AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ವಿರೋಧಿ ಮುಲಾಯಂ ಸಿಂಗ್​ಗೆ ಘೋಷಿಸಿದ ಮರಣೋತ್ತರ ಪದ್ಮ ಪ್ರಶಸ್ತಿ ಹಿಂಪಡೆಯುವಂತೆ ಪ್ರಮೋದ್ ಮುತಾಲಿಕ್ ಆಗ್ರಹ

ರಾಮ ವಿರೋಧಿ ಹಾಗೂ ಧರ್ಮ ವಿರೋಧಿ ಮುಲಾಯಂ ಸಿಂಗ್ ಯಾದವ್​ಗೆ ಘೋಷಿಸಿದ ಪದ್ಮವಿಭೂಷಣ ಪ್ರಶಸ್ತಿ ಹಿಂಪಡೆಯಬೇಕು ಎಂದು ಆಗ್ರಹಿಸಿದ ಪ್ರಮೋದ್ ಮುತಾಲಿಕ್, ಕೇಂದ್ರ ಪ್ರಶಸ್ತಿ ಸಮಿತಿ ನಡೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.

ರಾಮ ವಿರೋಧಿ ಮುಲಾಯಂ ಸಿಂಗ್​ಗೆ ಘೋಷಿಸಿದ ಮರಣೋತ್ತರ ಪದ್ಮ ಪ್ರಶಸ್ತಿ ಹಿಂಪಡೆಯುವಂತೆ ಪ್ರಮೋದ್ ಮುತಾಲಿಕ್ ಆಗ್ರಹ
ಪ್ರಮೋದ್ ಮುತಾಲಿಕ್ ಮತ್ತು ದಿವಂಗತ ಮುಲಾಯಂ ಸಿಂಗ್ ಯಾದವ್
TV9 Web
| Updated By: Rakesh Nayak Manchi|

Updated on:Jan 31, 2023 | 5:11 PM

Share

ಉಡುಪಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಮೂರು ಬಾರಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದ ಮುಲಾಯಂ ಸಿಂಗ್ ಯಾದವ್ (Mulayam Singh Yadav) ಅವರಿಗೆ ಕೇಂದ್ರ ಸರ್ಕಾರವು ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರಶಸ್ತಿ (Padma Vibhushan Award) ಘೋಷಣೆ ಮಾಡಿರುವುದು ಇದೀಗ ರಾಮ ಭಕ್ತರಲ್ಲಿ ಅಸಮಾಧಾನ ಉಂಟು ಮಾಡಿದೆ. ಕೂಡಲೇ ಪ್ರಶಸ್ತಿಯನ್ನು ಹಿಂಪಡೆಯುವಂತೆ ಆಗ್ರಹಿಸಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಕೇಂದ್ರ ಪ್ರಶಸ್ತಿ ಸಮಿತಿ ನಡೆಯ್ನನು ಖಂಡಿಸಿದರು. ಮುಲಾಯಂ ಸಿಂಗ್, ರಾಮ ವಿರೋಧಿ ಹಾಗೂ ಧರ್ಮ ವಿರೋಧಿ ಮಾತ್ರವಲ್ಲ ದೇಶದ್ರೋಹಿ ಎಂದು ವಾಗ್ದಾಳಿ ನಡೆಸಿದರು.

ಉಡುಪಿಯಲ್ಲಿ ಮಾತನಾಡಿದ ಅವರು, 1989-91ರ ಅವಧಿಯಲ್ಲಿ ಅಯೋಧ್ಯೆ ಶ್ರೀರಾಮ ಕರಸೇವಕರಿಗೆ ಹಿಂಸೆ ನೀಡಿದ್ದಾರೆ. ಶಾಂತಿಯುತ ಪ್ರತಿಭಟನೆಗಾಗಿ ಅಯೋಧ್ಯೆಗೆ ಬಂದಿದ್ದ ಶ್ರೀರಾಮ ಭಕ್ತರ ಮೇಲೆ ಗುಂಡು ಹಾರಿಸಿದ ಕ್ರೂರಿ ಮುಲಾಯಂ ಸಿಂಗ್ ಯಾದವ್, ರಾಮ ವಿರೋಧಿ ಹಾಗೂ ಧರ್ಮ ವಿರೋಧಿ ಮಾತ್ರವಲ್ಲ ದೇಶದ್ರೋಹಿ. ಅಂಥವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡುವುದೆಂದರೆ ಆ ಪ್ರಶಸ್ತಿಗೇ ಕಳಂಕ ಎಂದರು.

ಇದನ್ನೂ ಓದಿ: Padma Awards: ಪದ್ಮ ವಿಭೂಷಣ ಪ್ರಶಸ್ತಿ ಸಿಗುವ ನಿರೀಕ್ಷೆ ಇರಲಿಲ್ಲ: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ

ಮುಲಾಯಂ ಸಿಂಗ್ ಯಾದವ್​ಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿರುವುದು ಅತ್ಯಂತ ಶ್ರೇಷ್ಠ ಪ್ರಶಸ್ತಿಗೆ ಇದೊಂದು ಕಪ್ಪು ಚುಕ್ಕೆಯಾಗಿದೆ. ಪ್ರತಿಷ್ಠಿತ ಪ್ರಶಸ್ತಿಗೆ ಮುಲಾಯಂ ಅವರನ್ನು ಆಯ್ಕೆ ಮಾಡಿದ ಪ್ರಶಸ್ತಿ ಆಯ್ಕೆ ಸಮಿತಿಗೆ ಧಿಕ್ಕಾರ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಜೈಲಿಗೆ ತಳ್ಳಲು ಯತ್ನಿಸಿದ್ದರು. ಯೋಗಿಯನ್ನು ಎನ್ಕೌಂಟರ್ ಮಾಡಲು ಹೊರಟ ವ್ಯಕ್ತಿಯಾಗಿದ್ದಾರೆ. ಯೋಗಿಯವರನ್ನು ಸಂಸತ್ ಭವನದಲ್ಲಿ ಕಣ್ಣೀರು ಹಾಕಿಸಿದ ವ್ಯಕ್ತಿ. ಇಂತಹಾ ವ್ಯಕ್ತಿಗೆ ಪದ್ಮವಿಭೂಷಣ ನೀಡಿರುವುದು ಅಕ್ಷಮ್ಯ ಎಂದರು.

ಪ್ರಶಸ್ತಿ ಘೋಷಣೆ ಬಗ್ಗೆ ಈ ಹಿಂದೆ ಪ್ರತಿಕ್ರಿಯಿಸಿದ್ದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ, ಮುಲಾಯಂ ಸಿಂಗ್ ಯಾದವ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡುವ ಮೂಲಕ ಸರ್ಕಾರವು ಅವರ ಸ್ಥಾನಮಾನ ಮತ್ತು ದೇಶಕ್ಕೆ ನೀಡಿದ ಕೊಡುಗೆಯನ್ನು ಅಪಹಾಸ್ಯ ಮಾಡಿದೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಬೇಕೆಂದು ಒತ್ತಾಯಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Tue, 31 January 23