AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಹರಿಕಥೆ ಕಲಾವಿದೆ ವಿಡಿಯೋ ಮೂಲಕ ಸಾರ್ವಜನಿಕ ಕ್ಷಮೆಯಾಚನೆ ಮಾಡಿದ್ದಾರೆ. ಇದೇ ವೇಳೆ ಪರ್ಯಾಯ ಶಿರೂರು ಮಠವೂ ಘಟನೆಗೆ ವಿಷಾದ ವ್ಯಕ್ತಪಡಿಸಿ ಅಧಿಕೃತ ಸ್ಪಷ್ಟನೆ ನೀಡಿದೆ.

ಉಡುಪಿ ಶ್ರೀಕೃಷ್ಣದಲ್ಲಿ ಆದಿ ಶಂಕರಾಚಾರ್ಯರ ನಿಂದನೆ ವಿವಾದ: ಕ್ಷಮೆ ಯಾಚಿಸಿದ ಹರಿಕಥೆ ಕಲಾವಿದೆ, ಶಿರೂರು ಮಠದಿಂದಲೂ ಸ್ಪಷ್ಟನೆ
ಹರಿಕಥೆ ಕಲಾವಿದೆ ಹಾಗೂ ಶಿರೂರು ಮಠದ ಸ್ಪಷ್ಟನೆImage Credit source: tv9
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 14, 2026 | 10:01 AM

Share

ಮುಖ್ಯಾಂಶಗಳು

  • ವಿಡಿಯೋ ಮೂಲಕ ಕಲಾವಿದೆಯ ಕ್ಷಮೆಯಾಚನೆ
  • ಶಿರೂರು ಮಠದಿಂದ ಅಧಿಕೃತ ಸ್ಪಷ್ಟನೆ
  • ಘಟನೆಯ ಬಗ್ಗೆ ಮಠ ವಿಷಾದ

ಉಡುಪಿ, ಜುಲೈ 14: ಉಡುಪಿ  (Udupi) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಹರಿಕಥೆ ಕಾರ್ಯಕ್ರಮದಲ್ಲಿ ಆದಿ ಶಂಕರಾಚಾರ್ಯರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ, ಹರಿಕಥೆ ಕಲಾವಿದೆ ವಿಡಿಯೋ ಸಂದೇಶದ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಉಡುಪಿ ಮಠ ಅಥವಾ ಶಿರೂರು ಮಠಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಕಲಾವಿದೆ, ‘ಯಾರನ್ನೂ ನಿಂದಿಸುವ ಉದ್ದೇಶ ನಮಗಿರಲಿಲ್ಲ. ಯಾವುದೇ ಮಧ್ವ ಮಠದವರು ಈ ರೀತಿಯ ಹೇಳಿಕೆ ನೀಡುವಂತೆ ನಮಗೆ ಹೇಳಿಕೊಟ್ಟಿಲ್ಲ. ಪುಸ್ತಕವನ್ನು ಉಲ್ಲೇಖಿಸಿ ಓದಿದ್ದೇವೆ. ನಮ್ಮ ಮಾತಿನಿಂದ ಬೇರೆ ಮತದವರಿಗೆ ಅಥವಾ ಮಠದವರಿಗೆ ನೋವಾಗಿದ್ದರೆ ಹೃತ್ಪೂರ್ವಕ ಕ್ಷಮೆ ಕೋರುತ್ತೇವೆ’ ಎಂದು ಹೇಳಿದ್ದಾರೆ.

ಹರಿಕಥೆ ಕಲಾವಿದೆಯ ಕ್ಷಮೆಯಾಚನೆ ವಿಡಿಯೋ

ವಿಷಾದ ವ್ಯಕ್ತಪಡಿಸಿದ ಶಿರೂರು ಮಠ

ಘಟನೆಗೆ ಸಂಬಂಧಿಸಿದಂತೆ ಪರ್ಯಾಯ ಶಿರೂರು ಮಠವೂ ಅಧಿಕೃತ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ. ಶಿರೂರು ಮಠದ ದಿವಾನರಾದ ಡಾ. ಉದಯಕುಮಾರ ಸರಳತ್ತಾಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ, ಮಠದ ಸುಪರ್ದಿಯಲ್ಲಿರುವ ರಾಜಾಂಗಣದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿತ್ತು ಎಂದು ತಿಳಿಸಿದ್ದಾರೆ. ಅಂಕಿತಾ ನಾಯಕ್ ಹಾಗೂ ಗೌರಿ ಪಾಂಡುರಂಗಿ ಅವರು ಭರತನಾಟ್ಯ ಕಾರ್ಯಕ್ರಮಕ್ಕಾಗಿ ಅನುಮತಿ ಕೋರಿದ್ದು, ಕಾರ್ಯಕ್ರಮದ ಮಧ್ಯೆ ‘ಭಕ್ತ ಪ್ರಹ್ಲಾದ’ ಹರಿಕಥೆ ನಡೆಸಲಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಯುವತಿಯರಿಂದ ಶ್ರೀ ಆದಿ ಶಂಕರಾಚಾರ್ಯರ ನಿಂದನೆ ಆರೋಪ: ವಿಡಿಯೋ ವೈರಲ್​​

ಆ ಸಂದರ್ಭದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಕುರಿತು ಅಕ್ಷೇಪಾರ್ಹ ಹೇಳಿಕೆ ನೀಡಿರುವುದು ಮಠದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಬ್ಬರಿಗೂ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಸೂಚಿಸಲಾಗಿತ್ತು. ಅದರಂತೆ ಅವರು ಕ್ಷಮೆಯಾಚಿಸಿದ್ದು, ಈ ಅನಪೇಕ್ಷಿತ ಘಟನೆಯ ಬಗ್ಗೆ ಮಠ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಏನಿದು ವಿವಾದ?

ರಾಜಾಂಗಣದಲ್ಲಿ ಮಹಿಳೆಯರೀರ್ವರು ನಡೆಸಿಕೊಟ್ಟ ಹರಿಕಥೆ ಕಾರ್ಯಕ್ರಮದಲ್ಲಿ ಆಚಾರ್ಯ ಮಾಧ್ವರ ಕಥೆ ಹೇಳುವ ಸಂದರ್ಭದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯರರನ್ನು ಏಕವಚನದಲ್ಲಿ ನಿಂದಿಸಲಾಗಿತ್ತು. ಶಂಕರಾಚಾರ್ಯರ ಬಗ್ಗೆ ಅವಹೇಳನಕಾರಿಯಾಗಿ ಕಟ್ಟುಕಥೆ ಹೇಳಲಾಗಿತ್ತು. ಅದು ಶಂಕರ ಅನುಯಾಯಿಗಳು ಹಾಗೂ ಹಿಂದೂ ಪರ ಹೋರಾಟಗಾರರನ್ನು ಕೆರಳಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 am, Tue, 14 July 26

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು