ಉಡುಪಿ: ರಜತ ಮಹೋತ್ಸವದ ಸಂಭ್ರಮವನ್ನ ಇಮ್ಮಡಿಗೊಳಿಸಿದ ರಾಜ್ಯ ಮಟ್ಟದ ವಾಲಿಬಾಲ್​ ಪಂದ್ಯಾವಳಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 11, 2022 | 9:07 AM

ಜಿಲ್ಲೆಯ ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿ ಮೊಟ್ಟ ಮೊದಲ ಬಾರಿಗೆ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನ ನಡೆಸಲಾಗಿದೆ. ಕುಂದಾಪುರದ ಗ್ರಾಮೀಣ ಪ್ರದೇಶದ ಕಾಲೇಜಿನಲ್ಲಿ ಆಯೋಜಿಸಲಾದ ಈ ವಾಲಿಬಾಲ್ ಪಂದ್ಯಾವಳಿ ಯಾವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೂ ಕಡಿಮೆ ಇಲ್ಲ ಎನ್ನುವ ರೀತಿಯಲ್ಲಿ ನಡೆದಿದೆ.

ಉಡುಪಿ: ರಜತ ಮಹೋತ್ಸವದ ಸಂಭ್ರಮವನ್ನ ಇಮ್ಮಡಿಗೊಳಿಸಿದ ರಾಜ್ಯ ಮಟ್ಟದ ವಾಲಿಬಾಲ್​ ಪಂದ್ಯಾವಳಿ
ಉಡುಪಿ
Follow us on

ಉಡುಪಿ: ಜಿಲ್ಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ, ಗ್ರಾಮೀಣ ಮಟ್ಟದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಪದವಿ ಪೂರ್ವ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ವಾಲಿಬಾಲ್ ಕ್ರೀಡೆಗೆ ಅತೀ ಹೆಚ್ಚು ಕ್ರೀಡಾಪಟುಗಳನ್ನು ನೀಡಿರುವ ಕುಂದಾಪುರ ತಾಲೂಕಿನಲ್ಲಿಯೇ ರಾಜ್ಯಮಟ್ಟದ ಪಂದ್ಯಾವಳಿಯನ್ನ ಏರ್ಪಡಿಸಿತ್ತು. ಸುಣ್ಣಾರಿಯ ಸುಜ್ಞಾನ ಎಜುಕೇಶನ್ ಟ್ರಸ್ಟ್ ವತಿಯಿಂದ ಸುಮಾರು ಮೂರು ದಿನಗಳ ಕಾಲ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಗಿದ್ದು, ಮೂರು ದಿನಗಳ ಕಾಲ 900 ಕ್ಕೂ ಅಧಿಕ ಕ್ರೀಡಾಪಟುಗಳು ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಿಂದ ಉಡುಪಿಯು ಪ್ರತ್ಯೇಕವಾಗಿ 25 ವರ್ಷಗಳು ಸಂದಿವೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳು ಆಯೋಜನೆಯಾಗುತ್ತಲಿದೆ. ಇಂತಹ ಕಾರ್ಯಕ್ರಮಗಳಿಗೆ ಮೆರಗು ನೀಡುತ್ತಿರುವುದು ಕುಂದಾಪುರದ ಸುಣ್ಣಾರಿಯಲ್ಲಿನ ಸುಜ್ಞಾನ ಎಜುಕೇಶನ್ ಟ್ರಸ್ಟ್ ಎಕ್ಸಲೆಂಟ್ ಕಾಲೇಜು. ಈ ಬಾರಿ ರಾಜ್ಯಮಟ್ಟದ ಪದವಿ ಪೂರ್ವ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನ ಗ್ರಾಮೀಣ ಪ್ರದೇಶವಾಗಿರುವ ಸುಣ್ಣಾರಿಯಲ್ಲಿ ಅತ್ಯಂತ ಸುಸಜ್ಜಿತವಾಗಿ ಆಯೋಜಿಸಲಾಗಿತ್ತು. ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಜ್ಯದ 33 ಜಿಲ್ಲೆಗಳ ತಂಡಗಳು ಭಾಗವಹಿಸುವ ಮೂಲಕ ಸಂಭ್ರಮಕ್ಕೆ ಸಾಕ್ಷಿಯಾಯಿತು.

ಎಕ್ಸಲೆಂಟ್ ಕಾಲೇಜು ಪ್ರಾಂಶುಪಾಲ ಡಾ.ರಮೇಶ್ ಶೆಟ್ಟಿ ಮಾತನಾಡಿ  ಸುಮಾರು 33 ಶೈಕ್ಷಣೀಕ ಜಿಲ್ಲೆಯಿಂದ 66 ತಂಡಗಳು ಭಾಗವಹಿಸಿದ್ದಾವೆ.  ಗ್ರಾಮೀಣ ಭಾಗದಲ್ಲಿ ಇಂತಹ ಒಂದು ದೊಡ್ಡ ಮಟ್ಟದ ಕಾರ್ಯಕ್ರಮವನ್ನ ಆಯೋಜಿಸಲಿಕ್ಕೆ ಮುಖ್ಯ ಕಾರಣ ಇಲ್ಲಿನ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುವ ಹಾಗೂ ಇಲ್ಲಿನ ಪ್ರತಿಭೆಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನ ಇಲ್ಲಿ ಆಯೋಜಿಸಿ ಉಡುಪಿ ಜಿಲ್ಲೆಯ ಪ್ರತಿಷ್ಟೇಯನ್ನ ಎತ್ತಿ ಹಿಡಿಯುವ ಕಾರ್ಯಕ್ಕೆ ಕೈ ಹಾಕಿದ್ದೇವೆ. ಈ ಕಾರ್ಯಕ್ಕೆ ಎಲ್ಲ ಜನಪ್ರತಿನಿಧಿಗಳು ಹಾಗೂ ಕ್ರೀಡಾಪಟುಗಳು ಉತ್ತಮ ಸಾಥ್​ ನೀಡಿದ್ದಾರೆ.

ಇದನ್ನೂ ಓದಿ:ಹಾಸನದಲ್ಲಿ ಗ್ರಾಮೀಣ ಕ್ರೀಡೆಗಳ ರಂಗು, ಹುಬ್ಬಳ್ಳಿಯಲ್ಲಿ ಮಿಸೆಸ್ ಇಂಡಿಯಾ ಸೊಬಗು

ವಾಲಿಬಾಲ್ ಪಂದ್ಯಾಟದ ಕುರಿತು ಗ್ರಾಮೀಣ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಅದ್ದೂರಿ ಪುರಮೆರವಣಿಗೆ ಪಂದ್ಯಾಟದ ಹೈಲೈಟ್ ಆಗಿತ್ತು. ಒಟ್ಟಾರೆಯಾಗಿ ಕ್ರೀಡಾಕೂಟದ ಮೂಲಕ ಗ್ರಾಮೀಣ ಜನರನ್ನು ವಾಲಿಬಾಲ್ ಕ್ರೀಡೆಯತ್ತ ಸೆಳೆಯುವ ಕಾರ್ಯ ಕುಂದಾಪುರದಲ್ಲಿ ನಡೆದಿದೆ

ವರದಿ : ದಿನೇಶ್ ಯಲ್ಲಾಪುರ್ ಟಿವಿ9 ಉಡುಪಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ