ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ದಿನಗಣನೆ, ಮಠಾಧೀಶರಲ್ಲಿ ಭಿನ್ನಮತದ ಸುಳಿವು

2008 ರಲ್ಲಿ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ವಿರೋಧ ವ್ಯಕ್ತವಾದಾಗ ಶೀರೂರು ಶ್ರೀಗಳು ಅವರ ಜೊತೆ ನಿಂತಿದ್ದರು. ಉಳಿದ 6 ಮಠಾಧೀಶರು ಪರ್ಯಾಯದಿಂದ ಅಂತರ ಕಾಯ್ದುಕೊಂಡಿದ್ದರು. ಈ ಮಠಾಧೀಶರೆಲ್ಲ ಈ ಬಾರಿ ಮತ್ತೆ ಪುತ್ತಿಗೆ ಶ್ರೀಗಳ ಪರ್ಯಾಯಕ್ಕೆ ಗೈರಾಗುವ ಸಾಧ್ಯತೆ ಹೆಚ್ಚಾಗಿದೆ.

ಉಡುಪಿ: ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ದಿನಗಣನೆ, ಮಠಾಧೀಶರಲ್ಲಿ ಭಿನ್ನಮತದ ಸುಳಿವು
ಉಡುಪಿಯ ಶ್ರೀಕೃಷ್ಣ ಮಠ
Follow us
TV9 Web
| Updated By: Ganapathi Sharma

Updated on: Jan 08, 2024 | 9:31 AM

ಉಡುಪಿ, ಜನವರಿ 8: ರಾಜ್ಯದ ಪ್ರಸಿದ್ಧ ಉಡುಪಿಯ ಶ್ರೀಕೃಷ್ಣ ಮಠದ (Udupi Sri Krishna Matha) ಪರ್ಯಾಯ ಮಹೋತ್ಸವಕ್ಕೆ (Udupi paryaya 2024) ದಿನಗಣನೆ ಆರಂಭವಾಗಿದೆ. ಆದರೆ, ಮಠದ ಪರ್ಯಾಯ ಹತ್ತಿರವಾಗುತ್ತಲೇ ಅಸಮಾಧಾನ ಸ್ಫೋಟಗೊಳ್ಳುವ ಸುಳಿವೂ ಸಿಕ್ಕಿದೆ. ಈ ಬಾರಿಯ ಪರ್ಯಾಯ ಪೀಠವನ್ನು ಪುತ್ತಿಗೆ ಶ್ರೀಗಳು (Puttige Mutt Seer) ಏರಲಿದ್ದು, ಭಾವಿ ಪೀಠಾಧೀಶರ ಪುರ ಪ್ರವೇಶಕ್ಕೂ ಮುನ್ನವೇ ಭಿನ್ನಮತ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಪರ್ಯಾಯ ಉತ್ಸವದಿಂದ ಇತರೆ ಮಠಾಧೀಶರು ಅಂತರ ಕಾಯ್ದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಇತರ ಮಠಗಳ ಶ್ರೀಗಳು ಗೈರಾದರೆ 2008ರ ಇತಿಹಾಸ ಪುನರಾವರ್ತನೆಯಾಗಲಿದೆ.

2008 ರಲ್ಲಿ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ವಿರೋಧ ವ್ಯಕ್ತವಾದಾಗ ಶೀರೂರು ಶ್ರೀಗಳು ಅವರ ಜೊತೆ ನಿಂತಿದ್ದರು. ಉಳಿದ 6 ಮಠಾಧೀಶರು ಪರ್ಯಾಯದಿಂದ ಅಂತರ ಕಾಯ್ದುಕೊಂಡಿದ್ದರು. ಈ ಮಠಾಧೀಶರೆಲ್ಲ ಈ ಬಾರಿ ಮತ್ತೆ ಪುತ್ತಿಗೆ ಶ್ರೀಗಳ ಪರ್ಯಾಯಕ್ಕೆ ಗೈರಾಗುವ ಸಾಧ್ಯತೆ ಹೆಚ್ಚಾಗಿದೆ.

ಉಡುಪಿ ಅಷ್ಟ ಮಠಗಳ ಪರಂಪರೆಯಂತೆ ಅಲ್ಲಿನ ಶ್ರೀಗಳು ಸಮುದ್ರೋಲ್ಲಂಘನೆ ಮಾಡುವಂತಿಲ್ಲ. ಆದರೆ, ಪುತ್ತಿಗೆ ಶ್ರೀಗಳು ಸಮುದ್ರೋಲ್ಲಂಘನೆ ಮಾಡಿ ವಿದೇಶ ಪ್ರವಾಸ ಕೈಗೊಂಡಿದ್ದರಿಂದ ಅವರ ಪರ್ಯಾಯ ಪೀಠಾರೋಹಣಕ್ಕೆ 2008ರಲ್ಲಿ ಇತರ ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದರು.

2008ರಲ್ಲಿ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣ ಸಂದರ್ಭದಲ್ಲಿ ದರ್ಬಾರ್, ಕೀ ಹಸ್ತಾಂತರ ಹಾಗೂ ಅಕ್ಷಯ ಪಾತ್ರೆ ಹಸ್ತಾಂತರದಲ್ಲಿಯೂ ಅಸಮಾಧಾನ ವ್ಯಕ್ತವಾಗಿತ್ತು. ಏಕೈಕ ಶೀರೂರು ಮಠವಷ್ಟೇ ಪುತ್ತಿಗೆ ಮಠದ ಪರ ನಿಂತಿತ್ತು.

ಉಡುಪಿಯ ಕೃಷ್ಣ ದೇಗುಲದಲ್ಲಿ 8 ಮಠಗಳು ಇದ್ದು, ಕೃಷ್ಣಾಪುರ ಮಠಾಧೀಶರು ಹಾಲಿ ಪರ್ಯಾಯ ಪೀಠಾಧಿಪತಿ ಆಗಿದ್ದಾರೆ. ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯ ಮಹೋತ್ಸವದ ವೇಳೆ ಎರಡು ವರ್ಷಗಳ ಕಾಲ ಕೃಷ್ಣನ ಸೇವೆ ಮಾಡುವ ಜವಾಬ್ದಾರಿಯನ್ನು ಮತ್ತೊಂದು ಮಠಕ್ಕೆ ಬಿಟ್ಟುಕೊಡಲಾಗುತ್ತದೆ. ಸರದಿಯಂತೆ ಅಷ್ಟ ಮಠಗಳ ಯತಿಗಳು ಎರಡು ವರ್ಷ ಕಾಲ ಶ್ರೀಕೃಷ್ಣನ ಪೂಜೆ, ಸೇವೆ ಮಾಡುತ್ತಾ ಬರುತ್ತಾರೆ.

ಪೇಜಾವರಶ್ರೀಗಳು ಬಹುತೇಕ ಗೈರು

ಜನವರಿ 17, 18ರಂದು ಪುತ್ತಿಗೆ ಶ್ರೀಗಳು ಪರ್ಯಾಯ ಪೀಠವೇರಲಿದ್ದಾರೆ. ಈ ವೇಳೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಬಹುತೇಕ ಗೈರಾಗಲಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿರುವ ಕಾರಣ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​​ನ ಟ್ರಸ್ಟಿಯೂ ಆಗಿರುವ ಅವರು ಜನವರಿ 17ರಂದೇ ಅಯೋಧ್ಯೆಗೆ ತೆರಳಲಿದ್ದಾರೆ.

ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ: ಭದ್ರತೆಗಾಗಿ ಉಡುಪಿ ವಿಜ್ಞಾನಿ ಮನೋಹರ್ ಬೈನಾಕ್ಯುಲರ್ ಬಳಕೆ!

ಈ ಮಧ್ಯೆ, ಮಾಧ್ಯಮ ಪ್ರತಿನಿಧಿಗಳು ಪರ್ಯಾಯ ಮಹೋತ್ಸವ ಬಗ್ಗೆ ಪ್ರಶ್ನೆ ಕೇಳ್ತಿದ್ದಂತೆ ಪೇಜಾವರಶ್ರೀ ತುಸು ಗರಂ ಆಗಿರುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದೆ. ಸಂಕ್ರಾಂತಿ ಮುಗಿಸಿ ಜನವರಿ 15ರಂದೇ ಅಯೋಧ್ಯೆಗೆ ಹೊರಡುತ್ತೇನೆ, ಜನವರಿ 17ರಂದು ನಾನು ಅಯೋಧ್ಯೆಯಲ್ಲಿ ಇರಬೇಕು. ಒಂದೇ ದಿನ ಎರಡು ಕಡೆ ಇರಲು ಸಾಧ್ಯನಾ ಎಂದು ಪ್ರಶ್ನೆ ಕೇಳಿದವರಿಗೇ ಶ್ರೀಗಳು ಮರುಪ್ರಶ್ನೆ ಹಾಕಿರುವುದು ವಿಡಿಯೋದಲ್ಲಿದೆ. 2008ರಲ್ಲಿಯೂ ಪುತ್ತಿಗೆಶ್ರೀ ಪರ್ಯಾಯದಲ್ಲಿ ಪೇಜಾವರ ಸ್ವಾಮೀಜಿ ಅಂತರ ಕಾಯ್ದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ