ನಾಡಿನಾದ್ಯಂತ ವಿಜಯದಶಮಿ ಸಂಭ್ರಮ: ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಹರಿದುಬಂದ ಭಕ್ತಸಾಗರ

ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದ್ದು, ಸಾಗರ ಆನೆ ಬೆಳ್ಳಿ ಅಂಬಾರಿ ಹೊರಲಿದೆ.

ನಾಡಿನಾದ್ಯಂತ ವಿಜಯದಶಮಿ ಸಂಭ್ರಮ: ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಹರಿದುಬಂದ ಭಕ್ತಸಾಗರ
ಕೊಲ್ಲೂರು ಮೂಕಾಂಬಿಕಾ ದೇವಾಲಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 05, 2022 | 3:53 PM

ಉಡುಪಿ: ಜಿಲ್ಲೆಯಲ್ಲಿ ವಿಜಯದಶಮಿ ಸಂಭ್ರಮ ಹಿನ್ನೆಲೆ ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ಭಕ್ತಸಾಗರ ಹರಿದುಬರುತ್ತಿದೆ.  ವಿಜಯದಶಮಿ ಹಿನ್ನಲೆ ಮೂಕಾಂಬಿಕಾ ಕ್ಷೇತ್ರದಲ್ಲಿ ಅಕ್ಷರಭ್ಯಾಸ ಸಂಪನ್ನವಾಗಿದ್ದು, ಕೊಲ್ಲೂರಿನಲ್ಲಿ ನವರಾತ್ರಿ ವೈಶಿಷ್ಟ್ಯ ಎಂದರೆ ವಿದ್ಯಾರಂಭ. ಚಿಕ್ಕ ಮಕ್ಕಳಿಗೆ ಇಲ್ಲಿನ ಸರಸ್ವತಿ ಗುಡಿ ಮುಂದೆ ವಿದ್ಯಾರಂಭ ಮಾಡಿಸಿದರೆ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ ಎನ್ನುವ ನಂಬಿಕೆ. ದೇವರ ಸನ್ನಿಧಿಯಲ್ಲಿ ಮಗುವಿಗೆ ವಿದ್ಯಾದೇವತೆ ಸರಸ್ವತಿ ಹೆಸರನ್ನು ಅಕ್ಕಿಯಲ್ಲಿ ಬರೆಯುವ ಮೂಲಕ ಅಕ್ಷರಭ್ಯಾಸ ನಡೆಯುತ್ತೆ. ಸಾವಿರಾರು ಭಕ್ತರು ದೇವಿ ಸನ್ನಿಧಾನದಲ್ಲಿ ಮಕ್ಕಳಿಗೆ ಅಕ್ಷರಭ್ಯಾಸ ನಡೆಸಿದರು. ಕೋವಿಡ್ ಹಿನ್ನಲೆಯಲ್ಲಿ ಕಳೆದ ಎರಡು ವರ್ಷಗಳಿಂದ ವಿಜಯದಶಮಿಗೆ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ಈ ಹಿನ್ನಲೆ ಈ ಬಾರಿ ದೇವಾಲಯಕ್ಕೆ ಕೇರಳ ಸೇರಿದಂತೆ ದಕ್ಷಿಣ ಭಾರತದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.

ಮಲೆನಾಡಿನ ಜಂಬೂ ಸವಾರಿಗೆ ಕ್ಷಣಗಣನೆ

ಶಿವಮೊಗ್ಗ: ವಿಜಯದಶಮಿ ಸಂಭ್ರಮ ಹಿನ್ನೆಲೆ ಮಲೆನಾಡಿನ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ನಂದಿಧ್ಜಜ ಕಂಬಕ್ಕೆ ಡಿಸಿ ಡಾ. ಸೇಲ್ವ ಕುಮಾರ್, ಮೇಯರ್ ಸುನಿತಾ ಅಣ್ಣಪ್ಪ, ಮಾಜಿ ಸಚಿವ ಈಶ್ವರಪ್ಪ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಜಂಬೂ ಸವಾರಿಗೆ ಚಾಲನೆ ನೀಡಿದರು. ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದ್ದು, ಸಾಗರ ಆನೆ ಬೆಳ್ಳಿ ಅಂಬಾರಿ ಹೊರಲಿದೆ. ಕೋಟೆ ಆಂಜನೇಯ ದೇವಸ್ಥಾನದಿಂದ ವಿನೋಬ ನಗರದ ಫ್ರೀಡಂ ಪಾರ್ಕ್​ನ ಮೈದಾನದ ಬನ್ನಿ ಮುಡಿಯುವ ಸ್ಥಳದವರೆಗೆ ಜಂಬೂ ಸವಾರಿ ನಡೆಯಲಿದೆ. ಫ್ರೀಡಂ ಪಾರ್ಕ್ ಮೈದಾನದಲ್ಲಿ ಸಾಂಪ್ರದಾಯಿಕ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯುತ್ತದೆ. ಈಗಾಗಲೇ ಬನ್ನಿ ಮುಡಿಯುವ ಮತ್ತು ರಾವಣ ದಹನಕ್ಕೆ ಎಲ್ಲ ಸಿದ್ಧತೆ ಮಾಡಲಾಗಿದೆ. ಶಿವಮೊಗ್ಗ ತಹಸೀಲ್ದಾರ್ ನಾಗರಾಜ್ ಮತ್ತು ಪಾಲಿಕೆ ಆಯುಕ್ತ ಮಾಯಣ್ಣಗೌಡ ಸಿದ್ಧತೆ ಪರಿಶೀಲಿಸಿದರು.

ನಾಡಿನಾದ್ಯಂತ ವಿಜಯದಶಮಿ ಹಿನ್ನೆಲೆಯಲ್ಲಿ ಶಮಿ ಪೂಜೆ

ಹಾಸನ: ನಾಡಿನಾದ್ಯಂತ ವಿಜಯದಶಮಿ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಮಠದ ಮೆಳಿಯಮ್ಮ ದೇಗುಲದಲ್ಲಿ ಸಂಭ್ರಮದ ಬನ್ನಿ ಪೂಜೆ ನೆರವೆರಿಸಲಾಯಿತು. ಆದಿ ಚುಂಚನಗಿರಿ ಶ್ರಿ ನಿರ್ಮಲಾನಂದನಾಥ ಸ್ವಾಮಿಜಿಯವರಿಂದ ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿದರು. ಸಂಭ್ರಮದ ಶಮಿ ವೃಕ್ಷಪೂಜೆಯಲ್ಲಿ ಸಹಸ್ರಾರು ಜನರು ಭಾಗಿಯಾದರು. ಮಠದ ಅಧೀನಕ್ಕೊಳಪಟ್ಟ ಮೆಳಿಯಮ್ಮ ದೇಗುಲದ ಆವರಣದಲ್ಲಿ ಕಾರ್ಯಕ್ರಮ ನಡೆಯುತ್ತದೆ.

ದಸರಾ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಬೃಹತ್ ಶೋಭಾ ಯಾತ್ರೆ

ದಾವಣಗೆರೆ: ದಸರಾ ಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ತಾಯಿ ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ಸಂಸದ ಜಿ.ಎಂ.ಸಿದ್ದೇಶ್ವರ ಶೋಭಾಯಾತ್ರೆಗೆ ಚಾಲನೆ ನೀಡಿದರು. ನಗರದ ಬೇತೂರ ರಸ್ತೆಯಿಂದ ಆರಂಭವಾದ ಶೋಭಾಯಾತ್ರೆ, ಬೀರಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಸಾರ್ವಜನಿಕ ಬನ್ನಿ‌ ಮುಡಿಯುವ ಮೂಲಕ‌ ಮುಕ್ತಾಯಗೊಳುತ್ತದೆ. ಬೃಹತ್ ಶೋಭಾ ಯಾತ್ರೆಯಲ್ಲಿ ವಿವಿಧ‌ ಕಲಾ ತಂಡಗಳು ಸೇರಿದಂತೆ ನೂರಾರು ಜನ ಭಾಗಿಯಾಗಿದಾರೆ. ದಸರಾ ಹಬ್ಬದ ಪ್ರಯುಕ್ತ ಬನ್ನಿ ಮಹಾಂಕಾಳಿ ದೇವಸ್ಥಾನದಲ್ಲಿ ಪತ್ನಿ ಸಹಿತರಾಗಿ ಬಂದು ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶೇಷ ಪೂಜೆ ಸಲ್ಲಿಸಿದರು. ಬನ್ನಿ‌ ಮರಕ್ಕೆ ಹಸಿರು ಸೀರೆ ಉಡಿಸಿ ರೇಣುಕಾ ಚಾರ್ಯ‌ ಪತ್ನಿ ಮಂಗಳಾರುತಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:52 pm, Wed, 5 October 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ