AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ಬಿಸಿಲಿನ ತಾಪ: ಹೊರಾಂಗಣ ಆಟವಾಡುವುದು ನಿಷೇಧಿಸಿದ ಉಡುಪಿ ಜಿಲ್ಲಾಡಳಿತ

ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಶಾಲಾ ಮಕ್ಕಳ್ಳಿಗಾಗಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಉಡುಪಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.

Udupi: ಬಿಸಿಲಿನ ತಾಪ: ಹೊರಾಂಗಣ ಆಟವಾಡುವುದು ನಿಷೇಧಿಸಿದ ಉಡುಪಿ ಜಿಲ್ಲಾಡಳಿತ
ಪ್ರಾತಿನಿಧಿಕ ಚಿತ್ರImage Credit source: daijiworld.com
ಗಂಗಾಧರ​ ಬ. ಸಾಬೋಜಿ
|

Updated on:Mar 16, 2023 | 4:07 PM

Share

ಉಡುಪಿ: ಬಿಸಿಲಿನ ತಾಪಮಾನ (Heat Wave) ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಶಾಲಾ ಮಕ್ಕಳ್ಳಿಗಾಗಿ ಮುನ್ನೆಚ್ಚರಿಕೆ ಕ್ರಮವಹಿಸುವಂತೆ ಉಡುಪಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ. ಸುತ್ತೋಲೆ ಪ್ರಕಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ಮಕ್ಕಳು ಹೊರಾಂಗಣದಲ್ಲಿ ಆಟ ಆಡುವುದನ್ನು ನಿರ್ಬಂಧಿಸಲಾಗಿದೆ. ವಿದ್ಯಾರ್ಥಿಗಳು ಹೆಚ್ಚು ನೀರು ಕುಡಿಯಬೇಕು ಮತ್ತು ಸೂರ್ಯನ ಕಿರಣಗಳಿಗೆ ನೇರವಾಗಿ ಮೈಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯ ಬಿಇಒಗಳ ಮೂಲಕ ಎಲ್ಲಾ ಶಾಲೆಗಳಿಗೆ ನಿರ್ದೇಶನ ನೀಡಿದೆ. ಶಾಲಾ ಮಕ್ಕಳಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಶಾಲಾ ಮುಖ್ಯಸ್ಥರು, ಶಿಕ್ಷಕರು ಹಾಗೂ ಪಾಲಕರಿಗೆ ಸೂಚಿಸಲಾಗಿದೆ. ಇನ್ನು ಕೆಲವೆಡೆ ಪರೀಕ್ಷೆಗಳು ಆರಂಭವಾಗಿದ್ದು, ಮಕ್ಕಳು ಹೈಡ್ರೇಟ್​ ಆಗಿರುವುದು ಬಹಳ ಮುಖ್ಯ. ಮಧ್ಯಾಹ್ನದ ಬಿಸಿ ಊಟವನ್ನು ತಯಾರಿಸುವಾಗ ಸರಿಯಾದ ವಾತಾವರಣ ವ್ಯವಸ್ಥೆ ಮಾಡಲು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಇನ್ನು ಕ್ರಮಕೈಗೊಂಡ ಬಗ್ಗೆ ವರದಿ ಸಲ್ಲಿಸುವಂತೆ ಇಲಾಖೆಯೂ ಶಾಲೆಗಳಿಗೆ ತಿಳಿಸಿದೆ.

ಬಿಸಿಲಿನ ಝಳಕ್ಕೆ ಆರೋಗ್ಯ ಜೋಪಾನ

ಸೂಚ್ಯಂಕದ ಏರಿಕೆಯು ಆರೋಗ್ಯ ಸಮಸ್ಯೆಗಳಿರುವ ಜನರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮಂಜೇರಿ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಟಿ ಎಸ್ ಅನೀಶ್ ಹೇಳಿದ್ದಾರೆ. ಬಿಸಿಲಿನ ಆಘಾತದಿಂದ ದೇಹವನ್ನು ರಕ್ಷಿಸಲು ಆಗಾಗ್ಗೆ ನೀರು ಕುಡಿಯುತ್ತಿರಬೇಕು. ಬಿಸಿಲಿಗೆ ಹೊರಗೆ ಹೋದವರಿಗೆ ಮಾತ್ರ ಆಘಾತವಾಗುತ್ತದೆ ಎನ್ನುವಂತಿಲ್ಲ. ಒಳಾಂಗಣದಲ್ಲಿ ಕುಳಿತುಕೊಳ್ಳುವವರು, ವಿಶೇಷವಾಗಿ ದುರ್ಬಲರು ಅಸ್ವಸ್ಥತೆಯನ್ನು ಅನುಭವಿಸಬಹುದು. ಆರ್ದ್ರತೆ ಅಥವಾ ತಾಪಮಾನದ ಹೆಚ್ಚಳವು ಮಧುಮೇಹ ಮತ್ತು ಹೃದ್ರೋಗಿಗಳು ಸೇರಿದಂತೆ ಆರೋಗ್ಯ ಸಮಸ್ಯೆಗಳಿರುವ ಜನರ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಭಾರೀ ಬಿಸಿಲು: ಕಾರ್ಮಿಕರ ಕೆಲಸದ ಅವಧಿ ಬದಲಾವಣೆ; ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಕರೆ

ಆಹಾರ ಸೇವನೆ ಬಗ್ಗೆ ತಜ್ಞರು ಹೇಳಿದ್ದೇನು?

ದೇಹದಲ್ಲಿನ ಜಲಾಂಶ ಇರುವಂತೆ ಮಾಡಲು ಮನೆಯಲ್ಲಿ ಸಿದ್ಧಪಡಿಸಿದ ನಿಂಬೆಹಣ್ಣು ರಸ, ಮಜ್ಜಿಗೆ, ಹಣ್ಣಿನ ಜ್ಯೂಸ್ ಕುಡಿಯಲು ತಜ್ಞರು ಸೂಚಿಸಿದ್ದಾರೆ. ಮದ್ಯ, ಚಹಾ, ಕಾಫಿ, ಕಾರ್ಬನೇಟೆಡ್ ಸಿಹಿಪಾನೀಯಗಳು, ಸಾಕಷ್ಟು ಸಕ್ಕರೆ ಹೊಂದಿರುವ ಪಾನೀಯಗಳು ಇವುಗಳ ಸೇವನೆ ಕಮ್ಮಿ ಮಾಡಿ ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ. ಸಾಕಷ್ಟು ಪ್ರಮಾಣದ ಸಿಹಿ ಪದಾರ್ಥಗಳನ್ನು ಸೇವಿಸುವುದರಿಂದ ದೇಹದಲ್ಲಿ ಹೆಚ್ಚಿನ ದ್ರವವನ್ನು ಕಳೆದುಕೊಳ್ಳುವುದು ಮತ್ತು ಹೊಟ್ಟೆನೋವು ಮುಂತಾದ ತೊಂದರೆಗಳಿಗೆ ಕಾರಣವಾಗುತ್ತದೆ. ಹೆಚ್ಚಿನ ಪ್ರೋಟೀನ್ ಒಳಗೊಂಡಿರುವ ಆಹಾರ,ಹಳಸಿದ ಆಹಾರಗಳ ಸೇವನೆ ಬೇಡ.

ಮಾಂಸಾಹಾರ ಅಥವಾ ನಾನ್ ವೆಜ್ ಆಹಾರದ ಹೆಚ್ಚಿನ ಸೇವನೆ ಒಳ್ಳೆಯದಲ್ಲ. ಇಂಥಾ ಆಹಾರ ಜೀರ್ಣವಾಗಲುಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಜೀರ್ಣಕ್ರಿಯೆಯನ್ನು ಹೆಚ್ಚು ಸಮಯ ತೆಗೆದುಕೊಳ್ಳುವುದರಿಂದ ದೇಹದಲ್ಲಿ ಉಷ್ಣತೆಯು ಹೆಚ್ಚಾಗುತ್ತದೆ, ಇದು ನಿರ್ಜಲೀಕರಣವನ್ನು ಹೆಚ್ಚಿಸುತ್ತದೆ. ಹೊಟ್ಟೆನೋವು ಮತ್ತು ಇತರ ತೊಂದರೆಗಳು ಆಗದಂತೆ ನಿಂಬೆಹಣ್ಣು, ಎಳನೀರು, ಮಜ್ಜಿಗೆ ಕುಡಿಯಿರಿ. ಖಾರವಾದ ಆಹಾರಗಳ ಸೇವನೆ ಕಡಿಮೆ ಮಾಡಿ. ಸಾಕಷ್ಟು ತರಕಾರಿಗಳನ್ನು ಸೇವಿಸಬೇಕು.ಸಡಿಲವಾದ ಬಟ್ಟೆ ಧರಿಸಿ, ದೇಹಕ್ಕೆ ನೇರವಾಗಿ ಸೂರ್ಯ ರಶ್ಮಿ ತಾಕದಂತೆ ನೋಡಿಕೊಳ್ಳಿ. ಮನೆಯೊಳಗೆಯೂ ಶಾಖ ಹೆಚ್ಚಾಗದಂತೆ ನೋಡಿಕೊಳ್ಳಿ, ಕಿಟಕಿ ಬಾಗಿಲುಗಳಿಗೆ ಪರದೆ ಹಾಕಿ, ಗಾಳಿಯಾಡುವಂತಿರಲಿ.

ಇದನ್ನೂ ಓದಿ: ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೀಸಿದ ಬಿಸಿಗಾಳಿ, ದೇಶದಲ್ಲೇ ಮೊದಲು

ಕಾರ್ಮಿಕರ ಕೆಲಸದ ಸಮಯದಲ್ಲಿ ಬದಲಾವಣೆ

ರಾಜ್ಯದಲ್ಲಿ ಹೆಚ್ಚುತ್ತಿರುವ ತಾಪಮಾನದ ಹಿನ್ನೆಲೆಯಲ್ಲಿ ಬಿಸಿಲಿನಲ್ಲಿ ಕೆಲಸ ಮಾಡುವ ಕಾರ್ಮಿಕರ ಕೆಲಸದ ಸಮಯವನ್ನು ಮಾರ್ಚ್ 2ರಿಂದ ಏಪ್ರಿಲ್ 30 ರವರೆಗೆ ಮರು ನಿಗದಿಪಡಿಸಲಾಗಿದೆ. ಬಿಸಿಲ ಬೇಗೆಯ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ಇದ್ದ ಕೆಲಸದ ಅವಧಿಯನ್ನು ಎಂಟು ಗಂಟೆಗೆ ಇಳಿಕೆ ಮಾಡಲಾಗಿದೆ. ಪಾಳಿ ಕಾರ್ಮಿಕರಿಗೆ ಮಧ್ಯಾಹ್ನ 12 ಗಂಟೆಗೆ ಪಾಳಿ ಕೊನೆಗೊಂಡು 3 ಗಂಟೆಗೆ ಪ್ರಾರಂಭವಾಗಲಿದೆ ಎಂದು ಕಾರ್ಮಿಕ ಆಯುಕ್ತರು ಹೇಳಿದ್ದಾರೆ.

ಸಮುದ್ರ ಮಟ್ಟದಿಂದ 3000 ಅಡಿಗಿಂತ ಮೇಲಿರುವ ಪ್ರದೇಶಗಳ ಜನರಿಗೆ ಇದು ಅನ್ವಯವಾಗುವುದಿಲ್ಲ. ಕೇರಳದಲ್ಲಿ ಬಿಸಿಲಿನ ಬೇಗೆ ತತ್ತರಿಸಿದ್ದು, ಎರಡು ಬಿಸಿಲು ಆಘಾತ ಪ್ರಕರಣ ಸೇರಿದಂತೆ 102 ಶಾಖದ ಗಾಯ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯ ಆರೋಗ್ಯ ಇಲಾಖೆ ಜನರಿಗೆ ಸೂಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:07 pm, Thu, 16 March 23

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್