ವಿಎಚ್​ಪಿ ಶೌರ್ಯ ಯಾತ್ರೆ, ಶರಣ್ ಪಂಪ್​ವೆಲ್​ಗೆ ಉಡುಪಿ ಪ್ರವೇಶ ನಿರ್ಬಂಧ

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶರಣ್ ಪಂಪ್​ವೆಲ್​ ಅವರು ಷರತ್ತು ಬದ್ಧ ಜಾಮೀನನ ಮೇಲೆ ಹೊರಗಿದ್ದಾರೆ. ಇದೀಗ ನಡೆಯಲಿರುವ ಹಿಂದೂ ಸಮಾವೇಶಕ್ಕೆ ಆಗಮಿಸಿ ಪ್ರಚೋದನಕಾರಿ ಹೇಳಿಕೆ ನೀಡುವ ಸಾಧ್ಯತೆ ಹಿನ್ನೆಲೆ ಉಡುಪಿ ಜಿಲ್ಲೆಗೆ ಶರಣ್ ಪಂಪ್​ವೆಲ್ ಪ್ರವೇಶವನ್ನು ಪೊಲೀಸರು ನಿರ್ಬಂಧಿಸಿದ್ದಾರೆ.

ವಿಎಚ್​ಪಿ ಶೌರ್ಯ ಯಾತ್ರೆ, ಶರಣ್ ಪಂಪ್​ವೆಲ್​ಗೆ ಉಡುಪಿ ಪ್ರವೇಶ ನಿರ್ಬಂಧ
ಶರಣ್ ಪಂಪ್​ವೆಲ್
Follow us
ಪ್ರಜ್ವಲ್ ಅಮೀನ್​, ಉಡುಪಿ
| Updated By: Rakesh Nayak Manchi

Updated on: Oct 10, 2023 | 3:21 PM

ಉಡುಪಿ, ಅ.10: ಚಿತ್ರದುರ್ಗದಲ್ಲಿ ಆರಂಭವಾದ ವಿಶ್ವ ಹಿಂದೂ ಪರಿಷತ್- ಬಜರಂಗದಳ (VHP) ಬೃಹತ್ ಶೌರ್ಯ ಯಾತ್ರೆಯು ಉಡುಪಿಯಲ್ಲಿ ನಡೆಯುವು ಬೃಹತ್ ಹಿಂದೂ ಸಮಾಜೋತ್ಸವದ ಮೂಲಕ ಸಮಾರೋಪಗೊಳ್ಳಲಿದೆ. ಆದರೆ, ಈ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆ ವಿಎಚ್​ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್​ವೆಲ್ (Sharan Pumpwell) ಅವರಿಗೆ ಉಡುಪಿ (Udupi) ಜಿಲ್ಲಾ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ವಿಎಚ್​ಪಿ ಅಸ್ತಿತ್ವಕ್ಕೆ ಬಂದು 60 ವರ್ಷ ಪೂರ್ಣ ಹಿನ್ನೆಲೆ ಚಿತ್ರದುರ್ಗದಿಂದ ಆರಂಭಿಸಲಾದ ಶೌರ್ಯ ಯಾತ್ರೆ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿದೆ. ಈ ಯಾತ್ರೆ ಇಂದು ಸಂಜೆ ಉಡುಪಿಯಲ್ಲಿ ಬೃಹತ್ ಹಿಂದೂ ಸಮಾಜೋತ್ಸವದ ಮೂಲಕ ಸಮಾರೋಪಗೊಳ್ಳಳಿದೆ. ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದೆ.

ಇತ್ತೀಚೆಗಷ್ಟೇ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯ ಶೌಚಾಶಲಯದಲ್ಲಿರುವ ವಿಡಿಯೋ ಮಾಡಿದ ಪ್ರಕರಣ ಸಂಬಂಧದಲ್ಲಿ ಶರಣ್ ಪಂಪ್​ವೆಲ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು.

ಇದನ್ನೂ ಓದಿ: ಶಿವಮೊಗ್ಗ ಘಟನೆ ಮಂಗಳೂರಿನಲ್ಲಿ ಆಗುತ್ತಿದ್ದರೆ ದಂಗೆಕೋರರ ಮೈ ಹುಡಿಯಾಗುತ್ತಿತ್ತು: ಶರಣ್ ಪಂಪ್​ವೆಲ್

ಸದ್ಯ ಷರತ್ತುಬದ್ದ ಜಾಮೀನಿನಲ್ಲಿರುವ ಶರಣ್ ಪಂಪ್​ವೆಲ್ ಅವರು ಇಂದು ಮತ್ತೆ ಉಡುಪಿ ಸಮಾವೇಶದಲ್ಲಿ ಭಾಗಿಯಾದರೆ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಇದೆ. ಒಂದೊಮ್ಮೆ ಜಾಮೀನು ನಿಯಮ ಉಲ್ಲಂಘನೆ ಮಾಡಿ ಭಾಷಣ ಮಾಡಿದರೆ ಅವರ ಬಂಧನ ಆಗುವ ಸಾಧ್ಯತೆಯೂ ಇದೆ.

ಉಡುಪಿ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಿ ಪೊಲೀಸರು ಆದೇಶ ಹೊರಡಿಸಿದ ಬಗ್ಗೆ ತಿಳಿದ ಶರಣ್ ಪಂಪ್​ವೆಲ್ ಅವರು ಹೆಜಮಾಡಿಯಿಂದ ಮಂಗಳೂರಿಗೆ ವಾಪಸ್ ಆಗಿದ್ದಾರೆ. ವೇದಿಕೆಯ ಅತಿಥಿಗಳ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಸಮಾವೇಶದಲ್ಲಿ ಶರಣ್ ಪಂಪ್​ವೆಲ್ ಅವರು ಭಾಗಿಯಾಗಬೇಕಿದ್ದರು.

ಜಿಲ್ಲೆ ಬಿಟ್ಟು ಹೊರ ಹೋಗದಂತೆ ಷರತ್ತು

ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣ ಸಂಬಂಧ ಶರಣ್ ಪಂಪ್​ವೆಲ್ ಅವರಿಗೆ ಉಡುಪಿ ಜಿಲ್ಲಾ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಸ್ವ ವಿಳಾಸದ ದಕ್ಷಿಣ ಕನ್ನಡ ಜಿಲ್ಲೆ ಬಿಟ್ಟು ಹೊರ ಹೋಗದಂತೆ ಷರತ್ತು ವಿಧಿಸಿತ್ತು. ಅದರಂತೆ ಶರಣ್ ಪಂಪ್ ವೆಲ್ ಅವರಿಗೆ ಉಡುಪಿ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಉಡುಪಿ‌ ಪ್ರವೇಶ ಮಾಡಿದ್ದಲ್ಲಿ ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ನವೆಂಬರ್ 29ರಿಂದ ರೇಣುಕಾಚಾರ್ಯ ತಂಡದಿಂದಲೂ ಒಂದು ಅಭಿಯಾನ!
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಬಂಡೀಪುರದಲ್ಲಿ ಆನೆ ಮರಿಗೆ ಹೊಂಚು ಹಾಕಿದ್ದ ಹುಲಿಯನ್ನು ಓಡಿಸಿದ ತಾಯಾನೆ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್