ಉಡುಪಿ: ಹಿರಿಯ ಬಿಜೆಪಿ ಮುಖಂಡ ಸುಧಾಕರ ಶೆಟ್ಟಿ ನಿಧನ

| Updated By: Rakesh Nayak Manchi

Updated on: Jan 04, 2024 | 11:52 AM

ಉಡುಪಿ ಹಿರಿಯ ಬಿಜೆಪಿ ಮುಖಂಡರೂ ಆಗಿರುವ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲಿಕ ಸುಧಾಕರ ಶೆಟ್ಟಿ ಅವರು ನಿಧನ ಹೊಂದಿದ್ದಾರೆ. ಮೂರು ಬಾರಿ ಉಡುಪಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ ಶೆಟ್ಟಿ, ಒಂದು ಬಾರಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಉಡುಪಿ: ಹಿರಿಯ ಬಿಜೆಪಿ ಮುಖಂಡ ಸುಧಾಕರ ಶೆಟ್ಟಿ ನಿಧನ
ಉಡುಪಿ ಹಿರಿಯ ಬಿಜೆಪಿ ಮುಖಂಡ ಸುಧಾಕರ ಶೆಟ್ಟಿ ನಿಧನ
Follow us on

ಉಡುಪಿ, ಜ.4: ಅನಾರೋಗ್ಯದಿಂದ ಬಳಲುತ್ತಿದ್ದ ಉಡುಪಿಯ (Udupi) ಹಿರಿಯ ಬಿಜೆಪಿ ಮುಖಂಡರೂ ಆಗಿರುವ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲಿಕ ಸುಧಾಕರ ಶೆಟ್ಟಿ (Sudhakar Shetty) ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಮಾತ್ರವಲ್ಲದೆ ಹೊಟೇಲ್ ಉದ್ಯಮದಲ್ಲಿ ಹೆಚ್ಚು ಹೆಸರುವಾಸಿಯಾಗಿದ್ದರು. ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಮೂರು ಬಾರಿ ಉಡುಪಿ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸುಧಾಕರ ಶೆಟ್ಟಿ, ಎರಡು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ಮೂರು ಚುನಾವಣೆಯಲ್ಲೂ ಇವರು ಸೋಲು ಅನುಭವಿಸಿದ್ದರು. 2009 ರಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿ: Surajit Dutta Death: ತ್ರಿಪುರಾದ ಮಾಜಿ ಸಚಿವ, ಬಿಜೆಪಿ ಶಾಸಕ ಸುರಜಿತ್ ದತ್ತಾ ನಿಧನ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ