ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ವಿವರ ಸಂಗ್ರಹಿಸಲು ರಾಷ್ಟ್ರೀಯ ಮಹಿಳಾ ಆಯೋಗದ (National Commission for Women) ಸದಸ್ಯೆ ಖುಷ್ಬೂ ಸುಂದರ್ (Khushbu Sundar) ನಗರಕ್ಕೆ ಆಗಮಿಸಿದ್ದಾರೆ. ಉಡುಪಿ ಐಬಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ಜೊತೆ ಖುಷ್ಬೂ ಸುಂದರ್ ಮಹತ್ವದ ಸಭೆ ನಡೆಸಿದ್ದು, ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ ಕೂಡ ಹಾಜರಿದ್ದಾರೆ.
ಕಾಲೇಜಿನಲ್ಲಿ ನಡೆದ ಅನುಚಿತ ಘಟನೆಯ ಮಹಿಳಾ ಆಯೋಗದ ಪರವಾಗಿ ಖುಷ್ಬೂ ಮಾಹಿತಿ ಪಡೆದಿದ್ದಾರೆ. ಪೊಲೀಸರು ದಾಖಲಿಸಿಕೊಂಡಿರುವ ಎಫ್ಐಆರ್ನ ವಿವರವನ್ನೂ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಡುಪಿಗೆ ತೆರಳಿರುವ ಬಗ್ಗೆ ಟ್ವೀಟ್ ಮಾಡಿರುವ ಖುಷ್ಬೂ ಸುಂದರ್, ಉಡುಪಿಯಲ್ಲಿ ತನಿಖೆ ನಡೆಯುತ್ತಿದೆ. ಪೊಲೀಸರನ್ನು ಭೇಟಿ ಮಾಡಿ ಪ್ರಾಥಮಿಕ ಮಾಹಿತಿ ಪಡೆಯಲಾಗಿದೆ. ವಿಭಿನ್ನ ಕಥೆಗಳು, ವಿಭಿನ್ನ ಸಿದ್ಧಾಂತಗಳು, ವಿಭಿನ್ನ ತೀರ್ಮಾನಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರದಾಡುತ್ತಿವೆ. ನಕಲಿ ವಾಟ್ಸ್ಆ್ಯಪ್ ಫಾರ್ವರ್ಡ್‌ಗಳು ನಿಲ್ಲಬೇಕು. ನಾನು ದೆಹಲಿಯಿಂದ ಉಡುಪಿಗೆ ತೆರಳಿದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಥವರ ಡಿಎನ್ಎಯಲ್ಲಿ ಹತಾಶೆ ಕಾಣಿಸುತ್ತಿದೆ ಎಂದು ಉಲ್ಲೇಖಿಸಿದ್ದಾರೆ.
In Udupi. Investigations are on. Meeting the police now and getting first hand report. Different stories, different theories, different conclusions, fake what’s app forwards needs to stop. And to some idiots, I flew in from delhi. Clear story of stupidity at its best. Just speak…
— KhushbuSundar (@khushsundar) July 26, 2023
ಉಡುಪಿ ಭೇಟಿಗೆ ಕೋಮು ಬಣ್ಣ ನೀಡಲು ಯತ್ನಿಸುತ್ತಿರುವವರು ರಾಷ್ಟ್ರೀಯ ಮಹಿಳಾ ಆಯೋಗವು ಸ್ವಾಯತ್ತ ಸಂಸ್ಥೆ ಎಂಬುದನ್ನು ಹೇಳಲಿ. ನಾವು ಭಾರತ ಸರ್ಕಾರದ ಅಡಿಯಲ್ಲಿ ಈ ದೇಶದ ಮಹಿಳೆಯರಿಗಾಗಿ ಕೆಲಸ ಮಾಡುತ್ತೇವೆ. ರಾಷ್ಟ್ರೀಯ ಮಹಿಳಾ ಆಯೋಗವು ರಾಜಕೀಯ ಪಕ್ಷದ ಅಡಿಯಲ್ಲಿ ಕೆಲಸ ಮಾಡುವುದಿಲ್ಲ. ಯಾವುದೇ ಜಾತಿ, ಧರ್ಮ ಮತ್ತು ಸಾಮಾಜಿಕ ಹಿನ್ನೆಲೆಯ ಮಹಿಳೆಯರನ್ನು ರಕ್ಷಿಸಲು ಭಾರತ ಸರ್ಕಾರ ಬದ್ಧವಾಗಿದೆ ಎಂದು ಉಡುಪಿಗೆ ಭೇಟಿ ನೀಡಿದ ನಂತರ ಖುಷ್ಬೂ ಹೇಳಿದ್ದಾರೆ.
VIDEO | “Those who are trying to give a communal colour to this, let me tell them that NCW is an autonomous body. We work for the women of this country under the Government of India, NCW does not work under a political party. Government of India is committed to protect women of… pic.twitter.com/hqAD6gmb55
— Press Trust of India (@PTI_News) July 26, 2023
ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ಕ್ರಮಕೈಗೊಂಡಿದೆ ಎಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ರಾಜಕೀಯ ಕಾರಣಕ್ಕಾಗಿ ಕೆಲವರು ಏನೇನೋ ಹೇಳುತ್ತಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Udupi New: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ, ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲು
ಮಹಿಳಾ ಆಯೋಗದವರು ಭೇಟಿ ನೀಡಿದ್ದಾರೆ. ಅವರು ಏನು ಹೇಳುತ್ತಾರೆ ನೋಡೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ಚಿತ್ರೀಕರಣ ಮಾಡಿದ ಪ್ರಕರಣ ರಾಜ್ಯದಲ್ಲಿ ರಾಜಕೀಯ ಆಯಾಮ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:37 pm, Wed, 26 July 23