ಉಡುಪಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕೆಂದುಕೊಂಡಿದ್ದೀರಾ? ಹಾಗಿದ್ದರೆ ತುಸು ಕಾಯುವುದು ಅನಿವಾರ್ಯ, ಕಾರಣ ಇಲ್ಲಿದೆ

ಸದ್ಯ ಇರುವ ಎಲ್ಲಾ ನಿರ್ಬಂಧಗಳು ಸೆಪ್ಟೆಂಬರ್ 15 ರವರೆಗೆ ಮುಂದುವರಿಯುತ್ತವೆ. ಅದರ ನಂತರ ನಾವು ಆ ಸಮಯದಲ್ಲಿ ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಯನ್ನು ಅವಲಂಬಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ವಿದ್ಯಾ ಕುಮಾರಿ ಹೇಳಿದ್ದಾರೆ. ಆಗುಂಬೆ ಘಾಟ್‌ನಲ್ಲಿ ವಾಹನ ಸಂಚಾರ ನಿರ್ಬಂಧ ಹಿಂತೆಗೆದುಕೊಳ್ಳುವ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಜತೆ ಚರ್ಚಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಉಡುಪಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಬೇಕೆಂದುಕೊಂಡಿದ್ದೀರಾ? ಹಾಗಿದ್ದರೆ ತುಸು ಕಾಯುವುದು ಅನಿವಾರ್ಯ, ಕಾರಣ ಇಲ್ಲಿದೆ
ಉಡುಪಿಯ ಸಮುದ್ರ ತೀರದ ನೋಟ (ಸಂಗ್ರಹ ಚಿತ್ರ)

Updated on: Sep 05, 2023 | 9:42 PM

ಉಡುಪಿ, ಸೆಪ್ಟೆಂಬರ್ 5: ಪ್ರಮುಖ ಪ್ರವಾಸಿ ತಾಣಗಳು, ಕಡಲತೀರಗಳು ಮತ್ತು ಇತರ ಅಪಾಯದ ಸ್ಥಳಗಳಿಗೆ (Udupi Tourist Spots) ಪ್ರವಾಸಿಗರು ಭೇಟಿ ನೀಡುವುದಕ್ಕೆ ಉಡುಪಿ (Udupi) ಜಿಲ್ಲಾಡಳಿತ ವಿಧಿಸಿರುವ ನಿರ್ಬಂಧವನ್ನು ಸೆಪ್ಟೆಂಬರ್ 15 ರವರೆಗೆ ವಿಸ್ತರಿಸಲಾಗಿದೆ. ಸೆಪ್ಟಂಬರ್ ಮೊದಲ ವಾರದಲ್ಲಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಂಗಳವಾರ ತಿಳಿಸಿದ್ದಾರೆ.

ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಸ್ತರಣೆ ಬಗ್ಗೆ ಅಧಿಕಾರಿಗಳೊಂದಿಗೂ ಚರ್ಚಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಜತೆಗೆ, ಆಗುಂಬೆ ಘಾಟ್‌ನಲ್ಲಿ ವಾಹನ ಸಂಚಾರ ನಿರ್ಬಂಧ ಹಿಂತೆಗೆದುಕೊಳ್ಳುವ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಜತೆ ಚರ್ಚಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ಇರುವ ಎಲ್ಲಾ ನಿರ್ಬಂಧಗಳು ಸೆಪ್ಟೆಂಬರ್ 15 ರವರೆಗೆ ಮುಂದುವರಿಯುತ್ತವೆ. ಅದರ ನಂತರ ನಾವು ಆ ಸಮಯದಲ್ಲಿ ಚಾಲ್ತಿಯಲ್ಲಿರುವ ಹವಾಮಾನ ಪರಿಸ್ಥಿತಿಯನ್ನು ಅವಲಂಬಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ವಿದ್ಯಾ ಕುಮಾರಿ ಹೇಳಿದ್ದಾರೆ.

ಇದನ್ನೂ ಓದಿ: Udupi News: ರೀಲ್ಸ್​ ಮಾಡಲು ಹೋಗಿ ಜಲಪಾತಕ್ಕೆ ಬಿದ್ದು ಯುವಕ ಸಾವು, ನೀರಿಗೆ ಬೀಳುತ್ತಿರುವ ದೃಶ್ಯ ಗೆಳೆಯನ ಮೊಬೈಲ್​ನಲ್ಲಿ ಸೆರೆ

ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ಜುಲೈನಲ್ಲಿ ಸಂಭವಿಸಿತ್ತು. ಇಂಥ ಹಲವು ವಿದ್ಯಮಾನಗಳ ಬಳಿಕ ಎಚ್ಚೆತ್ತುಕೊಂಡಿದ್ದ ಜಿಲ್ಲಾಡಳಿತ ಕಡಲತೀರಗಳು ಮತ್ತು ಇತರ ಅಪಾಯದ ಸ್ಥಳಗಳಿಗೆ ಪ್ರವಾಸಿಗರು ಭೇಟಿ ನೀಡುವುದಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿತ್ತು.

ಇನ್ನಷ್ಟು ಉಡುಪಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us