ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ಒಂದು ದುರಂತ ಸಂಭವಿಸಿದೆ. ರಜಾ ದಿನಗಳಲ್ಲಿ ಗೆಳೆಯರ ಜೊತೆ ಅಣೆಕಟ್ಟೆಯಲ್ಲಿ ಈಜಲು ಹೋಗಿದ್ದ ಶ್ರೀಶ್ (13) ಮತ್ತು ಜಯಂತ್ (19) ಎಂಬ ಇಬ್ಬರು ಬಾಲಕರು ಮುಳುಗಿ ಮೃತಪಟ್ಟಿದ್ದಾರೆ. ಈ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು
ಉಡುಪಿ: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on:Dec 01, 2024 | 5:51 PM

ಉಡುಪಿ, ಡಿಸೆಂಬರ್​ 01: ಡ್ಯಾಮ್​ನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದಲ್ಲಿ ನಡೆದಿದೆ. ಶ್ರೀಶ(13), ಜಯಂತ್(19) ಮೃತ ದುರ್ದೈವಿಗಳು. ರಜೆ ಹಿನ್ನೆಲೆ ಗೆಳೆಯರ ಜೊತೆ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಶಿಕ್ಷಕಿ ಆತ್ಮಹತ್ಯೆ 

ಪತಿಯ ಅಗಲುವಿಕೆಯಿಂದ ಮನನೊಂದ ಅಂಗನವಾಡಿ ಶಿಕ್ಷಕಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿನಲ್ಲಿ ಇತ್ತೀಚೆಗೆ ನಡೆದಿತ್ತು. ಮಿಯ್ಯಾರು ಅಂಗನವಾಡಿ ಕಾರ್ಯಕರ್ತೆ ಸೌಮ್ಯ (40) ಆತ್ಮಹತ್ಯೆ ಮಾಡಿಕೊಂಡಿದ್ದ ಅಂಗನವಾಡಿ ಶಿಕ್ಷಕಿ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಬಾಲಕಿ ಮೇಲೆ ದೈಹಿಕ ಶಿಕ್ಷಕನಿಂದ ಅತ್ಯಾಚಾರ, ಮದುವೆ ಆಗುವುದಾಗಿ ನಂಬಿಸಿ ಯುವತಿಗೆ ವಂಚನೆ

ಬೆಳಿಗ್ಗೆ ಮಿಯ್ಯಾರಿನ ತನ್ನ ಮನೆಯ ಬಾವಿಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದರು. ಕಳೆದ 20 ವರ್ಷಗಳಿಂದ ಮಿಯ್ಯಾರು ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸಿದ್ದ ಅವರು ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಸಕ್ರಿಯರಾಗಿದ್ದರು.

ಸೌಮ್ಯ ಅವರ ಪತಿ ಸಂತೋಷ್‌ ಪೂಜಾರಿ ಅವರು ಎರಡು ತಿಂಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಆ ಬಳಿಕ ಸೌಮ್ಯ ಅವರು ತೀವ್ರ ಮನನೊಂದಿದ್ದು, ಇದರಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ದಂಪತಿ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

ಮೂರು ದಿನದಿಂದ ನಾಪತ್ತೆಯಾಗಿದ್ದ ಬಾಲಕ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವಂತಹ ಘಟನೆ ಗದಗ ನಗರದ ಗಂಗಿಮಡಿ ಬಳಿಯ ಜಮೀನೊಂದರಲ್ಲಿ ನಡೆದಿದೆ. ಶಿವಾಜಿ ವಡ್ಡೇಪಲ್ಲಿ (14) ಮೃತ ಬಾಲಕ.  ಮೂರು ದಿನಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದ.

ಇದನ್ನೂ ಓದಿ: ಪೆರೇಸಂದ್ರ ಬಳಿ ಕಂಟೈನರ್ ಪತ್ತೆ: 3 ಕೋಟಿ ರೂ ಮೌಲ್ಯದ ಮೊಬೈಲ್ ಜತೆಗೆ ಚಾಲಕ ನಾಪತ್ತೆ

ಪೋಷಕರು ಗದಗ ಗ್ರಾಮಾಂತರ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. ಇಂದು ಕೃಷಿ ಹೊಂಡದಲ್ಲಿ ಶವವಾಗಿ ಬಾಲಕ ಪತ್ತೆಯಾಗಿದ್ದಾನೆ. ಈಜಲು ಹೋಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಮಗನ ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡದಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:49 pm, Sun, 1 December 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ