Udupi News: ಖಾಸಗಿ ಬಸ್​ಗೆ ಕಾರು ಡಿಕ್ಕಿ: ಇಬ್ಬರು ಶಿಕ್ಷಕರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ

ಖಾಸಗಿ ಬಸ್​ಗೆ ಅಭಿಮುಖವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಉಡುಪಿ ಮೂಲದ ಇಬ್ಬರು ಶಿಕ್ಷಕರು ಸಾವನ್ನಪ್ಪಿದ್ದು, ಇನ್ನೋರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವಂತಹ ಘಟನೆ ಹೆಬ್ರಿ  ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ನಡೆದಿದೆ.

Udupi News: ಖಾಸಗಿ ಬಸ್​ಗೆ ಕಾರು ಡಿಕ್ಕಿ: ಇಬ್ಬರು ಶಿಕ್ಷಕರು ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ
ಮೃತ ಶಿಕ್ಷಕರು
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 11, 2023 | 6:01 PM

ಉಡುಪಿ: ಖಾಸಗಿ ಬಸ್​ಗೆ ಅಭಿಮುಖವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಉಡುಪಿ ಮೂಲದ ಇಬ್ಬರು ಶಿಕ್ಷಕರು (teachers) ಸಾವನ್ನಪ್ಪಿದ್ದು, ಇನ್ನೋರ್ವ ಶಿಕ್ಷಕ ಗಂಭೀರ ಗಾಯಗೊಂಡಿರುವಂತಹ ಘಟನೆ ಹೆಬ್ರಿ  ಠಾಣಾ ವ್ಯಾಪ್ತಿಯ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಆಫೀಸ್​ನ ಪ್ರಥಮ ದರ್ಜೆ ಸಹಾಯಕ ಸುಬ್ಬಣ್ಣ ಗಾಣಿಗ ಮತ್ತು ಇಂದಿರಾ ನಗರ ಶಾಲೆಯಲ್ಲಿ ದೈಹಿಕ ಶಿಕ್ಷಕ ಸೋಮ ಶೇಖರ್​ ಮೃತ ಶಿಕ್ಷಕರು.  ಗಂಭೀರ ಗಾಯಗೊಂಡಿರುವ ಸುದರ್ಶನ ಹಾಗೂ ಕಾರು ಚಲಾಯಿಸುತ್ತಿದ್ದ ಸತೀಶ್​ರನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವಾಗ, ಉಡುಪಿಯಿಂದ ಆಗುಂಬೆ ಹೋಗುತ್ತಿದ್ದ ಬಸ್​ಗೆ ಅಭಿಮುಖವಾಗಿ ಕಾರು ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಬಸ್​ನ ಒಳಗೆ ಸಿಲುಕಿದ್ದ ಕಾರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ: Tumakuru News: ಮೇಕೆಗೆ ಸೊಪ್ಪು ತರಲು ಹೋಗಿದ್ದ ಅಣ್ಣ, ತಮ್ಮ ನೀರುಪಾಲು

ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದ ಆಸಾಮಿ

ಬೆಂಗಳೂರು: ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ಇಣುಕಿ ನೋಡುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬೆಂಗಳೂರಿನ ಮಾರತ್ತಹಳ್ಳಿಯ ಮುನ್ನೇಕೊಳಲುನಲ್ಲಿ ನಡೆದಿದೆ. ನಿತಿನ್ ಬಂಧಿತ ಕಾಮುಕ. ಬಾಡಿಗೆ ಮನೆಯಲ್ಲಿದ್ದ ನಿತಿನ್, ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಬಳಿಕ ಸ್ಥಳೀಯರು ನಿತೀನ್​ನನ್ನು ಹಿಡಿದು ಮಾರತ್​​ಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಮಾರತ್​​ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಹಲವು ಪೊಲೀಸರಿಗೆ ವಂಚಿಸಿದ್ದ ನಕಲಿ ಐಪಿಎಸ್ ಅರ್ಜುನ್ ಅರೆಸ್ಟ್

ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ನಿತಿನ್ ಕಿಟಕಿಯಿಂದ ಆಗಾಗ ನೋಡುತ್ತಿದ್ದ. ಆದ್ರೆ, ಮಹಿಳೆ ಅದನ್ನು ಗಮನಿಸಿಲ್ಲ ಎನ್ನಲಾಗಿದೆ. ಆದ್ರೆ, ಇಂದು ಮತ್ತೆ ಇಣುಕಿ ನೋಡುತ್ತಿದ್ದಾಗ ಮಹಿಳೆ ನೋಡಿ ಕಿರುಚಿಕೊಂಡಿದ್ದಾಳೆ. ಬಳಿಕ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಲೇಜಿನ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ನಿಟ್ಟೆ ಮೀನಾಕ್ಷಿ ಕಾಲೇಜಿನ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಗರದ ಯಲಹಂಕ ನ್ಯೂ ಟೌನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ವಿವೇಕ್​​(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಾಲ್ಕನೇ ಸೆಮಿಸ್ಟರ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:54 pm, Sun, 11 June 23

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ