AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶ

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ. ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72 ) ಅಲ್ಪಕಾಲದ ಅಸೌಖ್ಯ ವಿಧಿವಶ. ಜುಲೈ.8ರ ರಾತ್ರಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾಗಿದ್ದು, ಇವರು ಜ್ಯೋತಿಷ್ಯ, ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದರು.

ಪೇಜಾವರ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶ
ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Jul 09, 2024 | 10:24 PM

Share

ಉಡುಪಿ, ಜು.09: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿಧಿವಶರಾಗಿದ್ದಾರೆ. ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ಟ (72 ) ಅಲ್ಪಕಾಲದ ಅಸೌಖ್ಯ ವಿಧಿವಶ. ಜುಲೈ.8ರ ರಾತ್ರಿ ಪೇಜಾವರ ಮಠದ ಅತಿಥಿಗೃಹದಲ್ಲಿ ನಿಧನರಾಗಿದ್ದು, ಪತ್ನಿ, ಓರ್ವ ಪುತ್ರ, ಸಹೋದರ ಸಹೋದರಿಯರು ಹಾಗೂ ಅನೇಕ ಮಂದಿ ಶಿಷ್ಯರನ್ನು ಅಗಲಿದ್ದಾರೆ.

ಜ್ಯೋತಿಷ್ಯ, ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್, ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ವಿಧಿವಶರಾಗಿದ್ದಾರೆ.

ಇನ್ನು ಅವರ ಅಪೇಕ್ಷೆಯಂತೆ ಶರೀರವನ್ನು ಮಣಿಪಾಲದ ಕೆಎಂಸಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಹಸ್ತಾಂತರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Tue, 9 July 24