Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi News: ಉಡುಪಿ ಚಿತ್ರೀಕರಣ ಕೇಸ್: ತನಿಖಾಧಿಕಾರಿ ಬದಲಾಯಿಸಿದ ಉಡುಪಿ ಎಸ್​​​​​​ಪಿ ಅಕ್ಷಯ್

ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯ ಪ್ರಕರಣಕ್ಕೆ ಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದ್ದು, ಇದೀಗ ಪ್ರಕರಣದ ತನಿಖಾಧಿಕಾರಿಯನ್ನಾಗಿ ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಲಾಗಿದೆ.

Udupi News: ಉಡುಪಿ ಚಿತ್ರೀಕರಣ ಕೇಸ್: ತನಿಖಾಧಿಕಾರಿ ಬದಲಾಯಿಸಿದ ಉಡುಪಿ ಎಸ್​​​​​​ಪಿ ಅಕ್ಷಯ್
ನೇತ್ರಜ್ಯೋತಿ ಕಾಲೇಜು
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 29, 2023 | 3:27 PM

ಉಡುಪಿ, ಜುಲೈ 29: ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಓರ್ವ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ವಿವಾದ ಈಗ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದೆ. ಬಿಜೆಪಿ (BJP) ಪ್ರತಿಭಟನೆ ನಂತರ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಆಗಿದ್ದು, ಇದೀಗ ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಪೆ ಇನ್ಸ್​ಪೆಕ್ಟರ್​ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದೆ. ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ಉಡುಪಿ ಎಸ್​​​​​​ಪಿ ಅಕ್ಷಯ್​ ನೇಮಕ ಮಾಡಿದ್ದಾರೆ.

ಆರಂಭದಿಂದ ತನಿಖೆ ನಡೆಸಿಕೊಂಡು ಬಂದಿದ್ದ ಮಲ್ಪೆ ಇನ್ಸ್​ಪೆಕ್ಟರ್ ಮಂಜುನಾಥ್ ಗೌಡರನ್ನು ಬದಲಾಯಿಸಬೇಕೆಂಬ ಒತ್ತಾಯ ಕೇಳಿಬಂದಿತ್ತು. ಅದರಂತೆಯೇ ಇದೀಗ ಬದಲಾವಣೆ ಮಾಡಿ, ಕುಂದಾಪುರ ಡಿವೈಎಸ್​​​ಪಿ ಬೆಳ್ಳಿಯಪ್ಪರಿಗೆ ತನಿಖೆ ವಹಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸಪ್ರೆಸ್​ವೇ ಪಕ್ಕ ಸರ್ವಿಸ್ ರಸ್ತೆ ನಿರ್ಮಿಸಲು ಕೇಂದ್ರಕ್ಕೆ 150 ಕೋಟಿ ರೂ. ಪ್ರಸ್ತಾವನೆ: ಸಿಎಂ ಸಿದ್ದರಾಮಯ್ಯ

ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪ್ರಕರಣ ಮತ್ತು ಶಿರೂರು ಸ್ವಾಮೀಜಿ ಸಾವು ಪ್ರಕರಣದಲ್ಲೂ ದಕ್ಷ ತನಿಖಾಧಿಕಾರಿಯಾಗಿ ಬೆಳ್ಳಿಯಪ್ಪ ಅವರು ಕಾರ್ಯನಿರ್ವಹಿಸಿದ್ದರು.

ಚುರುಕುಗೊಂಡ ಉಡುಪಿ ಪೊಲೀಸ್​ ತನಿಖೆ

ಸದ್ಯ ಐಜಿಪಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಸಂತ್ರಸ್ತ ವಿದ್ಯಾರ್ಥಿನಿಯ ಹೇಳಿಕೆಯನ್ನು ಮಹಿಳಾ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಆಪರೇಟ್ ಆಗುತ್ತಿದ್ದ ಎಲ್ಲ ಮೊಬೈಲ್​ಗಳ ಕಾಲ್ ಡೀಟೇಲ್ಸ್​​ಗಳನ್ನು ಪತ್ತೆ ಹಚ್ಚಿದ್ದು, ಮೊಬೈಲ್​ಗಳನ್ನು ಎಫ್​ಎಸ್​ಎಲ್​ಗೆ ಕಳುಹಿಸಿದ್ದಾರೆ. ಜೊತೆಗೆ ಅನಗತ್ಯ ವ್ಯಕ್ತಿಗಳು ಕಾಂಪೌಂಡ್ ಆವರಣದಲ್ಲಿ ಓಡಾಟ ಆರೋಪ ಕೇಳಿಬಂದಿದ್ದು, ಕಾಲೇಜು ಆವರಣದಲ್ಲಿನ ಸಿಸಿ ಕ್ಯಾಮರಾಗಳ ಫೂಟೇಜ್​ನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Udupi News: ನೇತ್ರ ಜ್ಯೋತಿ ಕಾಲೇಜು ಆಡಳಿತ ಮಂಡಳಿಯವರಿಗೆ ನಿರೀಕ್ಷಣಾ ಜಾಮೀನು

ಬಿಜೆಪಿ ಅವರು ಹೆಣದ ಮೇಲೆ ರಾಜಕೀಯ ‌ಮಾಡುವವರು: ಸಿಎಂ ಸಿದ್ಧರಾಮಯ್ಯ 

ಸಿಎಂ ಸಿದ್ಧರಾಮಯ್ಯ ಈ ಕುರಿತಾಗಿ ಮಂಡ್ಯದಲ್ಲಿ ಮಾತನಾಡಿದ್ದು, ಈಗಾಗಲೇ ಎಫ್​ಐಆರ್​ ದಾಖಲು ಆಗಿದೆ. ಕಾನೂನು ಪ್ರಕಾರ ಕ್ರಮ ತೆಗದುಕೊಳ್ಳುತ್ತೇವೆ. ಅದರ ಬಗ್ಗೆ ಹೆಚ್ಚು ಮಾತನಾಡಲು ಹೋಗಲ್ಲ. ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಬಿಜೆಪಿ ಅವರು ಹೆಣದ ಮೇಲೆ ರಾಜಕೀಯ ‌ಮಾಡುವವರು ಎಂದು ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿ ವಿರುದ್ಧ JDS​ ರಾಜ್ಯಾಧ್ಯಕ್ಷ ಇಬ್ರಾಹಿಂ ಕಿಡಿ

ಬೆಂಗಳೂರಿನಲ್ಲಿ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯೆ ನೀಡಿದ್ದು, ಮಣಿಪುರ ಹೊತ್ತಿ ಉರಿಯುತ್ತಿದೆ. ಅದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಅಲ್ಲಿ ಮಹಿಳೆಯರ ಮೇಲೆ ರೇಪ್ ಆಗಿದೆ. ಇಲ್ಲಿ ಕ್ಯಾಮರಾ ಅಂತಿದ್ದೀರಾ. ಕಾಂಗ್ರೆಸ್, ಬಿಜೆಪಿಯವರು ನಮ್ಮನ್ನು ತೋರಿಸಿ ವೋಟ್ ಪಡೆದರು. ಎರಡೂ ಪಕ್ಷಗಳು ಜೆಡಿಎಸ್​​ ಕಡೆ ಬೆರಳು ಮಾಡಿ ವೋಟ್ ಪಡೆದವು. ಭಯೋತ್ಪಾದನೆ ಶುರುವಾಗುತ್ತಿದೆ ಅನ್ನೋದು ಅವರಿಗೆ ಚುನಾವಣೆ ವಿಷಯ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:21 pm, Sat, 29 July 23

ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ