AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ

ಉಡುಪಿಯ ಡೆಲ್ಟಾ ಬೀಚ್ ಬಳಿ ಸಂಭವಿಸಿದ ಪ್ರವಾಸಿ ಬೋಟ್ ದುರಂತದಲ್ಲಿ ಮೈಸೂರಿನ ಮತ್ತೋರ್ವ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆ ಮೂಲಕ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ. ಮೈಸೂರು ಬಿಪಿಒ ಕಾಲ್‌ಸೆಂಟರ್‌ನ 28 ಉದ್ಯೋಗಿಗಳು 2 ಬೋಟ್‌ಗಳಲ್ಲಿ ತೆರಳಿದ್ದಾಗ ಒಂದು ಬೋಟ್ ಸಮುದ್ರಪಾಲಾಗಿತ್ತು.

ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ
ಡೆಲ್ಟಾ ಬೀಚ್, ದಿಶಾ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Jan 27, 2026 | 10:12 PM

Share

ಉಡುಪಿ, ಜನವರಿ 27: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ (Boat Tragedy) ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೋರ್ವ ಯುವತಿ ಸಾವನ್ನಪ್ಪಿದ್ದಾರೆ (death). ಮೈಸೂರಿನ ದಿಶಾ(23) ಮೃತ ಯುವತಿ. ನಿನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕ‌ನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ

ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್ ವಿಶ್ವಪ್ರಸಿದ್ಧ. ಯೂಟ್ಯೂಬ್ ನಲ್ಲಿ ಈ ಬಿಚ್​​ ವಿಡಿಯೋ ನೋಡಿದರೆ ಭೂಲೋಕದ ಸ್ವರ್ಗದಂತೆ ಕಾಣಿಸುತ್ತೆ. ಇಲ್ಲಿ ಮೋಜು ಮಾಡಬೇಕೆಂದು ಬಂದ ಮೈಸೂರಿನ ಬಿಪಿಒ ಕಾಲ್ ಸೆಂಟರ್​ವೊಂದರ 28 ಮಂದಿ ಪ್ರವಾಸಿಗರ ತಂಡ, ಇದೀಗ ಕಣ್ಣೀರಿಡುತ್ತಾ ವಾಪಸಾಗುವಂತಾಗಿದೆ.

ಇದನ್ನೂ ಓದಿ: ಉಡುಪಿ ಮಲ್ಪೆ ಬೀಚ್​ನಲ್ಲಿ ಮಗುಚಿ ಬಿದ್ದ ಟೂರಿಸ್ಟ್ ಬೋಟ್! ಇಬ್ಬರು ಸಾವು

ಇಲ್ಲಿನ ಡೆಲ್ಟಾ ಬೀಚ್ ಸಮೀಪ, ಎರಡು ಪ್ರವಾಸಿ ಬೋಟುಗಳಲ್ಲಿ 28 ಮಂದಿ ಕಡಲಿಗೆ ಇಳಿದಿದ್ದರು. ಎಲ್ಲ ಪ್ರವಾಸಿಗರಿಗೂ ಭದ್ರತೆಯ ದೃಷ್ಟಿಯಿಂದ ಲೈಫ್ ಜಾಕೆಟ್ ನೀಡಲಾಗಿತ್ತು. ಈ ಪೈಕಿ ಹಲವರು ಜಾಕೆಟ್ ಧರಿಸಿದರೆ ಇನ್ನು ಕೆಲವರು ನೆಗ್ಲೆಟ್ ಮಾಡಿ ಹಾಗೇನೆ ಬೋಟ್ ಹತ್ತಿದ್ದರು ಎನ್ನಲಾಗಿದೆ. ಕಡಲಿನಲ್ಲಿ ಬೋಟ್ ಸಾಗುತ್ತಿದ್ದಂತೆ ಕೆಲ ಪ್ರವಾಸಿಗರ ಹುಚ್ಚಾಟ ಜೋರಾಗಿತ್ತು. ಕುಣಿಯಲು ಪ್ರಾರಂಭಿಸಿದ್ದರು. ಇದರಿಂದ ನಿಯಂತ್ರಣ ತಪ್ಪಿದ ಬೋಟು ಮಗಚಿ ಬಿದ್ದಿದೆ.

ಇದನ್ನೂ ಓದಿ: ಹೀಗೆ ಕಲುಷಿತಗೊಂಡರೆ ಸೌಪರ್ಣಿಕಾ ನದಿ ಉಳಿಯುತ್ತಾ? ಸಮಗ್ರ ವರದಿ ಸಲ್ಲಿಸುವಂತೆ ಹಸಿರು ನ್ಯಾಯಮಂಡಳಿ ಆದೇಶ

ತಕ್ಷಣ ಅಲರ್ಟ್ ಆದ ಸ್ಥಳೀಯ ಮೀನುಗಾರರಾದ ನಾಗರಾಜ, ವಿಶ್ವನಾಥ್ ಶ್ರೀಯಾನ್, ದಿನೇಶ್ ಕರ್ಕೆರ ಇನ್ನೊಂದು ಬೋಟಿನ ಮೂಲಕ ಸ್ಥಳಕ್ಕೆ ತೆರಳಿ ನೀರಿನಲ್ಲಿ ಮುಳುಗಿದವರನ್ನು ಮೇಲಕ್ಕೆತ್ತಿದ್ದಾರೆ. ಹಲವರು ಲೈಫ್ ಜಾಕೆಟ್ ಧರಿಸಿದ್ದರಿಂದ ಸುಲಭವಾಗಿ ಮತ್ತೊಂದು ಬೋಟ್​ಗೆ ಶಿಫ್ಟ್ ಮಾಡಲಾಯಿತು. ನೀರಿಗೆ ಬಿದ್ದ 14 ಮಂದಿಯ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಶಂಕರಪ್ಪ(22) ಹಾಗೂ ಸಿಂಧು (23) ಆಸ್ಪತ್ರೆಗೆ ಸಾಗುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದಾರೆ. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ದಿಶಾ ಕೂಡ ಸಾವನ್ನಪ್ಪಿದ್ದು, ಧರ್ಮರಾಜ್​ಗೆ ಚಿಕಿತ್ಸೆ ಮುಂದುವರೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?