ್ಟ ದಾಖಲೆ ಪತ್ರವೇ ಕಾಣೆಯಾಗಿದ್ದು, ಕೇಳಲು ಹೋದ ಸಾಲಗಾರರನ್ನು ಮ್ಯಾನೇಜರ್‌ ಬೆದರಿಸಿ ಬ್ಯಾಂಕ್‌ನಿಂದ ಹೊರಗಟ್ಟಿದ್ದಾರೆ. ಇದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಸುಶೀಲಾ ಎಂಬವರು 2017ರಲ್ಲಿ ಆಸ್ತಿ ಪತ್ರವಿಟ್ಟು 15 ಲಕ್ಷ ರೂಪಾಯಿ ಸಾಲ ಪಡೆದಿದ್ದರು. 10 ವರ್ಷದ ಅವಧಿಗಾಗಿ ಪಡೆದಿದ್ದ ಸಾಲವನ್ನು 2023ರ ನವೆಂಬರ್‌ನಲ್ಲೇ ಮರು ಪಾವತಿಸಿದ್ದರು. ಮುಂಚಿತವಾಗಿಯೇ ಮರು ಪಾವತಿ ಮಾಡಿದ್ದರೂ ಅಡವಿಟ್ಟ ಆಸ್ತಿ ಪತ್ರದ ದಾಖಲೆಯನ್ನು ಮ್ಯಾನೇಜರ್‌ ವಾಪಸ್ ನೀಡಿಲ್ಲ. 2-3 ಬಾರಿ ಬ್ಯಾಂಕ್‌ನಲ್ಲಿ ವಿಚಾರಿಸಿದರೂ ಸಿಬ್ಬಂದಿ ಸ್ಪಂದಿಸಿಲ್ಲ.

ಕಳೆದ ಜನವರಿ ತಿಂಗಳಿನಲ್ಲಿ ದಾಖಲೆ ಪತ್ರ ಕೇಳಲು ಹೋಗಿದ್ದಾಗ ಸುಶೀಲಾ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿತ್ತು ಎಂದು ಆರೋಪಿಸಲಾಗಿದೆ. ಬ್ಯಾಂಕ್‌ ಸಿಬ್ಬಂದಿಗೆ ಹೇಳಿ ಸುಶೀಲಾ ಮತ್ತು ಅವರ ಪುತ್ರನನ್ನು ಮ್ಯಾನೇಜರ್‌ ಹೊರಗಟ್ಟಿದ್ದರು. ದಾಖಲೆ ಪತ್ರ ದುರುಪಯೋಗ ಪಡಿಸಿಕೊಂಡಿರುವ ಸಾಧ್ಯತೆ ಬಗ್ಗೆ ಕುಟುಂಬದವರು ಈಗ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಡುಪಿ: ಪಿಎಸ್​ಐ, ಗೃಹರಕ್ಷಕ ದಳದ ಅಧಿಕಾರಿ ಮೇಲೆ ತಂಡದಿಂದ ಹಲ್ಲೆ, ಜೀಪು ಜಖಂ

ಇದೀಗ ಸಹಕಾರಿ ಬ್ಯಾಂಕ್‌ ಮ್ಯಾನೇಜರ್‌ ಪ್ರಕಾಶ್‌ ಚಂದ್ರ ಶೆಟ್ಟಿ ಸೇರಿ ನಾಲ್ವರ ವಿರುದ್ಧ ಸುಶೀಲಾ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?