Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಮೈಕ್​ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಮೈಕ್ ಬಳಕೆಗೆ ಅನುಮತಿ ಇಲ್ಲದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ನಿರ್ಧಾರಕ್ಕೆ ಗ್ರಾಮಸ್ಥರು ಮತ್ತು ಯಕ್ಷಗಾನ ಕಲಾವಿದರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರವಾನಗಿ ಪಡೆಯಲು ಆಯೋಜಕರು ಮಾಡಿದ ಪ್ರಯತ್ನಗಳು ವಿಫಲವಾದವು ಎಂಬುದು ತಿಳಿದುಬಂದಿದೆ.

ಉಡುಪಿ: ಮೈಕ್​ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು
ಉಡುಪಿ: ಮೈಕ್​ಗೆ ಅನುಮತಿ ಪಡೆದಿಲ್ಲವೆಂದು ಯಕ್ಷಗಾನ ನಿಲ್ಲಿಸಿದ ಪೊಲೀಸರು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 15, 2025 | 7:15 PM

ಉಡುಪಿ, ಜನವರಿ 15: ಮೈಕ್​​ ಹಚ್ಚಲು ಅನುಮತಿ ಪಡೆದಿಲ್ಲ ಎಂದು ಯಕ್ಷಗಾನ (Yakshagana) ಪ್ರದರ್ಶನ ನಡೆಯುತ್ತಿದ್ದಾಗಲೇ ಪೊಲೀಸರಿಂದ ತಡೆದಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುನಲ್ಲಿ ನಡೆದಿದೆ. 10 ಗಂಟೆ ನಂತರ ಧ್ವನಿವರ್ಧಕ ಬಳಸಿದ್ದಕ್ಕೆ ಯಕ್ಷಗಾನ ತಡೆಯಲಾಗಿದ್ದು, ಆಯೋಜಕರನ್ನು ಅರೆಸ್ಟ್ ಮಾಡಲು ಮುಂದಾದಾಗ ಎಲ್ಲಾ ಗ್ರಾಮಸ್ಥರನ್ನು ಬಂಧನ ಮಾಡಿ ಎಂದು ಸ್ಥಳದಲ್ಲಿ ಹೈಡ್ರಾಮಾವೇ ನಡೆದಿದೆ.

ಮುಂಡ್ಲಿಯ ಈಶ್ವರ ಯಕ್ಷಗಾನ ಮಂಡಳಿಯಿಂದ ಯಕ್ಷಗಾನ ಆಯೋಜನೆ ಮಾಡಲಾಗಿದೆ. 10 ಗಂಟೆ ನಂತರ ಧ್ವನಿವರ್ಧಕ ಬಳಸಿದ್ದಕ್ಕೆ ಅಜೆಕಾರು ಠಾಣಾ ಉಪ ನಿರೀಕ್ಷಕ ಶುಭಕರ ಅವರಿಂದ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ದೂರು ದಾಖಲಾದ ಬಗ್ಗೆ ಎಫ್​ಐಆರ್​ ತೋರಿಸಿ ಎಂದು ಗ್ರಾಮಸ್ಥರು ಆಗ್ರಹಿಸಿದರು. ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪೊಲೀಸ್ ಸ್ಥಳದಿಂದ ತೆರಳಿದ್ದಾರೆ.

ಇದನ್ನೂ ಓದಿ: ಹೊಸ ವರ್ಷದಂದೇ ಉಡುಪಿ ಗ್ರಾಮ ಪಂಚಾಯತ್​​ಗೆ ಬೀಗ: ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆ

ಆಯೋಜಕರು ಜ.10 ರಂದು ಪರವಾನಿಗೆಗಾಗಿ ಪಿಡಿಓ ಬಳಿ ತೆರಳಿದ್ದರು. ಆದರೆ 3 ದಿನಗಳು ಪಿಡಿಓ ರಜೆ ಮೇಲೆ ತೆರಳಿದ್ದಕ್ಕಾಗಿ ಅನುಮತಿ ದೊರೆತಿರಲಿಲ್ಲ. ಬಳಿಕ ಜನವರಿ 13ರಂದು ಅನುಮತಿಗಾಗಿ ಅಜೆಕಾರು ಠಾಣೆಗೆ ಆಯೋಜಕರು ಹೋಗಿದ್ದಾರೆ. ಆದರೆ ಪಂಚಾಯತ್ ಅನುಮತಿ ತರುವಂತೆ ಪೊಲೀಸರು ತಾಕೀತು ಮಾಡಿದ್ದರು.

ಸದ್ಯ ಯಕ್ಷಗಾನ ಮಂಡಳಿ ಅಧ್ಯಕ್ಷ ಸದಾನಂದ ಶೆಟ್ಟಿ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ. ಮಹಾಲಕ್ಷ್ಮೀ ಸೌಂಡ್ಸ್​​ನ ಮುಖ್ಯಸ್ಥ ಅಪ್ಪು ವಿರುದ್ಧವೂ ಕೇಸ್​ ದಾಖಲಿಸಿದ್ದು, ಸುಪ್ರೀಂ ಕೋರ್ಟ್​ ಆದೇಶದ ಕ್ರಮಕ್ಕೆ ಉಡುಪಿ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂ. ನೀಡಲು ಆದೇಶ

ಸದ್ಯ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಆದೇಶ ಪಾಲಿಸದಿದ್ದರೆ ಆಯಾ ಠಾಣಾಧಿಕಾರಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಎಸ್​ಪಿ ಎಚ್ಚರಿಸಿದ್ದು, ಇದೀಗ ಪೊಲೀಸರಿಗೆ ಆರಾಧನಾ ಕಲೆ ವಿರುದ್ಧ ಕ್ರಮ ಕೈಗೊಳ್ಳುವ ಅನಿವಾರ್ಯತೆ ಎದುರಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು