ಉಡುಪಿ ನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಬಚಾವು

ಸಮಯಪ್ರಜ್ಞೆ ತೋರಿದ ಗೆಳೆಯ ಆದಿತ್ಯ ಮಂಗಳೂರು ಪೊಲೀಸ್ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದಾನೆ. ಕರ್ತವ್ಯ ಪ್ರಜ್ಞೆ ಮೆರೆದ ಅಲ್ಲಿನ ಪೊಲೀಸರು ಮಂಗಳೂರಿನಿಂದ ಉಡುಪಿ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ, ರೋಹನ್ ನನ್ನು ಬಚಾವು ಮಾಡಿದ್ದಾರೆ.

ಉಡುಪಿ ನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ;  ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಬಚಾವು
ಉಡುಪಿ ನಗರ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ; ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಬಚಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 02, 2022 | 9:03 PM

ಉಡುಪಿ: ಉಡುಪಿ ನಗರ ಠಾಣೆಯ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಬಚಾವು ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ರೋಹನ್ ರಾಜೇಶ್ ಜತ್ತನ ಎಂಬಾತ ಕೈ ಕೊಯ್ದುಕೊಂಡು ನರಳಾಡುತ್ತಿದ್ದ. ಕೈಕೊಯ್ದುಕೊಂಡ ರೋಹನ್ ಮಂಗಳೂರಿನ ಸ್ನೇಹಿತ ಆದಿತ್ಯನಿಗೆ ಕರೆ ಮಾಡಿದ್ದ.

ವಿಷಯ ತಿಳಿದು ಉಡುಪಿ ನಗರದಲ್ಲಿರುವ ಖಾಸಗಿ ಲಾಡ್ಜಿಗೆ ಪೊಲೀಸರು ದೌಡಾಯಿಸಿದ್ದಾರೆ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ದು ಪೊಲೀಸರು ಸಕಾಲದಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಉಡುಪಿ ನಗರ ಠಾಣೆ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ರೋಹನ್ ರಕ್ಷಣೆ ನಡೆದಿದೆ. ಸೂಕ್ತ ಚಿಕಿತ್ಸೆ ನೀಡಿ ವೈದ್ಯರು ರೋಹನ್ ನನ್ನು ಬದುಕಿಸಿದ್ದಾರೆ.

ಸಮಯಪ್ರಜ್ಞೆ ತೋರಿದ ಗೆಳೆಯ ಆದಿತ್ಯ ಮಂಗಳೂರು ಪೊಲೀಸ್ ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡಿದ್ದಾನೆ. ಕರ್ತವ್ಯ ಪ್ರಜ್ಞೆ ಮೆರೆದ ಅಲ್ಲಿನ ಪೊಲೀಸರು ಮಂಗಳೂರಿನಿಂದ ಉಡುಪಿ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿ, ರೋಹನ್ ನನ್ನು ಬಚಾವು ಮಾಡಿದ್ದಾರೆ.

ಬೆಂಗಳೂರು: ಮಡಿವಾಳ ಚಾಕ್ಲೇಟ್ ಫ್ಯಾಕ್ಟರಿ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮಡಿವಾಳ ಬಳಿಯ ಚಾಕ್ಲೇಟ್ ಫ್ಯಾಕ್ಟರಿ ಬಳಿ ಅಪರಿಚಿತ ವ್ಯಕ್ತಿಯ ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಮಾಡಿ ಮೃತ ದೇಹ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ಪೊಲೀಸರು ಅಪರಿಚಿತ ವ್ಯಕ್ತಿ ಮೃತ ದೇಹದ ಗುರುತನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಮೃತದೇಹ ಪತ್ತೆಯಾದ ಸ್ಥಳಕ್ಕೆ ಮಡಿವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಡಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ಮೃತ‌ದೇಹ ರವಾನೆ ಮಾಡಲಾಗಿದೆ. ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಎಸಿಬಿ ಬಲೆಗೆ

ಮಂಗಳೂರು: ಕಾಮಗಾರಿ ಹಣ ಮಂಜೂರಾತಿಗೆ ಲಂಚದ ಬೇಡಿಕೆ ಇಟ್ಟಿದ್ದ ಮಂಗಳೂರು ಪಾಲಿಕೆ ಕಾರ್ಯಪಾಲಕ ಇಂಜಿನಿಯರ್ ಅತಿಕ್ ರೆಹಮಾನ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಹಣ ಮಂಜೂರು ಮಾಡಲು 3000 ಹಣಕ್ಕೆ ಬೇಡಿಕೆ ಇಟ್ಟಿದ್ದ ಅತಿಕ್ ಲಂಚದ ಹಣವನ್ನು ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದು, ಆರೋಪಿಯನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಂಗಳೂರಿನ ದೇರೇಬೈಲ್ ನಿವಾಸಿ ಜಯಲಿಂಗಪ್ಪ ಎಂಬವವರು ದೂರು ನೀಡಿದ್ದರು. ದಕ್ಷಿಣ ಕನ್ನಡ ಎಸಿಬಿ ಎಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ಪೆಕ್ಟರ್ ಗಳಾದ ಗುರುರಾಜ್, ಶ್ಯಾಮ್ ಸುಂದರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.

Published On - 8:46 pm, Thu, 2 June 22