ಉಡುಪಿಯ ಖಾಸಗಿ ಕಾಲೇಜಿನ ಟಾಯ್ಲೆಟ್‌ನಲ್ಲಿ ವಿಡಿಯೋ ಪ್ರಕರಣ: ಚುರುಕುಗೊಂಡ ತನಿಖೆ

ದೇಶಾದ್ಯಂತ ಹಲ್​​​​ಚಲ್​​​​ ಸೃಷ್ಟಿಸಿದ ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ ಪ್ರವೇಶ ಮಾಡಿದ್ದು, ತನಿಖೆ ಚುರುಕುಗೊಂಡಿದೆ.

ಉಡುಪಿಯ ಖಾಸಗಿ ಕಾಲೇಜಿನ ಟಾಯ್ಲೆಟ್‌ನಲ್ಲಿ ವಿಡಿಯೋ ಪ್ರಕರಣ: ಚುರುಕುಗೊಂಡ ತನಿಖೆ
ಸಾಂದರ್ಭಿಕ ಚಿತ್ರImage Credit source: NDTV
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ರಮೇಶ್ ಬಿ. ಜವಳಗೇರಾ

Updated on: Jul 27, 2023 | 8:54 AM

ಉಡುಪಿ, (ಜುಲೈ 27): ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿರುವ ಉಡುಪಿಯ (Udupi) ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಿಸಿದ ಪ್ರಕರಣದ(washroom Video Case) ತನಿಖೆ ಚುರುಕುಗೊಂಡಿದೆ. ಮೂರು ಮುಸ್ಲಿಂ ವಿದ್ಯಾರ್ಥಿನಿಯರ (Students) ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ಈ ಪ್ರಕರಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಹೀಗಾಗಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇದನ್ನೂ ಓದಿ: Udupi News: ಕಾಲೇಜು ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ; ಉಡುಪಿ ಎಸ್​ಪಿಯಿಂದ ಮಾಹಿತಿ ಪಡೆದ ಖುಷ್ಬೂ ಸುಂದರ್

ಈಗಾಗಲೇ ಕಾಲೇಜು ಆಡಳಿತ ಮಂಡಳಿ ಮೂರು ಮೊಬೈಲ್​ಗಳನ್ನು ಪೊಲೀಸ್ ವಶಕ್ಕೆ ನೀಡಿದೆ. ಆದ್ರೆ, ಮೊಬೈಲ್ ಜಾಲಡಿದರೂ ಏನು ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು, ಮೊಬೈಲ್​ಗಳನ್ನು ಬೆಂಗಳೂರು ಎಸ್​ಎಸ್​ಎಲ್​ಗೆ ಕಳುಹಿಸಲಿದ್ದಾರೆ. ಮೊಬೈಲ್ ನಲ್ಲಿ ದಾಖಲಾಗಿರುವ ಎಲ್ಲಾ ವಿಡಿಯೋ ಚಿತ್ರಗಳನ್ನು ರಿಟ್ರೈವ್ ಮಾಡಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ. ಇನ್ನು ಇಂದು ಆರೋಪಿ ವಿದ್ಯಾರ್ಥಿನಿಯರನ್ನು ವಶಕ್ಕೆ ಪಡೆದು ವಿಚಾರಣೆ ಸಾಧ್ಯತೆ ಇದೆ. ಅಲ್ಲದೇ ಭೇಟಿ ನೀಡಿ ವಿದ್ಯಾರ್ಥಿನಿಯರ ಚಲನವಲನ ಗಮನಿಸಲು ಕಾಲೇಜಿನ ಸಿಸಿ ಟಿವಿ ದೃಶ್ಯಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಎಂದು ತಿಳದುಬಂದಿದೆ.

ದಕ್ಷಿಣ ಭಾರತದ ಸದಸ್ಯ ಖುಷ್ಬು ಸುಂದರಂ ಉಡುಪಿಗೆ ಆಗಮಿಸಿದ್ದು, ಪ್ರವಾಸಿ ಮಂದಿರದಲ್ಲಿ ಡಿಸಿ ಡಾ. ವಿದ್ಯಾಕುಮಾರಿ, ಎಸ್‌ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಜೊತೆ ಚರ್ಚಿಸಿದ್ರು. ಪೊಲೀಸರು ದಾಖಲಿಸಿರುವ ಎಫ್​ಐಆರ್​​​​​​​​ ಬಗ್ಗೆಯೂ ಮಾಹಿತಿ ಪಡೆದ್ರು.. ಇಂದು ಬೆಳಗ್ಗೆ ಸಂತ್ರಸ್ತೆ ವಿದ್ಯಾರ್ಥಿನಿಯರು ಮತ್ತು ಪೋಷಕರಿಗೆ ಸಂತ್ವಾನ ಹೇಳಲಿದ್ದು, ಕಾಲೇಜಿನ ಆಡಳಿತ ಮಂಡಳಿ ಜೊತೆಯೂ ಖುಷ್ಬು ಪ್ರಕರಣದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ಎಫ್​​​​ಐಆರ್​​​​​ನಲ್ಲಿ ಏನಿದೆ?

ದಿನಾಂಕ:20-07-2023ರಂದು ಮಧ್ಯಾಹ್ನ 12.30ಕ್ಕೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಮಾಹಿತಿ ಬಂತು.. ಅಲ್ಲಿಗೆ ತೆರಳಿ ವಿಚಾರಿಸಿದಾಗ.. 18-07-2023ರಂದು ಮಧ್ಯಾಹ್ನ 2.30ರಿಂದ 3 ಗಂಟೆ ಸಮಯದಲ್ಲಿ 2ನೇ ವರ್ಷದ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋಗಿದ್ದರಂತೆ.. ಆಗ ಅವಳ ಮೂವರು ಗೆಳೆತಿಯರು ವಿಡಿಯೋ ಮಾಡಲು ಹೋಗಿದ್ದಾರೆ.. ಆದ್ರೆ, ಆಕಸ್ಮಿಕವಾಗಿ ಬೇರೊಬ್ಬರ ವಿಡಿಯೋ ಮಾಡಿದ್ದಾರೆ. ಇದು ಆ ವಿದ್ಯಾರ್ಥಿನಿಯ ಗಮನಕ್ಕೆ ಬಂದಿದ್ದು, ತಕ್ಷಣವೇ ಅವರ ಸಮಕ್ಷಮದಲ್ಲೇ ವಿಡಿಯೋ ಡಿಲೀಟ್​ ಮಾಡಿ, ಕ್ಷಮೆಯಾಚಿಸಿರುತ್ತಾರೆ.. 19-07-2023ರಂದು ಆಡಳಿತ ಮಂಡಳಿಯವರು ಮೂವರು ವಿದ್ಯಾರ್ಥಿನಿಯ ಮೊಬೈಲ್​​​​ ವಶಕ್ಕೆ ಪಡೆದುಕೊಂಡಿದ್ದಾರೆ. 25-07-2023ರಂದು ಆಡಳಿತ ಮಂಡಳಿಯವರು ನಡೆಸಿದ ಸುದ್ದಿಗೋಷ್ಠಿ ಯಲ್ಲೇ ತಾವೇ ವಿಡಿಯೋ ಮಾಡಿದ್ದೇವೆ ಎಂದು ಮೂವರು ವಿದ್ಯಾರ್ಥಿನಿಯರು ತಪ್ಪೊಪ್ಪಿಗೆ ನೀಡಿರುತ್ತಾರೆ. ಅವರನ್ನ ಆಡಳಿತ ಮಂಡಳಿ ಅಮಾನತು ಮಾಡಿರುತ್ತದೆ ಎಂದು ಎಫ್​ಆರ್​ಐನಲ್ಲಿದೆ.

ಒಟ್ಟಿನಲ್ಲಿ ಉಡುಪಿಯ ಕಾಲೇಜು ಗರ್ಲ್ಸ್ ಟಾಯ್ಲೆಟ್‌ನಲ್ಲಿ ಚಿತ್ರೀಕರಣ ಕೇಸ್ ದೇಶಾದ್ಯಂತ ಹಲ್​​​​ಚಲ್​​​​ ಸೃಷ್ಟಿಸಿದ್ದು, ಪೊಲೀಸ್​​​​ ತನಿಖೆಯಿಂದ ಸತ್ಯಾಸತ್ಯತೆ ಪ್ರಕರಣದ ಅಸಲಿಯತ್ತು ಗೊತ್ತಾಗಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ