AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udupi: ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ, ಅಂಗಾಂಗ ದಾನ ಮಾಡಿ 6 ಜನರಿಗೆ ಬೆಳಕು

organ donation: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಮಹಿಳೆಯ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ 6 ಜನರಿಗೆ ಬೆಳಕಾಗಿದ್ದಾರೆ.

Udupi: ಸಾವಿನಲ್ಲೂ ಸಾರ್ಥಕತೆ ಮೆರೆದ ಮಹಿಳೆ, ಅಂಗಾಂಗ ದಾನ ಮಾಡಿ 6 ಜನರಿಗೆ ಬೆಳಕು
ಮಹಿಳೆ ಅಂಗಾಂಗ ದಾನ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Feb 28, 2023 | 8:55 AM

Share

ಉಡುಪಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರೀಯಗೊಂಡಿದ್ದ ಮಹಿಳೆಯ ಅಂಗಾಂಗಳನ್ನು (Organ donation) ಕುಟುಂಬಸ್ಥರು ದಾನ ಮಾಡುವ ಮೂಲಕ 6 ಜನರಿಗೆ ಬೆಳಕಾಗಿದ್ದಾರೆ. ಬೈಂದೂರು (Baindur) ತಾಲೂಕಿನ ಉಪ್ಪುಂದದ ಶಿಲ್ಪಾ ಮಾಧವ ಕೊಡೇರಿ ಎಂಬುವರು ಫೆ.25 ರಂದು ಮಾಧ್ಯಾಹ್ನ 1:30 ಕ್ಕೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀರ್ವ ಗಾಯಗೊಂಡಿದ್ದರು. ಇವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಶಿಲ್ಪಾರನ್ನು ರಕ್ಷಿಸಲು ಎಲ್ಲ ರೀತಿಯಲ್ಲೂ ಪ್ರಯತ್ನಿಸಿದರೂ, ಚೇತರಿಸಿಕೊಳ್ಳುವ ಲಕ್ಷಣಗಳು ಕಂಡುಬರಲಿಲ್ಲ.

ಈ ಬಗ್ಗೆ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ ಮಾತನಾಡಿ ಶಿಲ್ಪಾರನ್ನು ರಕ್ಷಿಸಲು ಸಾಕಷ್ಟು ಪ್ರಯತ್ನಪಟ್ಟೆವು ಆದರೆ ಅವರು ಚೇತರಿಸಿಕೊಳ್ಳಲಿಲ್ಲ. ಹೀಗಾಗಿ ಮಾನವ ಅಂಗಾಗ ಕಸಿ ಕಾಯ್ದೆ ಅನುಸಾರ ಶಿಲ್ಪಾ ಅವರನ್ನು ಎರಡು ಬಾರಿ ಪರಿಶೀಲಿಸಿ, ರೋಗಿಯ ಮೆದಳು ನಿಷ್ಕ್ರೀಯಗೊಂಡಿದೆ ಘೋಷಿಸಿದ್ದೇವೆ ಎಂದು ಹೇಳಿದರು.

ಆಗ ಅವರ ಪತಿ ಪ್ರಸನ್ನ ಕುಮಾರ್​ ಮತ್ತು ಕುಟುಂಬದ ಸದಸ್ಯರು ಅಂಗಾಂಗಳನ್ನು ದಾನ ಮಾಡಲು ಇಚ್ಚೆ ವ್ಯಕ್ತಪಡಿಸಿದರು. ಅದರಂತೆ ಎರಡು ಮೂತ್ರಪಿಂಡಗಳು, ಯಕೃತ್​, ಚರ್ಮ ಮತ್ತು ಎರಡು ಕಾರ್ನಿಯಾಗಳನ್ನು ದಾನ ಮಾಡಿದ್ದಾರೆ. ಇದರಿಂದ 6 ಜನರ ಜೀವ ಉಳಿಸಲು ಸಹಾಯವಾಗಿದೆ.

ಯಕೃತ್​ನ್ನು ಬೆಂಗಳೂರಿನ ಅಸ್ಟರ್​​ ಸಿಎಂಐ ಆಸ್ಪತ್ರೆ, ಒಂದು ಮೂತ್ರಪಿಂಡವನ್ನು ಮಂಗಳೂರು ಎಜೆ ಆಸ್ಪತ್ರೆ, ಎರಡು ಕಾರ್ನಿಯ, ಒಂದು ಮೂತ್ರಪಿಂಡ ಮತ್ತು ಚರ್ಮವನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬಳಸಲಾಗಿದೆ. ಇನ್ನು ದಾನ ಮಾಡಿದ ಅಂಗಾಂಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್​ ಇಲಾಖೆ ಸಹಕಾರದಲ್ಲಿ ಮಂಗಳೂರಿಗೆ ಗ್ರೀನ್​ ಕಾರಿಡಾರ್​ ಮೂಲಕ ವರ್ಗಾಯಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ