ಕೊಪ್ಪಳ, ಉಡುಪಿ ಜೆಲ್ಲೆಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ; ಇಲ್ಲಿದೆ ವಿವರ
ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಯಶಸ್ವಿಯಾಗಿದೆ. ಇದೇ ವೇಳೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ‘ಕೇಂದ್ರ ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶದಿಂದ ಭಾರತದಾದ್ಯಂತ "ವಿಕಸಿತ ಭಾರತ ಸಂಕಲ್ಪ ಯಾತ್ರೆ" ನಡೆಯುತ್ತಿದ್ದು, ಸರ್ಕಾರ ಮನೆ ಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದೆ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು
ಕೊಪ್ಪಳ, ಉಡುಪಿ, ಡಿ.07: ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆ (Viksit Bharat Sankalp Yatra)ಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸಿದೆ. ಇಂದು(ಡಿ.07) ಕೊಪ್ಪಳ(Koppala) ಹಾಗೂ ಉಡುಪಿ(Udupi) ಜಿಲ್ಲೆಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನವು ಯಶಸ್ವಿಯಾಗಿ ಜರುಗಿದೆ.
ಕೊಪ್ಪಳದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಈ ಯಾತ್ರೆ ಇದಾಗಿದ್ದು, ರಾಜ್ಯಾದ್ಯಂತ ಸಂಚರಿಸುತ್ತಿದೆ. ಅದರಂತೆ ಇಂದು ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಿತು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀದೇವಿ ಚಲವಾದಿ ಕಾರ್ಯಕ್ರಮ ಉದ್ಘಾಟಿಸಿದರು. ಮಹಾರಾಷ್ಟ್ರ ಬ್ಯಾಂಕ್ ನ ಕೊಪ್ಪಳ ಶಾಖೆಯ ವ್ಯವಸ್ಥಾಪಕ ವೆಂಕಟೇಶ ಅವರು ಸಾರ್ವಜನಿಕರಿಗೆ ಪ್ರತಿಜ್ಞಾ ವಿಧಿ ಬೊಧಿಸಿದರು. ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಉಡುಪಿ ಜಿಲ್ಲೆಯ ಬೊಮ್ಮರಬೆಟ್ಟು ಗ್ರಾಮ ಪಂಚಾಯತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಇನ್ನು ಉಡುಪಿ ಜಿಲ್ಲೆಯ ಬೊಮ್ಮರಬೆಟ್ಟು ಗ್ರಾಮ ಪಂಚಾಯತಿಯಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಯಶಸ್ವಿಯಾಗಿದೆ. ಇದೇ ವೇಳೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ‘ಕೇಂದ್ರ ಸರ್ಕಾರದ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಉದ್ದೇಶದಿಂದ ಭಾರತದಾದ್ಯಂತ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ನಡೆಯುತ್ತಿದ್ದು, ಸರ್ಕಾರ ಮನೆ ಬಾಗಿಲಿಗೆ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡುತ್ತಿದೆ, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಶಾಸಕರು ಫಲಾನುಭವಿಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಎಲ್ ಪಿ ಜಿ ಸಂಪರ್ಕವನ್ನು ವಿತರಿಸಿದರು.
ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಪ್ರಮುಖ- ಎನ್ ಕೆ ಲೋಕನಾಥ್
ಮೈಸೂರು: ಸರ್ಕಾರದ ಸೌಲಭ್ಯಗಳ ಮಾಹಿತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಮಾಧ್ಯಮಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಅವರು ತಿಳಿಸಿದರು. ಮೈಸೂರಿನಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪತ್ರಕರ್ತರ ಸಂಘ, ಮೈಸೂರು ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಮೈಸೂರು ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ವಾರ್ತಾಲಾಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ಸರ್ಕಾರದ ಕಾರ್ಯಕ್ರಮಗಳು ಅರ್ಹ ಫಲಾನುಭವಿಗೆ ತಲುಪಲು ಮಾದ್ಯಮಗಳ ಪಾತ್ರ ಬಹಳ ಮುಖ್ಯ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ದೊರೆಯಬೇಕು. ಇಂತಹ ಮಾಹಿತಿ ನೀಡುವ ಕಾರ್ಯಕ್ರಮಗಳು ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ನಡೆಯಬೇಕು ಎಂದರು.
ಇದನ್ನೂ ಓದಿ:ಪ್ರಧಾನಿ ಮೋದಿ ಚಾಲ್ತಿ ನೀಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಶೇಷತೆಗಳು, ಅದರ ಪ್ರಯೋಜನಗಳು ಏನು?
ಇದೇ ವೇಳೆ ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇಶಕರಾದ ಎಸ್ ಜಿ ರವೀಂದ್ರ ಮಾತನಾಡಿ ‘ಕೇಂದ್ರ ಸರ್ಕಾರವು ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪ್ರಚಾರ ಮಾಡಲು ರಾಜ್ಯದಲ್ಲಿ 49 ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನಗಳು ಸಂಚಾರ ಮಾಡುತ್ತಿವೆ. ಡಿಸೆಂಬರ್ 09 ರಂದು ಮಾನ್ಯ ಪ್ರಧಾನ ಮಂತ್ರಿಯವರು ಕೋಲಾರ ಮತ್ತು ತುಮಕೂರು ಜಿಲ್ಲೆಯ ಜನರೊಂದಿಗೆ ವರ್ಚುಯಲ್ ಸಭೆಯ ಮೂಲಕ ಸಂವಾದ ನಡೆಸುತ್ತಾರೆ ಎಂದು ಹೇಳಿದರು.
ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಮಾತನಾಡಿ ಪ್ರಧಾನಮಂತ್ರಿಯವರ ಜನಧನ್ ಯೋಜನೆಯ ಶೂನ್ಯ ಬ್ಯಾಲೆನ್ಸ್ ಬ್ಯಾಂಕ್ ಖಾತೆ ಹೊಂದಿದ್ದು, ಸಹಜ ಸಾವು ಉಂಟಾದರೆ 30 ಸಾವಿರ, ಅಪಘಾತದ ಸಾವು ಆದರೆ 1 ಲಕ್ಷ ರೂ ವಿಮೆ ದೊರೆಯುತ್ತದೆ. ಈ ಬಗ್ಗೆ ಮಾಹಿತಿ ನೀಡಿ ಸೌಲಭ್ಯ ದೊರೆಯುವಂತೆ ಮಾಡಿದ್ದು ಮಾಧ್ಯಮಗಳು ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ