ಉಡುಪಿ ಜಿಲ್ಲೆಗೆ ಪ್ರವಾಸಕ್ಕೆ ತೆರಳುವವರಿಗೆ ಕಹಿ ಸುದ್ದಿ! ಮಲ್ಪೆ ಬೀಚ್ ಪ್ರವೇಶ ನಿಷೇಧ
Tourist banned to Malpe Beach: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಗಾಳಿ-ಮಳೆಯಿಂದ ಸಮುದ್ರದಲ್ಲಿ ಭಾರಿ ಪ್ರಮಾಣದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿನ ಮಲ್ಪೆ ಬೀಚ್ನಲ್ಲಿ ಇಳಿಯಲು ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಉಡುಪಿ, ಜೂನ್ 11: ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಮಳೆಗಾಲದಲ್ಲಿ ಮಳೆ-ಗಾಳಿಗೆ ಸಮುದ್ರಗಳ ಅಬ್ಬರ ಜೋರಾಗಿರುತ್ತದೆ. ಕಡಲು ತೀರ ಉಡುಪಿ (Udupi) ಜಿಲ್ಲೆಯಲ್ಲಿ ಬಿಟ್ಟು, ಬಿಡದೆ ವರುಣ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಪೆ ಬೀಚ್‌ಗೆ (Malpe Beach) ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಮಲ್ಪೆ ಬೀಚ್‌ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ.
ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿಯನ್ನು ಸದ್ಯಕ್ಕೆ ನಿರ್ಮಿಸಲಾಗಿದೆ. ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಲಾಗಿದೆ. ಇದರ ಜೊತೆಗೆ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಎಟಿಬಿ ಸ್ಯಾಂಡ್ ಬೈಕ್ ಮೂಲಕ ಬೀಚ್ನ್ನು ಗಸ್ತು ತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಾ, ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮುದ್ರ ಪ್ರಸಿದ್ಧಿ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಬಲೆಯನ್ನು ದಾಟಿ ಹೋಗದಂತೆ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದು ಪ್ರವಾಸಿಗ ಸಾವು
ಮಳೆಗಾಲದ ಅರಿವೇ ಇಲ್ಲದ ಹೊರ ಜಿಲ್ಲೆ ಮತ್ತು ಹೊರರಾಜ್ಯದ ಪ್ರವಾಸಿಗರು ಮಲ್ಪೆ ಬೀಚ್‌ಗೆ ಇನ್ನೂ ಕೂಡ ಭೇಟಿ ನೀಡುತ್ತಿದ್ದು ಬೀಚ್ನ ನೀರಿನಲ್ಲಿ ಆಟವಾಡಲು ಅವಕಾಶ ಸಿಗದೆ ಇರುವ ಹಿನ್ನೆಲೆಯಲ್ಲಿ ಬೇಸರದಿಂದ ಹಿಂದಿರುಗುತ್ತಿದ್ದಾರೆ. ಇನ್ನು ಕೆಲವು ಪ್ರವಾಸಿಗರು ಬೀಚ್ನ ಮರಳಿನ ಮೇಲೆ ಆಟವಾಡುತ್ತಾ, ವಿಡಿಯೋ ಚಿತ್ರಿಸಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡು ತೆರುಳುತ್ತಿದ್ದಾರೆ.
ಸೂಚನೆ ಪಾಲಿಸದೆ ಸಮುದ್ರಕ್ಕೆ ಇಳಿಯುವ ಪ್ರವಾಸಿಗರು
ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಇಷ್ಟೆಲ್ಲ ಕ್ರಮ ಕೈಗೊಂಡಿದ್ದರೂ ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸಿ ಭಾನುವಾರ ಪ್ರವಾಸಿಗರು ಸೀ ವಾಕ್ ವೇ ಬಳಿ ನೀರಿಗೆ ಇಳಿದಿದ್ದರು. ಈ ಕುರತಿಯ ಜೀವರಕ್ಷಕರು ಮಾತನಾಡಿ, ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನಿರ್ಬಂಧಗಳನ್ನು ಜಾರಿಗೊಳಿಸಲು ಮತ್ತು ಅಪಾಯಕಾರಿ ಮಾನ್ಸೂನ್ ಅವಧಿಯಲ್ಲಿ ಪ್ರವಾಸಿಗರು ನೀರಿಗೆ ಇಳಿಯುವುದನ್ನು ತಡೆಯಲು ಸ್ಥಳೀಯ ಪೊಲೀಸರ ಸಹಾಯ ಬೇಕು ಎಂದು ಮನವಿ ಮಾಡಿದ್ದಾರೆ.
ಜಿಲ್ಲಾಡಳಿತ ನೀಡಿದ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ನಿರ್ಲಕ್ಷಿಸಿ ಗಣನೀಯ ಸಂಖ್ಯೆಯಲ್ಲಿ ಪ್ರವಾಸಿಗರು ಮಲ್ಪೆ ಬೀಚ್‌ಗೆ ಆಗಮಿಸಿದ್ದಾರೆ. ಹಲವಾರು ನಿರ್ಬಂಧಗಳು ಮತ್ತು ಸಲಹೆಗಳ ಹೊರತಾಗಿಯೂ, ಅನೇಕ ಪ್ರವಾಸಿಗರು ಜೀವರಕ್ಷಕರ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ಕಡಲತೀರದ ದಕ್ಷಿಣ ಭಾಗದಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ ಎಂದು ಸ್ಥಳೀಯರು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ