ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ಮುನ್ನ ಉಡುಪಿ ಪೇಜಾವರ ಮಠಾಧೀಶರಿಂದ ರಥಯಾತ್ರೆ

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರನ್ನು ಆಕರ್ಷಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೂ ಮುನ್ನ ಉಡುಪಿ ಪೇಜಾವರ ಮಠಾಧೀಶರಿಂದ ರಥಯಾತ್ರೆ
ಸ್ವಾಮಿ ವಿಶ್ವಪ್ರಸನ್ನ ತೀರ್ಥರು
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 14, 2022 | 6:40 PM

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಿಂದ ಕಾಶ್ಮೀರದವರೆಗೆ ರಥಯಾತ್ರೆ (Rath Yatra) ನಡೆಸಲು ಉಡುಪಿ ಪೇಜಾವರ ಮಠಾಧೀಶ ಹಾಗೂ ರಾಮಜನ್ಮಭೂಮಿ ಟ್ರಸ್ಟ್‌ನ ಸದಸ್ಯ ಸ್ವಾಮಿ ವಿಶ್ವಪ್ರಸನ್ನ ತೀರ್ಥರು (Swami Vishwaprasanna Teertha) ಪ್ರಸ್ತಾಪ ಮಾಡಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುವಂತೆ ದೇಶದ ನಾಗರಿಕರನ್ನು ಆಕರ್ಷಿಸುವುದು ಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಅಯೋಧ್ಯೆಯ ವಿಮೋಚನೆಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅನೇಕ ಜನರಿದ್ದಾರೆ. ಯಾತ್ರೆಯ ಸಂದರ್ಭದಲ್ಲಿ ಅವರನ್ನೂ ನೆನಪಿಸಿಕೊಳ್ಳಬೇಕು ಎಂದರು.ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಶದ ಮೂಲೆ ಮೂಲೆಗಳಿಂದ ದೇಣಿಗೆ ಹರಿದು ಬರುತ್ತಿದೆ. ಪ್ರತಿ ವರ್ಷ ಸುಮಾರು 100 ಕೋಟಿ ರೂಪಾಯಿ ದೇಣಿಗೆ ಪಡೆದು ವ್ಯವಸ್ಥಿತವಾಗಿ ಹಣ ಬಳಕೆ ಮಾಡಲಾಗುತ್ತಿದೆ. ಮಂದಿರ ಯೋಜನೆಗೆ ಆರಂಭದಲ್ಲಿ 400 ಕೋಟಿ ರೂ. ವೆಚ್ಚ ಅಂದಾಜಿಸಲಾಗಿತ್ತು. ಆದರೆ ಹಣದುಬ್ಬರದಿಂದಾಗಿ ಅದು ಜಾಸ್ತಿ ಆಗಿದ್ದು ಇದೀಗ ನಿರ್ಮಾಣ ವೆಚ್ಚ 1,300 ಕೋಟಿಯಷ್ಟಾಗುತ್ತದೆ ಎಂದು ಸ್ವಾಮಿ ಹೇಳಿದ್ದಾರೆ.

ರಾಮಾಯಣದಲ್ಲಿ ಹನುಮಂತನ ಪಾತ್ರ ಅತ್ಯಂತ ಮಹತ್ವದ್ದಾಗಿರುವುದರಿಂದ ಹನುಮಂತನ ನಾಡು ಕರ್ನಾಟಕಕ್ಕೂ ರಾಮಮಂದಿರಕ್ಕೂ ವಿಶೇಷ ಸಂಬಂಧವಿದೆ ಎಂದರು. ಇದು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದ್ದು, ಸಂಪರ್ಕವನ್ನು ಅಖಂಡವಾಗಿಡಲು ರಾಜ್ಯದಿಂದ ರಾಮಮಂದಿರಕ್ಕೆ ‘ಸ್ವರ್ಣ ಶಿಖರ’ (ಚಿನ್ನದ ಶಿಖರ) ನೀಡಲಾಗುವುದು .ರಾಮ ಜನ್ಮಭೂಮಿ ಟ್ರಸ್ಟ್ 2024 ರಲ್ಲಿ ಮಕರ ಸಂಕ್ರಾಂತಿಯಂದು ಶ್ರೀರಾಮನ ವಿಗ್ರಹವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ಸ್ವಾಮಿ ಹೇಳಿದರು.

ಶ್ರೀರಾಮನ ವಿಗ್ರಹ ಮತ್ತು ಹಿರಿಯ ರಾಮನ ವಿಗ್ರಹವನ್ನು ಸ್ಥಾಪಿಸಬೇಕೆ ಅಥವಾ ಯುವ ರಾಮನ (ಬಾಲರಾಮ) ಮೂರ್ತಿಯನ್ನು ಪ್ರತಿಷ್ಠಾಪಿಸುವ ಕುರಿತು ಚರ್ಚೆ ನಡೆಸಲಾಯಿತು. ಅಯೋಧ್ಯೆಯು ಯುಗಗಳಿಂದಲೂ ಕಿರಿಯ ರಾಮನ ಪವಿತ್ರ ಸ್ಥಳವಾಗಿದ್ದರಿಂದ, ಯುವ ರಾಮನ ವಿಗ್ರಹವನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ಹೇಳಿದರು. ಎತ್ತರದ ವಿಗ್ರಹವನ್ನು ಸಂಪೂರ್ಣವಾಗಿ ನೋಡಲಾಗದ ಕಾರಣ ಭಕ್ತರಿಗೆ ಕಾಣಿಸುವಂತೆ ವಿಗ್ರಹದ ಗಾತ್ರ ಇರುತ್ತದೆ ಎಂದಿದ್ದಾರೆ ಮಠಾಧೀಶರು.