ಇದೇ ನ 28ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಶೇಷತೆ ಏನು ಗೊತ್ತಾ?
ಇದೇ ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಉಡುಪಿ ಶ್ರೀಕೃಷ್ಣನ ದರ್ಶನಕ್ಕೆ ಆಗಮಿಸುತ್ತಿರುವ ಪ್ರಧಾನಿ ಮೋದಿ, ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಮತ್ತು ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳ ತಿಳಿಸಿವೆ.

ಉಡುಪಿ, ಅಕ್ಟೋಬರ್ 29: ಬಿಹಾರ ಚುನಾವಣಾ ಅಖಾಡ ರಂಗೇರಿದೆ. ಸದ್ಯ ಇದೇ ಚುನಾವಣಾ ಪ್ರಚಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ (Sri Krishna Math) ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳಿಂದ ಟಿವಿ9 ಗೆ ಮಾಹಿತಿ ನೀಡಲಾಗಿದೆ.
ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮೋದಿ ಮಾತುಕತೆ
ನವೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸುವ ಪ್ರಧಾನಿ ಮೋದಿ, ಪ್ರಸಾದ ಸ್ವೀಕರಿಸಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಇದನ್ನೂ ಓದಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಆಚರಣೆ ಇಲ್ಲ: ಭಕ್ತರು, ವ್ಯಾಪಾರಿಗಳಿಗೆ ನಿರಾಸೆ!
ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಈ ನಿಟ್ಟಿನಲ್ಲಿ ಭಕ್ತರು ಮತ್ತು ಗಣ್ಯರು ಬೃಹತ್ ಪ್ರಮಾಣದಲ್ಲಿ ಸೇರುವ ನಿರೀಕ್ಷೆಯಿದೆ.
ಇದನ್ನೂ ಓದಿ: ನವರಾತ್ರಿಯಲ್ಲಿ ಸ್ತ್ರೀ ರೂಪ ತಾಳುತ್ತಾನೆ ಉಡುಪಿ ಶ್ರೀಕೃಷ್ಣ! ಏನಿದು ಅಪರೂಪದ ಪೂಜಾ ಕ್ರಮ? ಇಲ್ಲಿದೆ ಮಾಹಿತಿ
ಮೂಲಗಳ ಪ್ರಕಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಅವರ ಭೇಟೆಯನ್ನು ಪ್ರಧಾನಿ ಕಚೇರ ದೃಢಪಡಿಸಿದೆ. ಹೀಗಾಗಿ ಸದ್ಯ ಅಗತ್ಯ ಎಲ್ಲಾ ವ್ಯವಸ್ಥೆಗಳನ್ನು ಈಗಾಗಲೇ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ.
ನ. 8ರಿಂದ 30ರವರೆಗೆ ಲಕ್ಷ ಕಂಠ ಗೀತಾ ಪಾರಾಯಣ
ನವೆಂಬರ್ 8ರಿಂದ 30ರವರೆಗೆ ಉಡುಪಿಯ ಶ್ರೀಕೃಷ್ಣ ಮಠ ಮತ್ತು ಪುತ್ತಿಗೆ ಮಠದ ಆಶ್ರಯದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವ ನಡೆಯಲಿದೆ. ಕೊನೆಯ ದಿನ ಅಂದರೆ ನ.30ರಂದು ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಸೇರಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ಕಾರ್ಯಕ್ರಮದಲ್ಲಿ ದೇಶದ ಗಣ್ಯರು ಸೇರಿದಂತೆ ಸಂತರು, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:59 pm, Wed, 29 October 25



