AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಬಸ್​ನ​ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ಸಹಮತವಿದೆ ಎಂದ ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ

ಖಾಸಗಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ನಮ್ಮ ಸಹಮತ ಇದೆ ಎಂದು ಹೇಳುವ ಮೂಲಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್ ಅವರು ಮಾಜಿ ಸಚಿವ ಸುನೀಲ್​ ಕುಮಾರ್​ ಹೇಳಿಕೆಗೆ ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ಖಾಸಗಿ ಬಸ್​ನ​ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ಸಹಮತವಿದೆ ಎಂದ  ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ
ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್
ಕಿರಣ್ ಹನುಮಂತ್​ ಮಾದಾರ್
|

Updated on: Jun 01, 2023 | 12:26 PM

Share

ಉಡುಪಿ: ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್(Congress)​ ಪಕ್ಷವು, ಚುನಾವಣಾ ಸಂದರ್ಭದಲ್ಲಿ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣದ ಗ್ಯಾರಂಟಿ ನೀಡಿತ್ತು. ಅದರಂತೆ ಉಡುಪಿ(Udupi), ಮಂಗಳೂರು, ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳಲ್ಲಿ ಖಾಸಗಿ ಬಸ್​ನ್ನೆ ಹೆಚ್ಚಾಗಿ ಅವಲಂಭಿಸಿದ್ದಾರೆ. ಆದರೆ ಇದೀಗ ಮಾಜಿ ಸಚಿವ ಸುನೀಲ್​ ಕುಮಾರ್​ ಟ್ವೀಟ್​ ಮೂಲಕ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುವವರಿಗೂ ಉಚಿತ ಪ್ರಯಾಣ ನೀಡಬೇಕೆಂದು ಆಗ್ರಹಿಸಿದ್ದರು. ಅದರಂತೆ ಇದೀಗ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ನಮ್ಮ ಸಹಮತ ಇದೆ ಎಂದು ಹೇಳುವ ಮೂಲಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್(Kuilady Suresh Nayak) ಮತ್ತಷ್ಟು ಪುಷ್ಠಿ ನೀಡಿದ್ದಾರೆ.

ಸರಕಾರಿ ಬಸ್ಸುಗಳಿಗೆ ಕೊಡುವ ಅನುಕೂಲ ಖಾಸಗಿ ಬಸ್​ಗಳಿಗೂ ನೀಡಿ

ಹೌದು ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ನಮ್ಮ ಸಹಮತ ಇದೆ. ಕರಾವಳಿ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಖಾಸಗಿ ಬಸ್ ಸಂಚಾರ ಇದೆ. ಸರ್ಕಾರದ ವಾಗ್ದಾನದ ಪ್ರಕಾರ ಸರಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣ ಘೋಷಣೆಯಾಗಿದೆ. ಸರಕಾರಿ ಬಸ್ಸುಗಳಿಗೆ ಕೊಡುವ ಅನುಕೂಲ ಖಾಸಗಿ ಬಸ್ಸುಗಳಿಗೂ ನೀಡಿ. ಹಣದ ರೂಪದಲ್ಲಿ ಅಲ್ಲವಾದರೂ ತೆರಿಗೆ ವಿನಾಯಿತಿ, ಡೀಸೆಲ್ ಸಬ್ಸಿಡಿ ರೂಪದಲ್ಲಿ ಕೊಡಿ. ನಮಗೆ ಆಗುವ ಹೊರೆಯನ್ನು ತುಂಬಿಸಿಕೊಟ್ಟರೆ ಉಚಿತ ಪ್ರಯಾಣಕ್ಕೆ ನಾವು ಸಿದ್ದ ಎಂದಿದ್ದಾರೆ.

ಇದನ್ನೂ ಓದಿ:Free Bus Pass: ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ

ಇಲ್ಲವಾದರೆ ಖಾಸಗಿ ಬಸ್ಸುಗಳು ಓಡಾಡುವ ಜಿಲ್ಲೆಗಳ ಮಹಿಳೆಯರು ಈ ಯೋಜನೆಯಿಂದ ವಂಚಿತರಾಗುತ್ತಾರೆ. ಸರಕಾರ ನಮಗೆ ಹಣದ ರೂಪದಲ್ಲಿ ನೀಡುವುದು ಬೇಡ, ಕೆಎಸ್​ಆರ್​ಟಿಸಿ ಗೆ ಅನುಸರಿಸುವ ಮಾನದಂಡ ನಮಗೂ ಅನುಸರಿಸಿ, ಉಚಿತವಾಗಿ ವ್ಯವಸ್ಥೆ ಕಲ್ಪಿಸಲು ನಾವು ತಯಾರಿದ್ದೇವೆ. 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಖಾಸಗಿ ಬಸ್ ಇವೆ. 7 ಜಿಲ್ಲೆಗಳಲ್ಲಿ ಖಾಸಗಿ ಬಸ್ಸುಗಳು ಭಾಗಶಃ ಇವೆ. ಮಂಗಳೂರು, ಉಡುಪಿ, ಶಿವಮೊಗ್ಗ, ತುಮಕೂರು ಭಾಗದಲ್ಲಿ ಹೆಚ್ಚು ಖಾಸಗಿ ಬಸ್ಸುಗಳಿವೆ. ಸಾರ್ವಜನಿಕರಿಗೆ ತೊಂದರೆ ಆಗಬಾರದು, ನೀವು ಹೇಳಿರುವ ಉಚಿತ ಪ್ರಯಾಣ ಸಮಗ್ರ ಜಾರಿಯಾಗಬೇಕು ಎಂದರು.

ಇನ್ನು ಈ ಯೋಜನೆಯಿಂದ ಸರಕಾರಕ್ಕೆ ಹೊರೆಯಾಗಿ, ಅಭಿವೃದ್ಧಿ ಕುಂಠಿತವಾಗಬಹುದು. ಉಚಿತ ಅನ್ನುವ ವ್ಯವಸ್ಥೆ ಮುಂದೆ ದೇಶಕ್ಕೆ ಮಾರಕವೂ ಆಗಬಹುದು. ಇದರಿಂದ ಶ್ರೀಲಂಕಾ, ಪಾಕಿಸ್ತಾನ ದೇಶದ ಪರಿಸ್ಥಿತಿ ಬರುವ ಆತಂಕ ಇದೆ. ಜೊತೆಗೆ ರಾಜ್ಯದಲ್ಲಿ ಡೀಸೆಲ್ ದರ ಇತರ ರಾಜ್ಯಗಳ ಹೋಲಿಕೆಯಲ್ಲಿ ಕಡಿಮೆ ಇದೆ. ಇದೀಗ ಡೀಸೆಲ್ ದರ ಹೆಚ್ಚಳ ಆಗುವ ಆತಂಕವೂ ಇದೆ. 6 ವರ್ಷಗಳಿಂದ ಬಸ್ ದರ ಹೆಚ್ಚಳ ಆಗಿಲ್ಲ. ಎಲ್ಲವನ್ನು ಜನರ ತಲೆಯ ಮೇಲೆ ಹಾಕುವ ಅಪಾಯ ಇದೆ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ