AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ

Udupi Businessman Shot Dead: ಇತ್ತೀಚೆಗೆ ಉಡುಪಿಯಲ್ಲಿ ಓರ್ವ ಉದ್ಯಮಯನ್ನ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್‌ ನಡೆದಿದ್ದು, ಉದ್ಯಮಿ, ಕಾಂಗ್ರೆಸ್ ಮುಖಂಡನ ಹತ್ಯೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ನಡೆಸಿದ್ದಾರೆ.

ಉಡುಪಿಯಲ್ಲಿ ಮತ್ತೊಂದು ಶೂಟೌಟ್‌; ಗುಂಡಿಕ್ಕಿ ಕಾಂಗ್ರೆಸ್‌ ಮುಖಂಡನ ಬರ್ಬರ ಹತ್ಯೆ
ಡೇವಿಡ್‌ ಡಿಸೋಜಾ Image Credit source: tv9 kannada
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Aug 07, 2026 | 6:01 PM

Share

ಮುಖ್ಯಾಂಶಗಳು

  • ಉಡುಪಿಯಲ್ಲಿ ಮತ್ತೊಂದು ಶೂಟೌಟ್‌
  • ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ
  • ಹತ್ಯೆಗೈದ ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಉಡುಪಿ, ಆಗಸ್ಟ್​​ 07: ಇತ್ತೀಚೆಗೆ ಕರಾವಳಿಯ ಕಡಲತಡಿಯಲ್ಲಿ ನಡೆದ ಶೂಟೌಟ್​​ನಲ್ಲಿ (Shootout) ಓರ್ವ ಉದ್ಯಮಿ ಕೊಲೆಯಾಗಿದ್ದರು. ಇದೀಗ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಶೂಟೌಟ್‌ ಘಟನೆ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಡೇವಿಡ್‌ ಡಿಸೋಜಾರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ (death) ಮಾಡಿದ್ದಾರೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಸಂಭವಿಸಿದೆ.

ಗುಂಡಿಕ್ಕಿ ಕಾಂಗ್ರೆಸ್ ಮುಖಂಡನ ಹತ್ಯೆ

ಕೊಲೆಯಾದ ಡೇವಿಡ್‌ ಡಿಸೋಜಾ ಮುದರಂಗಡಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾಗಿದ್ದರು. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶೂಟೌಟ್‌ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್​​ ದರೋಡೆಗೆ ಯತ್ನ: ಮಾಲೀಕನ ಮೇಲೆ ಗುಂಡಿನ ದಾಳಿ

ಇನ್ನು ವೈಯಕ್ತಿಕ ದ್ವೇಷ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹತ್ಯೆಗೈದು ತಲೆಮರೆಸಿಕೊಂಡಿರುವ ಹಂತಕರ ಪತ್ತೆಗಾಗಿ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಹಣಕಾಸಿನ ವೈಷಮ್ಯಕ್ಕೆ ಉದ್ಯಮಿ ಐವನ್ ರೀಚರ್ಡ್ ಮಸ್ಕರೇನಸ್ ಗುಂಡಿಕ್ಕಿ ಹತ್ಯೆ

ಇನ್ನು ಇತ್ತೀಚೆಗೆ ಉಡುಪಿ ಜಿಲ್ಲೆಯ ಕುಂದಾಪುರದ ಹೋಲಿ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ಉದ್ಯಮಿ ಐವನ್ ರೀಚರ್ಡ್ ಮಸ್ಕರೇನಸ್ (45) ಅವರನ್ನು ಡೆರಿಕ್ ಎಂಬಾತ ನಾಡಪಿಸ್ತೂಲಿನಿಂದ ಗುಂಡಿಕ್ಕಿ ಭೀಕರವಾಗಿ ಕೊಲೆ ಮಾಡಿದ್ದ. 27 ಲಕ್ಷ ರೂ ಹಣ ವಸೂಲಿ ಮಾಡಿಕೊಟ್ಟಿದ್ದ ಐವನ್‌ಗೆ ನೀಡಬೇಕಿದ್ದ ಕೇವಲ 1.5 ಲಕ್ಷ ರೂ ಬಾಕಿ ಹಣದ ವಿಚಾರವಾಗಿ ಇಬ್ಬರ ನಡುವೆ ಉಂಟಾದ ತೀವ್ರ ವಾಗ್ವಾದ ಕೊನೆಗೂ ಕೊಲೆಯಲ್ಲಿ ಅಂತ್ಯವಾಗಿತ್ತು.

ಇದನ್ನೂ ಓದಿ: 40 ಲಕ್ಷ ರೂ ವರದಕ್ಷಿಣೆ, ಸಂಬಳಕ್ಕಾಗಿ ಗಲಾಟೆ: ಚೇಂಬರ್​​​ಗೆ ನುಗ್ಗಿ ಹೆತ್ತ ಮಗಳಿಗೆ ಚಾಕುವಿನಿಂದ ಇರಿದ ತಂದೆ!

ಮೃತ ಐವನ್ ರೌಡಿಶೀಟರ್ ಪಿಟ್ಟಿ ನಾಗೇಶ್ ಕೊಲೆ ಪ್ರಕರಣದಲ್ಲೂ ಆರೋಪಿಯಾಗಿದ್ದ. ಕೃತ್ಯ ಎಸಗಿ ಪರಾರಿಯಾಗಿರುವ ಆರೋಪಿ ಡೆರಿಕ್ ಪತ್ತೆಗೆ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ