ಉಡುಪಿ: ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ

Parashurama Theme Park: ಉಡುಪಿಯ ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಿದ್ದ ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆ ಪ್ರಾರಂಭವಾಗುವವರೆಗೆ ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಜಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ಇದರಿಂದ ಕಾಮಗಾರಿಯ ಜವಾಬ್ದಾರಿ ಹೊತ್ತಿದ್ದ ಬಿಜೆಪಿ ಶಾಸಕ ಸುನೀಲ್​ ಕುಮಾರ್​ಗೆ ಸಂಕಷ್ಟ ಎದುರಾಗುತ್ತಾ?

ಉಡುಪಿ: ಪರಶುರಾಮ ಥೀಮ್‌ ಪಾರ್ಕ್‌ ಹಗರಣವನ್ನು ಸಿಐಡಿ ತನಿಖೆಗೆ ಆದೇಶಿಸಿದ ಸಿಎಂ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Feb 08, 2024 | 3:10 PM

ಉಡುಪಿ, (ಫೆಬ್ರವರಿ 08): ಕಾರ್ಕಳದ ಬೈಲೂರಿನ ಪರಶುರಾಮ ಥೀಮ್‌ ಪಾರ್ಕ್‌ (parashurama theme park )ಅಕ್ರಮ ಕಾಮಗಾರಿ ಪ್ರಕರಣವನ್ನು ಸಿಐಡಿ ತನಿಖೆಗೆ(CID probe) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರ ಶಿಫಾರಸ್ಸಿನ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಪರಶುರಾಮ‌ ಥೀಮ್‌ ಪಾರ್ಕ್‌ ಕಾಮಗಾರಿಯಲ್ಲಿ ನಡೆದ ಕಳಪೆ ಕಾಮಗಾರಿ ಹಾಗೂ ಅವ್ಯವಹಾರದ ಬಗ್ಗೆ, ಜತೆಗೆ ಧಾರ್ಮಿಕ ಭಾವನೆಗಳಿಗೆ ಅಪಪ್ರಚಾರವಾಗಿರುವ ಸಂಬಂಧ ಸಾರ್ವಜನಿಕರಿಂದ ಭಾರೀ ದೂರು ಕೇಳಿ ಬಂದಿತ್ತು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಲು ಖುದ್ದು ಸಚಿವರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಮಾಧ್ಯಮಗಳಲ್ಲೂ ಈ ಬಗ್ಗೆ ವರದಿಯಾಗಿತ್ತು. ಅಲ್ಲದೇ ಸ್ವತಃ ಜಿಲ್ಲೆಯ ಕಾಂಗ್ರೆಸ್​ ಕಾರ್ಯಕರ್ತರು ಈ ಪ್ರಕರಣದ ತನಿಖೆ ಪ್ರಾರಂಭವಾಗುವವರೆಗೂ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಸಿಐಡಿಗೆ ವಹಿಸಿದ್ದಾರೆ.

ಥೀಮ್‌ ಪಾರ್ಕ್‌ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಫೆಬ್ರವರಿ 2ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್.‌ ಹೆಬ್ಬಾಳ್ಕರ್ ಅವರು, ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಅದರಂತೆ ಈಗ ಮುಖ್ಯಮಂತ್ರಿ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಪರಶುರಾಂ ಥೀಂ ಪಾರ್ಕ್ ನಿರ್ಮಾಣದಲ್ಲಿ ಅವ್ಯವಹಾರದ ಆರೋಪ: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಆದೇಶದಲ್ಲೇನಿದೆ?

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಫೆ. 2ರಂದು ಬರೆದ ಪತ್ರದಲ್ಲಿ ಪರಶುರಾಮ ಥೀಂ ಪಾರ್ಕ್‌ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದ ಹಾಗೂ ಜನರ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದು ತಿಳಿದುಬಂದಿದೆ. ಈ ಕುರಿತು ಸತ್ಯಾಸತ್ಯತೆಯನ್ನು ತಿಳಿದುಕೊಳ್ಳಲು ಸಿಒಡಿ ಅಥವಾ ಉನ್ನತ ಮಟ್ಟದ ತನಿಖೆ ನಡೆದಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಒಡಿ ತನಿಖೆಗೆ ಆದೇಶಿಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿರುವ ಆದೇಶದಲ್ಲಿ ಹೇಳಲಾಗಿದೆ.

ಏನಿದು ಪ್ರಕರಣ?

ಉಡುಪಿಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿ ಕುಂಜ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 2023ರ ಜ. 17ರಂದು ಉದ್ಘಾಟಿಸಿದ್ದರು. ಇಡೀ ಥೀಮ್ ಪಾರ್ಕ್ ಅನ್ನು 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರಲ್ಲಿ ಬೃಹತ್ತಾದ ಪರಶುರಾಮನ ಪುತ್ಥಳಿ, ಬಯಲು ರಂಗ ಮಂದಿರ, ಆರ್ಟ್ ಗ್ಯಾಲರಿ, ಭಜನಾ ಮಂದಿರವನ್ನ ನಿರ್ಮಿಸಲಾಗಿತ್ತು ಆದ್ರೆ, ಪರಶುರಾಮನ ಪುತ್ಥಳಿಯನ್ನು ಕಂಚು ಮತ್ತು ಉಕ್ಕಿನಿಂದ ನಿರ್ಮಾಣ ಮಾಡಲಾಗಿದೆ ಎಂದು ಹೇಳಲಾಗಿತ್ತು.

ಆದ್ರೆ, ಮೂರ್ತಿ ಫೈಬರ್​ನಿಂದ ನಿರ್ಮಾಣ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಅಲ್ಲದೇ ಸಾಕ್ಷಿ ಸಮೇತ ಕಾಮಗಾರಿಯಲ್ಲಾದ ಅಕ್ರಮವನ್ನು ಬಯಲಿಗೆಳೆದಿದ್ದರು.

ಕಾಂಗ್ರೆಸ್ ನಾಯಕರು ಈ ಪುತ್ಥಳಿಯನ್ನು ಫೈಬರ್‌ನಿಂದ ನಿರ್ಮಿಸಲಾಗಿದ್ದು, ಕಂಚು, ಉಕ್ಕು ಬಳಸಲಾಗಿದೆ ಎಂದು ಹೇಳಿ ಆ ಹಣವನ್ನು ಈ ಥೀಮ್ ಪಾರ್ಕ್ ನಿರ್ಮಿಸುವ ಜವಾಬ್ದಾರಿ ಹೊತ್ತಿದ್ದ ಸ್ಥಳೀಯ ಶಾಸಕರು ಹಾಗೂ ಮಾಜಿ ಸಚಿವರಾದ ಸುನಿಲ್ ಕುಮಾರ್ ಅವರು ಲೂಟಿ ಮಾಡಿದ್ದಾರೆ ಆರೋಪಿಸಿದ್ದರು.ಬಳಿಕ ಈ ಬಗ್ಗೆ ರಾಜಕೀಯ ಆರೋಪ ಪತ್ಯಾರೋಪಗಳು ಜೋರಾಗಿದ್ದವು.

ತನಿಖೆಗೆ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರ ಬಿಗಿಪಟ್ಟು

ಪರಶುರಾಮ ಮೂರ್ತಿ ನಿರ್ಮಾಣದಲ್ಲಿ ಶಾಸಕ ಸುನಿಲ್‌ ಕುಮಾರ್ ಅಕ್ರಮ ಮಾಡಿದ್ದಾರೆ ಎಂದು ಕಾಂಗ್ರೆಸ್ಸಿಗರ ಅರೋಪಿಸಿದ್ದರು. ಕಂಚಿನ ಮೂರ್ತಿಯ ಬದಲು ಫೈಬರ್ ಮೂರ್ತಿ ಮಾಡಿದ್ದಾರೆ. ಇದರ‌ ತನಿಖೆ ವಿಳಂಬ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ತನಿಖೆ ಪ್ರಾರಂಭವಾಗುವವರೆಗೂ ಕಾಂಗ್ರೆಸ್ ಸಮಾವೇಶ, ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದರು. ಇದರಿಂದ ಎಚ್ಚೆತ್ತುಕೊಂಡು ಸಿಎಂ ಸಿದ್ದರಾಮಯ್ಯ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Thu, 8 February 24

‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಸುದೀಪ್ ಇರುವಾಗ ರೇಟಿಂಗ್ ಬಗ್ಗೆ ಚಿಂತೆಯೇಕೆ? ದೊಡ್ಮನೆ ಶೋಗೆ ಭರ್ಜರಿ TRP
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಬಿಗ್​ಬಾಸ್ ಮನೆಯಲ್ಲಿ ಶುರುವಾಗಿದೆ ಕಳ್ಳರ ಕಾಟ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
ಅನ್ನಭಾಗ್ಯ ಎಂದು ಸಿದ್ದರಾಮಯ್ಯರಿಂದ ಕನ್ನಭಾಗ್ಯ: ಆರ್ ಅಶೋಕ್ ವ್ಯಂಗ್ಯ
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ